![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 25, 2023, 9:40 PM IST
ಬೆಂಗಳೂರು: ಆಪರೇಷನ್ ಹಸ್ತದ ಚರ್ಚೆ ತೀವ್ರವಾಗಿರುವ ಹೊತ್ತಿನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷ ಚರ್ಚೆ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಮನವಿ ಸಲ್ಲಿಸಲು ಭೇಟಿ ಮಾಡಲಾಗಿತ್ತು ಎಂಬ ಕಾರಣ ನೀಡಲಾಗಿದೆ. ಜತೆಗೆ ಸದಾಶಿವ ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ 15ರಿಂದ 20 ನಿಮಿಷ ಮಾತುಕತೆ ನಡೆಸಿದ್ದಾರೆ.
ರೇಣುಕಾಚಾರ್ಯ ಬಿಜೆಪಿ ಬಿಡುವ ಬಗ್ಗೆ ಈವರೆಗೂ ನಿರ್ಧಾರ ಮಾಡಿಲ್ಲವಾದರೂ ವಿಧಾನಸಭಾ ಚುನಾವಣೆ ಬಳಿಕ ಪಕ್ಷದೊಳಗೆ ನಡೆಯುತ್ತಿರುವ ವಿದ್ಯಮಾನದಿಂದ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ ಅವರನ್ನು ಕಾಂಗ್ರೆಸ್ ತನ್ನತ್ತ ಸೆಳೆದುಕೊಳ್ಳಲು ಮುಂದಾಗಿದೆ. ಕಾಂಗ್ರೆಸ್ ಸೇರಿದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚೆ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.
ಒಂದು ವೇಳೆ ಬಿಜೆಪಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರಿಗೆ ಪುನಃ ಟಿಕೆಟ್ ನೀಡಿದರೆ, ರೇಣುಕಾಚಾರ್ಯ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಕಡೆ ಮುಖ ಮಾಡುವುದು ಖಚಿತ ಎನ್ನಲಾಗುತ್ತಿದೆ.
ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರೇಣುಕಾಚಾರ್ಯ, ಇದೊಂದು ರಾಜಕೀಯ ರಹಿತ ಭೇಟಿ. ನಾನು ಬಿಜೆಪಿಯಲ್ಲಿ ಇದ್ದರೂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜತೆಗೆ ಆತ್ಮೀಯ ಸಂಬಂಧ ಹೊಂದಿದ್ದೇನೆ. ಈ ಹಿಂದೆ ನಾನು ಹೊನ್ನಾಳಿಯಲ್ಲಿ ರಾಜ್ಯಮಟ್ಟದ ಕೃಷಿ ಸಮ್ಮೇಳನ ನಡೆಸಿದ್ದಾಗ ಇಬ್ಬರನ್ನೂ ಭೇಟಿಯಾಗಿ ಆಹ್ವಾನ ಕೊಟ್ಟಿದ್ದೆ . ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಯಡಿಯೂರಪ್ಪ ಭೇಟಿ
ಇದಕ್ಕೂ ಮುನ್ನ ರೇಣುಕಾಚಾರ್ಯ ಡಾಲರ್ಸ್ ಕಾಲನಿಯ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.