Child labour ನೇಮಕಾತಿ ಶಿಕ್ಷಾರ್ಹ ಅಪರಾಧ, ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ: ಸಿಎಂ
Team Udayavani, Jun 12, 2023, 12:34 PM IST
ಬೆಂಗಳೂರು: ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕುರಿತು ಸಾರ್ವಜನಿಕರು, ಪೋಷಕರು ಹಾಗೂ ಉದ್ದಿಮೆದಾರರಿಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಅವರು ಜೂ.12 ರಂದು ಎಂ.ಜಿ ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪೋಷಕರು, ಮಾತ್ರವಲ್ಲದೆ ಉದ್ಯಮ ನಡೆಸುವವರೂ ಈ ಬಗ್ಗೆ ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ಪ್ರಮಾಣ ವಚನ ಬೋಧನೆ ಮಾಡಲಾಗಿದೆ. ಮಕ್ಕಳು ಕಲಿಯುವ ವಯಸ್ಸಿನಲ್ಲಿ ದುಡಿಮೆ ಮಾಡಿದರೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ ಎಂದರು.
ಎಲ್ಲರೂ ವಿದ್ಯೆ ಕಲಿಯಬೇಕು ಅದು ಮೂಲಭೂತ ಹಕ್ಕು ಎಂದು ಸಂವಿಧಾನ ಹೇಳುತ್ತದೆ. 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳಬಾರದು. ಒಂದು ವೇಳೆ ಕೆಲಸಕ್ಕೆ ತೆಗೆದುಕೊಂಡರೆ ಅದು ಕಾನೂನಿಗೆ ವಿರುದ್ಧ. ಅವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳಬಹುದು. ಜಾಗೃತಿ ಮೂಡಿಸುವುದು ಹಾಗೂ ದುರುದ್ದೇಶದಿಂದ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ನಾಲ್ಕು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ; ಮಹಿಳೆ ಬಚಾವ್, 2 ಮಕ್ಕಳು ಸಾವು
Naxal: 6 ಜನ ನಕ್ಸಲರ ಶರಣಾಗತಿಗೆ ದನಗಾಹಿ ಅಜ್ಜಿಯೇ ರೂವಾರಿ… ಇದರ ಹಿಂದಿದೆ ರೋಚಕ ಸ್ಟೋರಿ
ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನಕ್ಕೆ ಪ್ರಣವಾನಂದ ಸ್ವಾಮೀಜಿ ಆಗ್ರಹ
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.