ನಿಗಮ ಮಂಡಳಿಗಳ ಮುಂದುವರಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ
Team Udayavani, Aug 1, 2023, 7:20 AM IST
ಬೆಂಗಳೂರು:ಹಿಂದಿನ ಸರ್ಕಾರ ಅನುಮೋದಿಸಿ ಇನ್ನೂ ಆರಂಭವಾಗದ ನಿಗಮ, ಮಂಡಳಿ, ಪ್ರಾಧಿಕಾರದ ಕಾಮಗಾರಿಗಳ ಬಗ್ಗೆ ಸಂಬಂಧಿಸಿದ ಸಚಿವರಿಂದ ಅನುಮೋದನೆ ಪಡೆದು ಮುಂದುವರಿಯುವಂತೆ ಆರ್ಥಿಕ ಇಲಾಖೆ ಆದೇಶಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಹಿಂದಿನ ಸರ್ಕಾರದಲ್ಲಿ ನಿಗಮ, ಮಂಡಳಿಗಳಿಗೆ ಬಿಡುಗಡೆಯಾಗಿದ್ದ ಅನುದಾನಗಳನ್ನು ತಡೆ ಹಿಡಿದಿತ್ತು. ಇದೀಗ ಹಿಂದಿನ ಸುತ್ತೋಲೆ ಹಿಂಪಡೆದಿರುವ ಆರ್ಥಿಕ ಇಲಾಖೆ, ಚಾಲ್ತಿ ಕಾಮಗಾರಿಗಳ ಸಮರ್ಪಕ ಅನುಷ್ಠಾನದ ಬಗ್ಗೆ ಪರಿಶೀಲಿಸಿ, ನಿಯಮಾನುಸಾರ ಇರುವುದನ್ನು ಖಚಿತಪಡಿಸಿಕೊಂಡು ಹಿಂದಿನಂತೆಯೇ ಹಣ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ಇಲಾಖೆಗಳಿಗೂ ತಿಳಿಸಿದೆ.
ಹಿಂದಿನ ಸರ್ಕಾರದಿಂದ ಅನುಮೋದನೆಗೊಂಡು ಇನ್ನೂ ಆರಂಭವಾಗದಿರುವ ಕಾಮಗಾರಿಗಳ ಬಗ್ಗೆ ಸಂಬಂಧಿಸಿದ ಸಚಿವರ ಅನುಮೋದನೆಯೊಂದಿಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಆಡಳಿತ ಇಲಾಖೆಯ ಕಾರ್ಯದರ್ಶಿಗಳು ಕ್ರಮ ವಹಿಸುವಂತೆಯೂ ತಿಳಿಸಿದೆ.
ಜುಲೈ ತಿಂಗಳ ಬಜೆಟ್ನಲ್ಲಿ ಅವಕಾಶ ಮಾಡಿಕೊಂಡಿರುವ ಹೊಸ ಕಾಮಗಾರಿಗಳ ಬಗ್ಗೆ ಆರ್ಥಿಕ ಇಲಾಖೆಯಿಂದ ನೀಡಲಾದ ಆಯವ್ಯಯ ಸಲಹಾ ಟಿಪ್ಪಣಿ ಹಾಗೂ ಅಧಿಕಾರ ಪ್ರತ್ಯಾಯೋಜನೆ ಆದೇಶದಲ್ಲಿನ ಕ್ರಮಗಳನ್ನು ಅನುಸರಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸುವಂತೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕ್ರೂಪ್ ಕೌರ್ ಸುತ್ತೋಲೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.