“ಮಹದಾಯಿಗೆ ಪರಿಹಾರ ನೀಡಿ’
Team Udayavani, Nov 16, 2017, 7:56 AM IST
ವಿಧಾನಸಭೆ: “ಮಹದಾಯಿ ನದಿ ನೀರು ಹಂಚಿಕೆ ವಿಷಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕುಂಟು ನೆಪ ಹೇಳುತ್ತ ಸಮಯ ವ್ಯರ್ಥ ಮಾಡುತ್ತಿವೆ’ ಎಂದು ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಆರೋಪಿಸಿದ್ದಾರೆ. ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತಂತೆ ಬುಧವಾರ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ನಾಲ್ಕೂವರೆ ವರ್ಷದಿಂದ ಎರಡೂ ರಾಷ್ಟ್ರೀಯ ಪಕ್ಷಗಳು ಒಬ್ಬರ
ಮೇಲೊಬ್ಬರು ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ.
ಎರಡೂವರೆ ವರ್ಷದಿಂದ ಮಹದಾಯಿ ನೀರಿಗಾಗಿ ನಿರಂತರ ಹೋರಾಟ ನಡೆಯುತ್ತಿದೆ. ಆದರೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಹದಾಯಿಗಾಗಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರ ಮನೆ ಮುಂದೆಯೇ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈಗ ಚುನಾವಣೆ ಸಂದರ್ಭದಲ್ಲಾದರೂ ತೀರ್ಮಾನ ಕೈಗೊಂಡು ಈ ಭಾಗದ ಜನತೆಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದರು.
ಯೋಜನೆಗೆ 249 ಕೋಟಿ ಖರ್ಚು
ವಿಧಾನಪರಿಷತ್ತು: ಮಹದಾಯಿ ಯೋಜನೆ ಯಡಿ ಅಕ್ಟೋಬರ್ 2017ರವರೆಗೆ ಒಟ್ಟು 249.45 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಜೆಡಿಎಸ್‌ನ ಶ್ರೀಕಂಠೇಗೌಡ ಅವರ ಪ್ರಶ್ನೆಗೆ ನೀಡಿರುವ ಲಿಖೀತ ಉತ್ತರದಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ. ಮಹದಾಯಿ ಯೋಜನೆಯು ಪ್ರಸ್ತುತ ನ್ಯಾಯಾಧಿಕರಣದ ಮುಂದಿದೆ. ಈ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನು ಸರ್ಕಾರದಿಂದ ಮಾಡಲಾಗುತ್ತಿದೆ. ನ್ಯಾಯಾಧಿಕರಣದ
ಮುಂದೆ ವಾದ ಮಂಡಿಸಲು ನುರಿತ ಕಾನೂನು ತಂಡ ನೇಮಿಸಲಾಗಿದೆ. ಈ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಗೋವಾ ಮತ್ತು ಮಹಾರಾಷ್ಟ್ರ ಸಿಎಂಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.
ಮಹದಾಯಿ ವಿವಾದ ಬಗೆಹರಿಸುವ ಕುರಿತು ಈಗಾಗಲೇ ಗೋವಾ ಸರ್ಕಾರದೊಂದಿಗೆ ಮಾತುಕತೆ ಪ್ರಯತ್ನ ಆರಂಭವಾಗಿದ್ದು, ಒಂದು ತಿಂಗಳಲ್ಲಿ ಸಿಹಿ ಸುದ್ದಿ ಸಿಗಲಿದೆ.
●ಜಗದೀಶ್ ಶೆಟ್ಟರ್, ವಿಧಾನಸಭೆ ಪ್ರತಿಪಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.