Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ

ರವಿಶಂಕರ್, ದೀಪಕ್ ಗೆ ಜಾಮೀನು ಮಂಜೂರು

Team Udayavani, Oct 14, 2024, 5:38 PM IST

0004

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Actor Darshan) ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಸೋಮವಾರ(ಅ.14ರಂದು) 57ನೇ ಸಿಸಿಎಚ್‌ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದೆ. ಎ2 ಆರೋಪಿ ದರ್ಶನ್, ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾ ಮಾಡಲಾಗಿದ್ದು ಜೈಲೇ ಗತಿ ಎನ್ನುವಂತಾಗಿದೆ. ಎ 11 ನಾಗರಾಜು, ಎ 12 ಲಕ್ಷ್ಮಣ್ ಅವರ ಜಾಮೀನು ಅರ್ಜಿಯನ್ನೂ ವಜಾ ಮಾಡಿದೆ. ಇದೆ ವೇಳೆ ಎ 8 ರವಿಶಂಕರ್, ಎ 13 ದೀಪಕ್ ಗೆ ಜಾಮೀನು ಮಂಜೂರು ಮಾಡಿದೆ.

ದರ್ಶನ್‌ ಪರ ವಕೀಲ ನಾಗೇಶ್‌ , ಪೊಲೀಸರ ಪರ ಎಸ್‌ಪಿಸಿ ಪ್ರಸನ್ನ ಕುಮಾರ್‌ ಅವರ ವಾದ – ಪ್ರತಿವಾದವನ್ನು ಆಲಿಸಿರುವ ನ್ಯಾಯಧೀಶ ಜೈಶಂಕರ್‌ ಅವರು ಕಾಯ್ದಿರಿಸಿದ್ದ ಆದೇಶವನ್ನು ಪ್ರಕಟಿಸಿದ್ದಾರೆ.

ಎ2 ದರ್ಶನ್‌ , ಎ1 ಪವಿತ್ರಾ ಗೌಡ (Pavithra Gowda) , ರವಿಶಂಕರ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ದೀಪಕ್‌ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಅವರು ಪ್ರಕಟಿಸಿದ್ದಾರೆ.

ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ದರ್ಶನ್ ಪರ ವಕೀಲರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್‌ , ಪವಿತ್ರಾ ಪರ ವಾದ ಮಂಡಿಸಿದ್ದು ಯಾರು?

ಕೊಲೆ ಪ್ರಕರಣದಲ್ಲಿ ದರ್ಶನ್‌ ಆರಂಭದಲ್ಲಿ ಪರಪ್ಪನ ಅಗ್ರಹಾರದಲ್ಲಿದ್ದರು. ಅಲ್ಲಿ ರಾಜ್ಯಾತಿಥ್ಯವನ್ನು ನೀಡಿದ ಆರೋಪ ಕೇಳಿಬಂದ ಹಿನ್ನೆಲೆ ಅವರನ್ನು ಬಳ್ಳಾರಿ ಜೈಲಿಗೆ ಶಿಪ್ಟ್‌ ಮಾಡಲಾಗಿತ್ತು. ದರ್ಶನ್‌ ಪರ ಸಿ.ವಿ ನಾಗೇಶ್‌ ವಾದ ಮಂಡಿಸಿದ್ದರು. ಪೊಲೀಸರ ಪರ ಎಸ್‌ ಪಿಪಿ ಪ್ರಸನ್ನ ಕುಮಾರ್‌ ವಾದ ಮಂಡಿಸಿದ್ದರು. ಇತ್ತ ಪವಿತ್ರಾ ಗೌಡ ಪರ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.

ಆರೋಪ ಪಟ್ಟಿಯಲ್ಲಿ ಏನಿತ್ತು?: 

ತನಿಖಾಧಿಕಾರಿ ಎಸಿಪಿ ಚಂದನ್‌(ACP Chandan) ಅವರ ನೇತೃತ್ವದಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಸೆ.4 ರಂದು 3ʼ991 ಪುಟಗಳ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಇದಾದ ಬಳಿಕ ಸೆ.21ರಂದು ದರ್ಶನ್‌ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಕೋರ್ಟ್‌ಗೆ ಸಲ್ಲಿಕೆ ಮಾಡಿರುವ ದೋಷಾರೋಪಪಟ್ಟಿಯಲ್ಲಿ ಆರೋಪಿಗಳ ವಿರುದ್ಧ ಹಲವು ಸಾಕ್ಷ್ಯಗಳನ್ನು ಉಲ್ಲೇಖ ಮಾಡಲಾಗಿದೆ. 3 ಪ್ರತ್ಯಕ್ಷ ಸಾಕ್ಷಿಗಳಿದ್ದು, ಎಫ್​ಎಸ್​ಎಲ್​ ಮತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳಿವೆ. 164ರ ಅಡಿಯಲ್ಲಿ 27 ಜನರ ಹೇಳಿಕೆ, 161ರ ಅಡಿಯಲ್ಲಿ 70 ಜನರ ಹೇಳಿಕೆಯನ್ನು ಪೊಲೀಸರು  ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ 59 ಜನರ ಸಮಕ್ಷಮದಲ್ಲಿ ಮಹಜರು ಮಾಡಲಾಗಿದೆ. 8 ವೈದ್ಯರು, ತಹಶೀಲ್ದಾರ್‌ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಾಕ್ಷಿ ಕೂಡ ಉಲ್ಲೇಖ ಮಾಡಲಾಗಿದೆ.

