ಸೆಪ್ಟೆಂಬರ್ 1 ರಿಂದ ದಿನಕ್ಕೆ 5 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ : ಬೊಮ್ಮಾಯಿ

Team Udayavani, Aug 27, 2021, 4:03 PM IST

Ready to give 5 lakh doses of vaccine daily from September 1 : C M  Basavaraja Bommai

ಬೆಂಗಳೂರು :  ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರತಿ ದಿನ 5 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಇದಕ್ಕೆ ಅಗತ್ಯ ಪ್ರಮಾಣದ ಲಸಿಕೆ ಒದಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದೆಹಲಿ ಭೇಟಿಯ ಮುಖ್ಯ ಉದ್ದೇಶ ಹೆಚ್ಚುವರಿ ಲಸಿಕೆ ಪಡೆಯುವುದಾಗಿದ್ದು, ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಅವರ ಭರವಸೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮೊದಲಾದ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು. ಜೊತೆಗೆ ಸುಪ್ರೀಂ ಕೋರ್ಟ್ ಜಲವಿವಾದ ಗಳ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಕಾನೂನು ತಜ್ಞರು ಹಾಗೂ ತಾಂತ್ರಿಕ ತಂಡದವರೊಂದಿಗೆ ಚರ್ಚೆ ನಡೆಸಲಾಯಿತು.

ಇದನ್ನೂ ಓದಿ : ರೈತರ ಹೊಲಗಳನ್ನು ನಿಮ್ಮ ಕಾರ್ಪೋರೇಟ್ ಸ್ನೇಹಿತರಿಗೆ ನೀಡಲು ಬಿಡುವುದಿಲ್ಲ : ರಾಹುಲ್ ಕಿಡಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಜಿ.ಎಸ್.ಟಿ. ಪರಿಹಾರ 2022ಕ್ಕೆ ಅಂತ್ಯಗೊಳ್ಳಲಿದ್ದು, ಇದನ್ನು ಮುಂದುವರೆಸುವಂತೆ ಮನವಿ ಮಾಡಲಾಯಿತು. ಜಿ.ಎಸ್.ಟಿ. ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚಿಸುವುದಾಗಿ ಸಚಿವರು ತಿಳಿಸಿರುವುದಾಗಿ ಹೇಳಿದ್ದಾರೆ.

ಪಿಯೂಷ್ ಗೋಯಲ್ ಅವರು ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.  ಜೊತೆಗೆ ರಾಷ್ಟ್ರೀಯ ಅಂತರರಾಷ್ಟ್ರೀಯ ಮಟ್ಟದ ಕಂಪೆನಿಗಳ ಜೊತೆ ಸಂಪರ್ಕ ಒದಗಿಸುವುದಾಗಿ ತಿಳಿದ್ದಾರೆ. ಇದು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ದೊರೆಯಲು ಸಾಧ್ಯವಾಗುತ್ತದೆ. ವಿಶೇಷವಾಗಿ ಹೆಣ್ಣುಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಇನ್ನು, ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರತಿಕ್ರಿಯಿಸಿದ ಅವರು,  ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ನಡೆಯುತ್ತಿದೆ. ನನಗೇ ನೇರವಾಗಿ ವರದಿ ಮಾಡಿ ಎಂದು ತಿಳಿಸಿದ್ದೇನೆ. ಡಿಜಿಪಿ ಅವರು ಇಂದು ಸ್ವತಃ ಮೈಸೂರಿಗೆ ಭೇಟಿ ನೀಡಿದ್ದಾರೆ. ಡಿಜಿಪಿ ಅವರೇ ಖುದ್ದು ಈ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸುವಂತೆ ತಿಳಿಸಿದ್ದೇನೆ. ಶೀಘ್ರದಲ್ಲೇ ಪ್ರಕರಣ ಭೇದಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಗೌರಿ-ಗಣೇಶ ಹಬ್ಬ ಆಚರಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿಗಳನ್ನು ರೂಪಿಸುವ ಕುರಿತು ಆಗಸ್ಟ್ 30 ರಂದು ನಡೆಯಲಿರುವ ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ.

ಜೆ.ಪಿ ನಡ್ಡಾ ಅವರೊಂದಿಗೆ ಮುಂದೆ ಚರ್ಚೆ ಮಾಡ್ತೇನೆ : ಸಿಎಂ

ಸಚಿವ ಸಂಪುಟದಲ್ಲಿನ ಖಾಲಿ ಸ್ಥಾನ‌ ಭರ್ತಿ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರನ್ನು ಬೇರೆ ಬೇರೆ ಕಾರಣಗಳಿಂದ ಭೇಟಿ ಮಾಡಲು ಆಗಲಿಲ್ಲ. ಮುಂದಿನ‌ ಬಾರಿ ನವದೆಹಲಿಗೆ ತೆರಳಿದಾಗ ಆ ಬಗ್ಗೆ ಅವರೊಂದಿಗೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ‘ಹೀಗೆ ಬಂದು ಹಾಗೆ ಹೋದ್ರು’..: ಐದು ನಿಮಿಷಕ್ಕೆ ಸೀಮಿತವಾಯ್ತು ಗೃಹ ಸಚಿವರ ಘಟನಾ ಸ್ಥಳ ಭೇಟಿ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.