ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ಸುಧಾಕರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
Team Udayavani, Feb 26, 2021, 12:38 PM IST
ಬೆಂಗಳೂರು: “ಮಿನಿಸ್ಟರ್ ಗಳೆಂದರೆ ದೇವಲೋಕದಿಂದ ಇಳಿದು ಬಂದವರಾ”.. ಈ ರೀತಿ ಹೇಳಿಕೆ ನೀಡಿದ್ದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ. ಅವರು ಹೆಸರಿಸಿದ ಮಿನಿಸ್ಟರ್ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಚಿವ ಸುಧಾಕರ್ ವಿರುದ್ಧ ಕಿಡಿಕಾರಿದರು.
ನಾವೇನು ಬಿಟ್ಟಿ ಬಿದ್ದಿದ್ದೀವಾ? ಕೆಲವು ಸಚಿವರು ಕೈಗೇನೇ ಸಿಗಲ್ಲ. ಅವರ ಪಿ.ಎ ಗಳು ಪಿ.ಎಸ್ ಗಳು ಫೋನ್ ರಿಸೀವ್ ಮಾಡುವುದಿಲ್ಲ. ಕಾಂಗ್ರೆಸ್ ಜೆಡಿಎಸ್ ನಿಂದ ಬಂದ ಎಲ್ಲ ಸಚಿವರು ಹೀಗೆ ಎಂದು ನಾನು ಹೇಳಲ್ಲ. ಆದರೆ ಕೆಲವರು ಮಾತ್ರ ನಮಗೆ ಕೈಗೆ ಸಿಗಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ:ಸಚಿವ ಸುಧಾಕರ್ ಆಪ್ತ ಕಾರ್ಯದರ್ಶಿಗೆ ಧಮಕಿ ಹಾಕಿದ ರೇಣುಕಾಚಾರ್ಯ!
ನಾನು ಹತ್ತಾರು ಭಾರಿ ಭೇಟಿ ಆಗಿದ್ದೇನೆ. ಪತ್ರ ಬರೆದಿದ್ದೇನೆ, ಏನೂ ಪ್ರಯೋಜನವಾಗಿಲ್ಲ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಿ ಆಗುವ ಮಾತೇ ಇಲ್ಲ. ನಾನು ಧರಣಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆ. ನಿನ್ನೆ ಅವರ ಪಿ.ಎಸ್ ಫೋನ್ ಮಾಡಿದರು. ಕೆಲವು ಕೆಲಸ ಆಗಿದೆ. ನನ್ನ ಕೆಲಸ ಆದ ಮಾತ್ರಕ್ಕೆ ನಾನು ಸುಮ್ಮನಿರಲ್ಲ ಎಂದು ರೇಣುಕಾಚಾರ್ಯ ಹೇಳಿದರು.
ಪಾಪ ನಮ್ಮ ಅನೇಕ ಬಾಯಿ ಇಲ್ಲದ ಶಾಸಕರಿದ್ದಾರೆ, ಅವರ ಕೆಲಸಗಳೂ ಆಗಬೇಕು. ಆದರೆ ಐದಾರು ಸಚಿವರು ಕೈಗೆ ಸಿಗಲ್ಲ .ನಾನು ಮೂರು ಬಾರಿ ಶಾಸಕನಾಗಿ ನನ್ನ ಕ್ಷೇತ್ರದಲ್ಲಿ ಆಯ್ಕೆ ಆಗಿದ್ದೇನೆ. ನಾವೇನು ಬಿಟ್ಟಿ ಬಿದ್ದಿದ್ದೀವಾ ಎಂದು ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಚಿತ್ರೀಕರಣದಲ್ಲಿ ಬಿಝಿಯಾಗಿದೆ ಪೃಥ್ವಿ, ಮಿಲನಾ ನಾಗರಾಜ್ ರ ‘ಫಾರ್ ರಿಜಿಸ್ಟ್ರೇಷನ್’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.