ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರ ನಡೆಯುತ್ತಿದೆ: ಹೆಚ್ ಡಿಕೆ ಆಕ್ರೋಶ

ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ

Team Udayavani, Feb 17, 2021, 11:27 AM IST

kumarswamy

ಬೆಂಗಳೂರು: ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಇವರಿಗೆ ನೆನಪಿರಲಿ, ದೇವರಿಗಾಗಿ  ನಾವು ಮಾಡಿದಷ್ಟು ಪ್ರಾರ್ಥನೆ, ಪೂಜೆಗಳ ಮುಂದೆ, ಈ ನಕಲಿಗಳು ಮಾಡಿದ ‘ಅಧಿಕಾರ ರಾಮ ಜಪ’ ಕಾಲು ಭಾಗಕ್ಕೂ ಸಾಲದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಇಚ್ಛೆಗಳನ್ನಿಟ್ಟುಕೊಂಡು ದೇವರನ್ನು ಆರಾಧಿಸುವುದೇ ತಪ್ಪು. ಅಂಥದ್ದರಲ್ಲಿ ದೇವರನ್ನು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ, ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ.  ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ಮುಂದೆ ತಕ್ಕ ಫಲ ಸಿಗಲಿಕ್ಕಿದೆ.ಈಗ ಅರಚುವವರೆಲ್ಲರೂ ಅದಕ್ಕಾಗಿ ಕಾಯಲಿ .ಅದರ ಫಲವನ್ನೂ ಉಣ್ಣಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು. ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು.

ಇದನ್ನೂ ಓದಿ:  ಉತ್ತರಪ್ರದೇಶ; ದೇಶಾದ್ಯಂತ ಸರಣಿ ವಿಧ್ವಂಸಕ ಕೃತ್ಯ ಸಂಚು ವಿಫಲ; ಇಬ್ಬರು PFI ಸದಸ್ಯರ ಬಂಧನ

“ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ,” ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ!

ದೇವರ ವಿಚಾರದಲ್ಲಿ ನಮಗಿರುವ ಬದ್ಧತೆಯನ್ನು ಪ್ರಶ್ನೆ ಮಾಡುವವರು, ನನ್ನನ್ನು ಹಾಗೂ ನನ್ನ ಕುಟುಂಬವನ್ನು ಟೀಕೆ ಮಾಡುವವರು, ಬಾಯಿಗೆ ಬಂದಂತೆ ಮಾತನಾಡುವವರು ಒಂದಲ್ಲ ಹತ್ತು ಬಾರಿ ಯೋಚನೆ ಮಾಡುವುದು ಒಳಿತು. ಯಾಕೆಂದರೆ, ನಾನಾಗಲಿ, ನನ್ನ ಕುಟುಂಬವಾಗಲಿ ಈಗ ದೇಶದಲ್ಲಿ ಕೆಲವರಿಂದ ನಡೆಯುತ್ತಿರುವ ಧಾರ್ಮಿಕ ಭ್ರಷ್ಟಾಚಾರದಂಥ ಕೃತ್ಯ ಮಾಡಿಲ್ಲ!

ಒಬ್ಬರು ಹೇಳಿದ್ದಾರೆ… ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಕುಮಾರಸ್ವಾಮಿ ದೇಣಿಗೆ ನೀಡಲಿ ಎಂದು. ಹಣ, ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ. ನಮ್ಮೆಲ್ಲರ ಭಕ್ತಿ, ಭಾವನೆಗಳನ್ನು ಹಣವಾಗಿ, ಅಧಿಕಾರವಾಗಿ ಪರಿವರ್ತಿಸುವ ನಿಮ್ಮ ನಡವಳಿಕೆ ತಿದ್ದಿಕೊಳ್ಳಿ ಎಂದರು.

ನನ್ನ ಹೇಳಿಕೆಯಲ್ಲಿ ಬೇಜವಾಬ್ದಾರಿ ಗುರುತಿಸಿರುವ ಧಾರ್ಮಿಕ ಮುಖಂಡರೊಬ್ಬರು ಮೊದಲು ತಮ್ಮ ಜವಾಬ್ದಾರಿ ಅರಿಯಬೇಕು. ರಾಮನ ಭಕ್ತಿಯು ಹಣ, ಅಧಿಕಾರ, ರಾಜಕಾರಣವಾಗಿ ಪರಿವರ್ತನೆಯಾಗುವುದನ್ನು ಅವರು ತಡೆದಿದ್ದರೆ, ಅದು ಅವರ ಜವಾಬ್ದಾರಿಯ ಸಮರ್ಥ ನಿರ್ವಹಣೆ ಆಗಿರುತ್ತಿತ್ತು. ಅದು ಬಿಟ್ಟು ರಾಜಕೀಯದ ಹೇಳಿಕೆ ನೀಡುವುದು ಧಾರ್ಮಿಕ ನಾಯಕರಿಗೆ ಶೋಭೆಯಲ್ಲ.

