9ನೇ ತರಗತಿಯಿಂದ ಉದ್ಯಮಶೀಲತೆ ಪಠ್ಯ ಕಡ್ಡಾಯ; ಸರಕಾರಕ್ಕೆ ಸ್ಟಾರ್ಟ್ ಅಪ್ ಕಾರ್ಯಪಡೆ ಶಿಫಾರಸು
Team Udayavani, Apr 13, 2022, 5:30 AM IST
ಬೆಂಗಳೂರು: ಉದ್ಯಮಶೀಲತೆ ಬೆಳವಣಿಗೆ ತಿಳಿಸುವ ಪಠ್ಯಕ್ರಮ ಒಂಬತ್ತನೇ ತರಗತಿಯಿಂದ ಕಡ್ಡಾಯಗೊಳಿಸಲು ಕೌಶಲ, ಉದ್ಯಮಶೀಲತೆ ಮತ್ತು ನವೋದ್ಯಮ ಕಾರ್ಯಪಡೆಯು ಸರಕಾರಕ್ಕೆ ಶಿಫಾರಸು ಮಾಡಿದೆ.
ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕಾರ್ಯಪಡೆ ಅಧ್ಯಕ್ಷರೂ ಆದ ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ| ಎಸ್. ಸೆಲ್ವಕುಮಾರ್, ಶಿಫಾರಸು ಸರಕಾರಕ್ಕೆ ಸಲ್ಲಿಸಿದ್ದು, 9ನೇ ತರಗತಿಯಿಂದ ಪಿಯುಸಿವರೆಗೆ ಉದ್ಯಮ ಶೀಲತೆಯ ಬೆಳವಣಿಗೆಯನ್ನು ತಿಳಿಸುವ ಪಠ್ಯಕ್ರಮ ಮತ್ತು 8ನೇ ತರಗತಿಯಿಂದ ಪದವಿಯವರೆಗೂ ವೃತ್ತಿ ಮಾರ್ಗದರ್ಶನ ಕಡ್ಡಾಯಗೊಳಿಸಬೇಕು ಎನ್ನುವುದು ಸೇರಿದೆ.
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಶಿಫಾರಸು ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ, ನಿರುದ್ಯೋಗ ನಿವಾರಣೆ ಮತ್ತು ಗುಣಮಟ್ಟದ ಶಿಕ್ಷಣ ಸಾಧ್ಯವಾಗಬೇಕೆಂದರೆ ಕಲಿಕೆಯ ಹಂತದಿಂದಲೇ ಕೌಶಲವನ್ನು ಕಲಿಸುವುದರ ಜತೆಗೆ ಉದ್ಯಮಶೀಲ ಮನೋಭಾವವನ್ನು ಬೆಳೆಸಬೇಕಾಗಿದೆ.
ಹೀಗಾಗಿ, ಜಿಲ್ಲಾಮಟ್ಟದಲ್ಲಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಉದ್ಯಮಶೀಲತಾ ವಿಕಸನ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.
ಒಂದು ಕೋಟಿ ಉದ್ಯೋಗ ಗುರಿ
ಮುಂದಿನ 10 ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದು ಸರಕಾರದ ಗುರಿಯಾಗಿದೆ. ಕೃಷಿ ಸೇರಿದಂತೆ ಎಲ್ಲ ವಲಯಗಳಲ್ಲಿ ಗರಿಷ್ಠ ಉದ್ಯೋಗಾವಕಾಶದ ಸಾಧ್ಯತೆ ಇದೆ. ಇದನ್ನು ನನಸಾಗಿಸಲು ಪ್ರಮುಖ ಇಲಾಖೆಗಳ ಜತೆ ಸಮನ್ವಯತೆ ಸಾಧಿಸಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.