ಸೋಮವಾರ CM ಎಚ್ ಡಿಕೆ ಡೀಲ್ ಕುರಿತ ವಿಡಿಯೋ ಕಲಾಪದಲ್ಲಿ ರಿಲೀಸ್!
Team Udayavani, Feb 9, 2019, 7:42 AM IST
ಬೆಂಗಳೂರು:ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಡಿಯೋ ಬಿಡುಗಡೆ ಮಾಡಿದ್ದ ಬೆನ್ನಲ್ಲೇ ಇದೀಗ ಸಿಎಂ ಕುಮಾರಸ್ವಾಮಿ ತಮ್ಮ ಪಕ್ಷದವರೊಬ್ಬರಿಗೆ 25 ಕೋಟಿ ರೂಪಾಯಿ ಆಫರ್ ಮಾಡಿರುವ ವಿಡಿಯೋ ನಮ್ಮಲ್ಲಿದ್ದು ಅದನ್ನು ಸೋಮವಾರ ಬಿಎಸ್ ಯಡಿಯೂರಪ್ಪ ಸದನದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಬಜೆಟ್ ಮಂಡಿಸುವ ಮುನ್ನ ಶುಕ್ರವಾರ ಬೆಳಗ್ಗೆ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿ ಗುರುಮಿಠ್ಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ್ ಅವರ ಪುತ್ರ ಶರಣುಗೌಡ ಕಂದಕೂರ್ ಅವರಿಗೆ ದೂರವಾಣಿ ಮುಖಾಂತರ ಮಾತನಾಡಿ, 25 ಕೋಟಿ ರೂ. ಹಣ, ಯಾದಗಿರಿ ಜಿಲ್ಲಾ ಉಸ್ತುವಾರಿ ಹಾಗೂ ಪ್ರಮುಖ ಖಾತೆ ನೀಡಲಾಗುವುದು ಎಂದು ಬಿಜೆಪಿ ಮುಖಂಡ ಬಿಎಸ್ ವೈ ಆಮಿಷವೊಡ್ಡಿದ್ದ ಆಡಿಯೋ ಬಿಡುಗಡೆ ಮಾಡಿದ್ದರು.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಬಿಜೆಪಿ ಮುಖಂಡ ಲಿಂಬಾವಳಿ, ನಮ್ಮ ಪಕ್ಷದವರೊಬ್ಬರನ್ನು ಎಂಎಲ್ ಸಿ ಮಾಡಲು ಸಿಎಂ ಕುಮಾರಸ್ವಾಮಿ ಅವರು 25 ಕೋಟಿ ರೂಪಾಯಿ ಬೇಡಿಕೆ ಇಟ್ಟಿರುವ ವಿಡಿಯೋ ದೃಶ್ಯ ನಮ್ಮಲ್ಲಿದೆ. ಆ ವಿಡಿಯೋವನ್ನು ಸೋಮವಾರ ಸದನದಲ್ಲಿಯೇ ಬಿಎಸ್ ಯಡಿಯೂರಪ್ಪ ಬಿಡುಗಡೆಗೊಳಿಸುತ್ತಾರೆ ಎಂದು ಹೇಳಿದರು.
ಬಳಿಕ ವಿಡಿಯೋ ಕುರಿತ ದೂರನ್ನು ಸ್ಪೀಕರ್ ಅವರಿಗೆ ನೀಡಲಾಗುವುದು. ಕುಮಾರಸ್ವಾಮಿ ಅವರು ನಿನ್ನೆ ಬಿಡುಗಡೆ ಮಾಡಿರುವ ಆಡಿಯೋ ನಕಲಿ ಎಂದು ಲಿಂಬಾವಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್
Social Media A/c: ಮಕ್ಕಳ ಸೋಷಿಯಲ್ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?
Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್ ಸಿಂಗ್?
Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.