ಕರಾವಳಿಗೆ ಕುಚ್ಚಿಗೆ ಅಕ್ಕಿ: ಪಡಿತರದಲ್ಲಿ ವಿತರಿಸಲು ಸರಕಾರದ ಕ್ರಮ; ಸಚಿವ ಕೋಟ
Team Udayavani, Jul 15, 2022, 8:30 AM IST
ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರಿಗೆ ಪಡಿತರ ವ್ಯವಸ್ಥೆಯಲ್ಲಿ ಕುಚ್ಚಿಗೆ ಅಕ್ಕಿ ವಿತರಿಸಲು ರಾಜ್ಯ ಸರಕಾರ ಮುಂದಾಗಿದೆ.
ಈ ಜಿಲ್ಲೆಗಳ ಜನರಿಗೆ ಕುಚ್ಚಿಗೆ ಅಕ್ಕಿ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು, ರಾಜ್ಯ ಸರಕಾರ ಆ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ವಿಧಾನಸೌಧದಲ್ಲಿ ಗುರುವಾರ ಈ ಕುರಿತು ಸಭೆ ನಡೆಸಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ರಾಜ್ಯದ ನಿಯೋಗ ಈಗಾಗಲೇ ಕೇರಳಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ಇದಕ್ಕಾಗಿ ಕರಾವಳಿ ಜಿಲ್ಲೆಗಳಿಗೆ ಪ್ರತೀ ತಿಂಗಳು 1 ಲಕ್ಷ ಕ್ವಿಂಟಾಲ್ ಅಕ್ಕಿ ಅಗತ್ಯವಿದ್ದು, ವರ್ಷಕ್ಕೆ 12 ಲಕ್ಷ ಕ್ವಿಂಟಾಲ್ ಆಗುತ್ತದೆ. ವರ್ಷಕ್ಕೆ ಸುಮಾರು 18 ಲಕ್ಷ ಕ್ವಿಂಟಾಲ್ ಭತ್ತದ ಅಗತ್ಯ ಬೀಳುತ್ತದೆ ಎಂದು ತಿಳಿಸಿದರು.
ಜಯ, ಜ್ಯೋತಿ, ಎಂಎಫ್ 4ರಂತಹ ಭತ್ತದ ತಳಿಗಳಿಂದ ಮಾತ್ರ ಕುಚ್ಚಿಗೆ ಅಕ್ಕಿ ಮಾಡಲು ಸಾಧ್ಯವಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನುಳಿದದ್ದನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಸಲು ಕ್ರಮ ಕೈಗೊಳ್ಳಲಾಗು ವುದು. ಆದರೂ ಇದು ಸಾಲದು ಎಂದರು.
ಹೆಚ್ಚುವರಿ ಅಗತ್ಯವಿರುವ ಭತ್ತವನ್ನು ಕೇರಳ ಮತ್ತು ತೆಲಂಗಾಣ ರಾಜ್ಯಗಳಿಂದ ಪಡೆಯಲು ಯೋಜಿಸ ಲಾಗಿದೆ. ಈ ಸಂಬಂಧ ಈ ವಾರಾಂತ್ಯದಲ್ಲಿ ಮತ್ತೂಂದು ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡಲಿದೆ.
ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಮತ್ತು ಸಂಸದರ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿಯಾಗಿ ಬರುವ ವರ್ಷದಿಂದಲೇ ಕುಚ್ಚಿಗೆ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.