![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 25, 2020, 6:07 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆಗೆ ಹೊಸ ಮುಖಗಳ ಹುಡುಕಾಟ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು “ದೇವರಾಜ ಅರಸು ಮಾದರಿ’ಯನ್ನು ಪಾಲಿಸಲು ಸಿದ್ಧರಾಗಿದ್ದಾರೆ. ಈ ಪ್ರಯೋಗಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಯಾವುದೇ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ಎದುರಾ ದರೂ ಅಭ್ಯರ್ಥಿಗಳು ಸಿದ್ಧರಾಗಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ರಾಜ್ಯದಲ್ಲಿ 65ರಿಂದ 70 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ಮುಂದಾಗಿದ್ದಾರೆ. ಈ ಕುರಿತು ಜಿಲ್ಲಾಧ್ಯಕ್ಷರಿಗೆ ಸಂದೇಶ ರವಾನೆಯಾಗಿದೆ ಎಂದು ತಿಳಿದು ಬಂದಿದೆ.
ಖಾಲಿ ಕ್ಷೇತ್ರಗಳಿಗೆ ಆದ್ಯತೆ
ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರಸ್ತುತ 64 ಕಾಂಗ್ರೆಸ್ ಶಾಸಕರಿದ್ದಾರೆ. ಉಳಿದೆಡೆ ಮಾಜಿ ಶಾಸಕರು ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ಎನ್ನುವುದರ ಮಾಹಿತಿ ಪಡೆಯಲು ಡಿಕೆಶಿ ನಿರ್ಧರಿಸಿದ್ದಾರೆ. ಸೋತವರು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದ್ದಾರೆ. ಜತೆಗೆ ಕಳೆದ ಚುನಾವಣೆಯಲ್ಲಿ 20 ಸಾವಿರಕ್ಕಿಂತ ಅಧಿಕ ಮತಗಳಿಂದ ಸೋತವರು ಹಾಗೂ ಸತತವಾಗಿ ಮೂರು ಚುನಾವಣೆಗಳಲ್ಲಿ ಪರಾಭವಗೊಂಡವರಿಗೂ ಟಿಕೆಟ್ ನೀಡದಿರಲು ಆಲೋಚಿಸಿದ್ದಾರೆ ಎಂದು ತಿಳಿದು ಬಂದಿದೆ.
ದೇಶದಲ್ಲಿ ಕಾಂಗ್ರೆಸ್ ಇಬ್ಭಾಗವಾದ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ನ ಬಹುತೇಕ ಹಿರಿಯ ನಾಯಕರು ವೀರೇಂದ್ರ ಪಾಟೀಲ್ ನೇತೃತ್ವದ ಸಂಸ್ಥಾ ಕಾಂಗ್ರೆಸ್ ಜತೆಗೆ ಗುರುತಿಸಿಕೊಂಡಿದ್ದರು. ಆಗ ರಾಜ್ಯದಲ್ಲಿ ಇಂದಿರಾ ಕಾಂಗ್ರೆಸ್‌ನ ನೇತೃತ್ವ ವಹಿಸಿಕೊಂಡಿದ್ದ ಡಿ. ದೇವರಾಜ್ ಅರಸು ಅವರು ಚುನಾವಣೆಯಲ್ಲಿ ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದ್ದರು. ಅದರಲ್ಲಿ ಯಶಸ್ವಿಯಾದ ಪರಿಣಾಮ ಸುಮಾರು 50ಕ್ಕೂ ಹೆಚ್ಚು ಹೊಸಬರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
ಮಾಧ್ಯಮ ಜತೆಯೂ ಕೆಲವರು ಸೇರಿಕೊಂಡಿದ್ದಾರೆ: ರಮ್ಯಾ
ಬೆಂಗಳೂರು: ಕಾಂಗ್ರೆಸ್‌ನ ಕೆಲವು ನಾಯಕರು ಬಿಜೆಪಿ ಜತೆ ಮಾತ್ರ ಸೇರಿ ಕೊಂಡದ್ದಲ್ಲ, ಅವರು ಮಾಧ್ಯಮಗಳ ಜತೆಯೂ ಸೇರಿಕೊಂಡಿದ್ದಾರೆ ಎಂದು ಮಾಜಿ ಸಂಸದೆ ರಮ್ಯಾ ಆರೋಪಿಸಿದ್ದಾರೆ.ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಪೂರಕವಾಗಿ ಇವರು ಮೇಲಿನ ಆರೋಪದ ಟ್ವೀಟ್ ಮಾಡಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.