ಇದನ್ನೂ ಓದಿ:   “ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ” : ರಾಹುಲ್ ಗಾಂಧಿ

ಪಬ್ಲಿಸಿಟಿಗೆ ನಾನು ಈ ಹೇಳಿಕೆ ಕೊಟ್ಟಿದ್ದೇನೆ ಎಂದು ಸೋದರ ಶ್ರೀರಾಮುಲು ಹೇಳಿದ್ದಾರೆ. ಪಾಪ ಅವರು ಮುಗ್ಧರು. ದೈವಬಲ, ಜನಾಶಿರ್ವಾದದಿಂದ 2 ಬಾರಿ ಸಿಎಂ ಆದ ನಾನು ಇನ್ನು ಯಾವ ಪಬ್ಲಿಸಿಟಿ ಪಡೆಯಬೇಕಿದೆ? ನನಗೆ ಅದರ ಅಗತ್ಯವೇನಿದೆ? ರಾಮ ಮಂದಿರ ಆಗಬೇಕೆಂದು ಕುಮಾರಸ್ವಾಮಿ ಅವರ ಮನಸ್ಸಲ್ಲೂ ಇದೆ ಎಂಬ ಅವರ ಮಾತನ್ನು ಮಾತ್ರ ಅನುಮೋದಿಸುತ್ತೇನೆ.

ಇತಿಹಾಸ ಹೇಳುತ್ತಾ ನಿಂತಿರುವ ಪುರಾತನ ದೇಗುಲಗಳ ಹಿಂದೆ ಜನರನ್ನು ವಿಭಜಿಸಿದ ಕತೆಗಳಿಲ್ಲ. ಆ ದೇಗುಲಗಳ ನಿರ್ಮಾಣಕ್ಕಾಗಿ ದೇಣಿಗೆ ಹೆಸರಿನಲ್ಲಿ ಹಣ ಸಂಗ್ರಹಿಸಿದ ಉಲ್ಲೇಖವಿಲ್ಲ. ದೇವರನ್ನು ರಾಜಕೀಯಕ್ಕಾಗಿ ಉಪಯೋಗಿಸಿಕೊಂಡ ಉಲ್ಲೇಖವಿರುವ ಒಂದೇ ಒಂದು ಶಾಸನ ನಮಗೆ ಸಿಕ್ಕಿಲ್ಲ. ಈಗ ಇಂಥ ಕೃತ್ಯ ಮಾಡುತ್ತಿರುವವರು ದಯವಿಟ್ಟು ನಿಲ್ಲಿಸಿ.

ಈ ವಿಚಾರವಾಗಿ ಮಕ್ಕಳು-ಮರಿಗಳಿಗೆ ,ಅಪ್ಪನ ಅಧಿಕಾರದ ಹಿಂದೆ ಅಡಗಿ ದುಡ್ಡು ಕೊಳ್ಳೆ ಹೊಡೆಯುತ್ತಿರುವ ಸ್ವಘೋಷಿತ ನವ ಇಲಿಗಳಿಗೆ ನಾನು ಪ್ರತಿಕ್ರಿಯಿಸಲಾರೆ. ಇಷ್ಟು ಹೇಳಿಯೂ ಅರ್ಥವಾಗದವರಿಗೆ ಹೇಳುವುದು ಇಷ್ಟೆ-ರಾಮಮಂದಿರ ಹಿಂದೂಗಳ ಭಕ್ತಿ,ಭಾವನೆಗಳ ಮೂರ್ತ ರೂಪ ಅದು ಆಗಬೇಕು. ಆದರೆ ಅದೇ ಹೆಸರಿನಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧವಿದೆ ಎಂದು ಹೆಚ್. ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:   ಟೇಕ್ ಆಫ್ ಗೆ ಸಿದ್ಧವಾಗುತ್ತಿದೆ ಫ್ಲೈಯಿಂಗ್ ಕಾರ್…! ಇನ್ಮೇಲೆ ಪ್ರಯಾಣ ಮತ್ತಷ್ಟು ಸುಖಮಯ…

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.