ಕೇಂದ್ರ ಸರಕಾರದ ಜನಪರ ಯೋಜನೆಗಳ ಪುಸ್ತಕ ಬಿಡುಗಡೆ
100 ಕ್ಕೂ ಹೆಚ್ಚು ಜನಪರ ಯೋಜನೆಗಳ ವಿವರ....
Team Udayavani, Aug 21, 2022, 6:31 PM IST
ಬೆಂಗಳೂರು: ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಜನಪರ ಯೋಜನೆಗಳ ವಿವರವನ್ನು ಒಳಗೊಂಡಿರುವ “ನವ ಭಾರತಕ್ಕಾಗಿ ಹೊಸ ಯೋಜನೆಗಳು” “ನ್ಯೂ ಸ್ಕೀಮ್ಸ್ ಫಾರ್ ನ್ಯೂ ಇಂಡಿಯಾ” ಪುಸ್ತಕಗಳನ್ನು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿಡುಗಡೆಗೊಳಿಸಿದರು.
ಕೇಂದ್ರದ ಜನಪರ ಯೋಜನೆಗಳ ಮಾಹಿತಿಯುಳ್ಳ ಈ ಪುಸ್ತಕದ ಮೂಲಕ ಜನರನ್ನು ಮತ್ತು ಇನ್ನಷ್ಟು ಫಲಾನುಭವಿಗಳನ್ನು ತಲುಪುವಂತಾಗಲಿ ಎಂದು ನಳಿನ್ ಕುಮಾರ್ ಕಟೀಲ್ ಅವರು ಹಾರೈಸಿದರು.
ಕೇಂದ್ರ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಲುಪಲು ಇದು ಪೂರಕ. ಪ್ರಧಾನಿಯವರ ಪ್ರತಿಯೊಬ್ಬರ ಸಶಕ್ತೀಕರಣದ ಕನಸು ನನಸಾಗಲು ಇದು ಸಹಾಯಕ ಎಂದರು.
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಇತರರಿಂದ ಮಾಹಿತಿ ಪಡೆದು ಈ ಪುಸ್ತಕವನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಹೊರತರಲಾಗಿದೆ. ಈ ಪುಸ್ತಕವು ವಿವಿಧ ಯೋಜನೆಗಳ ಅರ್ಹತಾ ಮಾನದಂಡಗಳು ಮತ್ತು ಅರ್ಜಿಯ ಕಾರ್ಯವಿಧಾನವನ್ನು ಒಳಗೊಂಡಂತೆ ಎಲ್ಲ ಯೋಜನೆಗಳ ವಿವರಗಳನ್ನು ಒಳಗೊಂಡಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಉಜ್ವಲಾ, ಉಜಾಲಾ, ಮುದ್ರಾ, ಸ್ಕಿಲ್ ಇಂಡಿಯಾ, ಜನ ಔಷಧಿ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಸ್ವಚ್ಛ ಭಾರತ್, ಮೇಕ್ ಇನ್ ಇಂಡಿಯಾ, ಸುರಕ್ಷಿತ ಮಾತೃತ್ವ, ಬೇಟಿ-ಬಚಾವೋ ಬೇಟಿ-ಪಡಾವೋ, ಡಿಜಿಟಲ್ ಇಂಡಿಯಾ, ಖೇಲೋ ಸೇರಿದಂತೆ ಕೆಲವು ಪ್ರಮುಖ ಯೋಜನೆಗಳ ಮಾಹಿತಿ ಇದರಲ್ಲಿದೆ.
ಸುಕನ್ಯಾ ಸಮೃದ್ಧಿ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ ಯೋಜನೆ, ಸಮರ್ಥ ಯೋಜನೆ, ರಾಷ್ಟ್ರೀಯ ವಯೋಶ್ರೀ ಯೋಜನೆ, ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ, ಪ್ರಧಾನ ಮಂತ್ರಿ ಕೃಷಿ ಕಲ್ಯಾಣ ಅಭಿಯಾನ, ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆ ಸೇರಿದಂತೆ 100 ಕ್ಕೂ ಹೆಚ್ಚು ಯೋಜನೆಗಳ ವಿವರವಿದ್ದು, ಸಮಾಜದ ಪ್ರತಿಯಿಂದು ವರ್ಗಕ್ಕೆ ತಲುಪಲು ಇದು ನೆರವಾಗಲಿದೆ ಎಂದು ವಿವರಿಸಿದರು.
ಸ್ಕೀಮ್ ವೆಬ್ ಪುಟಗಳಿಗಾಗಿ ಕ್ಯೂಆರ್ ಕೋಡ್‍ಗಳನ್ನು ನೀಡಲಾಗಿದೆ. ಸ್ಕ್ಯಾನ್ ಮಾಡುವ ಮೂಲಕ ನೇರವಾಗಿ ಆಯಾ ವೆಬ್ ಪುಟಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಸ್ಕೀಮ್ ಮಾಹಿತಿಯನ್ನು ಪಡೆಯಬಹುದು ಎಂದು ಪ್ರಕಾಶಕರು ತಿಳಿಸಿದ್ದಾರೆ.
ಬೀದರ್ ಉತ್ತರ ಕ್ಷೇತ್ರದಲ್ಲಿ ಇದರ ಪ್ರತಿಯನ್ನು ಮನೆ ಮನೆಗೆ ತಲುಪಿಸಿ ಸರ್ಕಾರದ ಯೋಜನೆಗಳ ಬಗ್ಗೆ ತಿಳಿವಳಿಕೆ ನೀಡುವ ಮತ್ತು ಅರ್ಹ ಫಲಾನುಭವಿಗಳನ್ನು ಅವರ ಮನೆ ಬಾಗಿಲಿಗೆ ದಾಖಲಿಸುವ ಕೆಲಸ ಮಾಡಲಾಗುತ್ತಿದೆ. ನಾವು ಇಲ್ಲಿಯವರೆಗೆ 50 ಕ್ಕೂ ಹೆಚ್ಚು ಗ್ರಾಮಗಳನ್ನು ಪೂರ್ಣಗೊಳಿಸಿದ್ದೇವೆ ಮತ್ತು ಸುಮಾರು 20,000 ಕ್ಕೂ ಹೆಚ್ಚು ಮನೆಗಳಿಗೆ ಬಿಜೆಪಿ ಕಾರ್ಯಕರ್ತರು, ಹಿತೈಷಿಗಳು, ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್‍ನ ಕುಟುಂಬ ಸದಸ್ಯರು ಭೇಟಿ ನೀಡಿದ್ದಾರೆ ಎಂದು ತಿಳಿಸಲಾಗಿದೆ.
ಪಕ್ಷದ ಹಾಸನ ಜಿಲ್ಲಾಧ್ಯಕ್ಷ ಹುಲ್ಲಳ್ಳಿ ಸುರೇಶ್, ಸಕಲೇಶಪುರದ ಮುಖಂಡ ನಾರ್ವೆ ಸೋಮಶೇಖರ್, ಮುಖಂಡರಾದ ಲಲ್ಲೇಶ್ ರೆಡ್ಡಿ, ನರೇಂದ್ರಬಾಬು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.