ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ, ಸತ್ಯ ಮುಚ್ಚಿಡಲು ಆಗದು: ಪರಂ
ಯುವತಿ ಹತ್ಯೆ ಸತ್ಯಾಸತ್ಯತೆ ಎಬಿವಿಪಿ, ಬಿಜೆಪಿಗೆ ಗೊತ್ತಿಲ್ಲ ; ರಾಜಕೀಯ ಮಾಡಲು ಹೊರಟಿದ್ದಾರೆ: ಗೃಹಸಚಿವ
Team Udayavani, Apr 20, 2024, 11:09 PM IST
ಬೆಂಗಳೂರು: ನನ್ನ ಹೇಳಿಕೆ ಯಿಂದ ಕೊಲೆಗೀಡಾದ ನೇಹಾ ಹೆತ್ತವರಿಗೆ ನೋವಾಗಿದ್ದಾರೆ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ಸತ್ಯವನ್ನು ಮುಚ್ಚಿಡಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದರು.
ಸದಾಶಿವ ನಗರದ ತಮ್ಮ ನಿವಾಸದ ಎದುರು ಶನಿವಾರ ಎಬಿವಿಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಯುವತಿ ಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಎಬಿವಿಪಿ ಮತ್ತು ಬಿಜೆಪಿಗೆ ಗೊತ್ತಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದಾರೆ. ಸಿಎಂ, ಡಿಸಿಎಂ ಸಹಿತ ನನಗೂ ಜವಾಬ್ದಾರಿ ಇದೆ. ಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದು, ನಮಗೆ ಬಂದಿರುವ ವರದಿಯನ್ನು ನಾವು ತಿಳಿಸಿದ್ದೇವಷ್ಟೇ. ಪ್ರಕರಣದ ಕುರಿತು ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ ಎಂದರು.
ತ್ವರಿತ ನ್ಯಾಯಾಲಯ ಸ್ಥಾಪನೆ ಆಗಲಿ
ಇದೇ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವ ಎಂ.ಬಿ.ಪಾಟೀಲ್, ವಿದ್ಯಾರ್ಥಿನಿ ನೇಹಾ ಕೊಲೆ ಕೃತ್ಯ ಅತ್ಯಂತ ಬರ್ಬರ ಘಟನೆ. ಈ ಹೇಯ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು. ಇಂತಹ ದುಷ್ಕೃತ್ಯ ಎಸಗಿದವರಿಗೆ ತತ್‌ಕ್ಷಣ ಕಠಿನ ಶಿಕ್ಷೆ ಆಗಬೇಕು. ವಿಚಾರಣೆ ವಿಳಂಬಕ್ಕೆ ಆಸ್ಪದ ನೀಡಬಾರದು ಎಂದು ತಿಳಿಸಿದ್ದಾರೆ.
ಇಂತಹ ಘಟನೆಯನ್ನು ಯಾರೇ ಮಾಡಿದರೂ ಖಂಡನಾರ್ಹ. ಇದೊಂದು ಬರ್ಬರ ಕೃತ್ಯವಾಗಿದ್ದು ಯಾವ ದೃಷ್ಟಿಯಿಂದಲೂ ಇದನ್ನು ಒಪ್ಪಲು ಸಾಧ್ಯವೇ ಇಲ್ಲ. ಈ ಘಟನೆಯ ಆರೋಪಿಗೆ ಕಠಿನ ಶಿಕ್ಷೆಯಾಗುವಂತೆ ಸರಕಾರ ನೋಡಿಕೊಳ್ಳಲಿದೆ.ಇಂತಹ ಘೋರಕೃತ್ಯ ಎಸಗಿದವರನ್ನು ವಿಳಂಬವಿಲ್ಲದೆ ಗಲ್ಲು ಶಿಕ್ಷೆಗೆ ಒಳಪಡಿಸಲು ಸಾಧ್ಯವಾಗುವಂತಹ ಕಾನೂನು ರೂಪಿಸುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮಾಲೋಚನೆ ನಡೆಸಬೇಕು ಎಂದರು.
ಚಿಕ್ಕ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲೂ ಅಪರಾಧಿ ಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.