ಪ್ರಬಲ ವಾದ – ಪ್ರತಿವಾದ: ಜಾಮೀನು ಅರ್ಜಿ ಸಲ್ಲಿಸಿದ್ದ ದರ್ಶನ್‌ ಪರ ಸಿವಿ ನಾಗೇಶ್‌ ಅವರು ಆರೋಪ ಪಟ್ಟಿಯಲ್ಲಿನ ಕೆಲ ದೋಷಗಳು ಸೇರಿದಂತೆ, ಪೊಲೀಸರ ತನಿಖೆಯಲ್ಲಿನ ಕೆಲ  ಅಂಶಗಳನ್ನು ಕೋರ್ಟ್‌ ಮುಂದೆ ಉಲ್ಲೇಖಿಸಿ ಜಾಮೀನು ನೀಡುವಂತೆ ವಾದಿಸಿದ್ದರು. ಇದಲ್ಲದೆ ಪೋಸ್ಟ್‌ ಮಾರ್ಟಂ ವರದಿ, ಟವರ್‌ ಲೊಕೇಷನ್‌ ಸೇರಿದಂತೆ ತಾಂತ್ರಿಕ ಸಾಕ್ಷಿ ತಿರುಚುವಿಕೆಯ ಬಗ್ಗೆಯೂ ನಾಗೇಶ್‌ ಉಲ್ಲೇಖಿಸಿದ್ದರು.

ಇನ್ನೊಂದೆಡೆ ಎಸ್‌ ಪಿಪಿ,   “ಆರೋಪಿಗಳ, ಸಾಕ್ಷಿಗಳ  ಸಿಡಿಆರ್‌ ದತ್ತಾಂಶವನ್ನು ವಿಶ್ಲೇಷಣೆ , ದರ್ಶನ್‌ ಮೊಬೈಲ್‌, ಪವಿತ್ರಾ ಗೌಡ ಜತೆಗಿನ ಚಾಟ್‌, ಸಾಕ್ಷಿಗಳ ಹೇಳಿಕೆ , ರಕ್ತದ ಕಲೆ, ಹಣದ ಮೂಲ ಸೇರಿದಂತೆ ಇತರೆ ಅಂಶಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು.

ದರ್ಶನ್‌ ಬಂಧನ ಆದದ್ದು ಯಾವಾಗ? : 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೂ.11 ರಂದು ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ತನಿಖೆ ಮುಂದುವರೆದಂತೆ ಪ್ರಕರಣದಲ್ಲಿ ಒಟ್ಟು 18 ಮಂದಿಯನ್ನು ಬಂಧಿಸಲಾಗಿತ್ತು.

ಮೂವರಿಗೆ ಜಾಮೀನು:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎ15  ಕಾರ್ತಿಕ್‌, ಎ17 ನಿಖಿಲ್‌ ಹಾಗೂ ಎ16  ಕೇಶವಮೂರ್ತಿಗೆ ಸೆ.23 ರಂದು ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು.

ಕೊಲೆ ನಂತರದ ಸಾಕ್ಷ್ಯ ನಾಶ ಆರೋಪ ಮಾತ್ರ ಇವರ ಮೇಲಿತ್ತು. ಈ ಜಾಮೀನು ಇತರೆ ಆರೋಪಿಗಳ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಕೋರ್ಟ್‌ ಗೆ ಹೇಳಿತ್ತು.

ಏನಿದು ಪ್ರಕರಣ?: ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ  ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್‌ ಮಾಡುತ್ತಿದ್ದ ಕಾರಣಕ್ಕೆ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು  ಬೆಂಗಳೂರಿಗೆ ಕರೆಸಲಾಗಿತ್ತು. ಜೂ. 8ರಂದು ರಾತ್ರಿ ವಿನಯ್‌ ಎನ್ನುವವರ ಶೆಡ್‌ ಗೆ ಕರೆತಂದು ಬಲವಾಧ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಜೂ. 9ರಂದು ಮೋರಿಯಲ್ಲಿ ಬೀದಿ ನಾಯಿಗಳು ಮೃತದೇಹವನ್ನು ಎಳೆಯುತ್ತಿದ್ದನ್ನು ನೋಡಿ, ಪಕ್ಕದಲ್ಲಿದ್ದ ಅಪಾರ್ಟ್‌ ಮೆಂಟ್‌ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ದೇಹದ ಮೇಲಿನ ಗಾಯಗಳನ್ನು ಗುರುತಿಸಿ ತನಿಖೆಯನ್ನು ಆರಂಭಿಸಲಾಗಿತ್ತು. ಇದು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವುದು ಗೊತ್ತಾಗಿತ್ತು. ಈ ಬಗ್ಗೆ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದರು. ವಶಕ್ಕೆ ಪಡೆದ ನಾಲ್ವರು ಆರೋಪಿಗಳು ದರ್ಶನ್‌ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ವಿಚಾರಣೆಯಲ್ಲಿ ಹೇಳಿರುವುದಾಗಿ ತಿಳಿದು ಬಂದಿತ್ತು.

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.