ಜನತೆಗೆ ಜಾಗ್ರತೆ ಪಾಠ
Team Udayavani, Mar 20, 2021, 6:00 AM IST
ಹುಬ್ಬಳ್ಳಿ/ಬೆಂಗಳೂರು: ಕೋವಿಡ್ 2ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಿಎಂಗಳ ಜತೆ ಸಭೆ ನಡೆಸಿದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಅಲರ್ಟ್ ಆಗಿ ದ್ದಾರೆ. ಕಡ್ಡಾಯ ಮಾಸ್ಕ್, ಸಾಮಾ ಜಿಕ ಅಂತರ, ಸ್ಯಾನಿಟೈಸರ್ ಬಳಕೆಯ ಪಾಠ ಮಾಡುತ್ತಿದ್ದು, ದಂಡಾಸ್ತ್ರ ಪ್ರಯೋಗಿಸುತ್ತಿದ್ದಾರೆ.
ಮಾಲ್, ಮಾರುಕಟ್ಟೆ, ಜನನಿಬಿಡ ಪ್ರದೇಶ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸು ತ್ತಿದ್ದಾರೆ. ಅಂಗಡಿ ಮಾಲಕರು, ಗ್ರಾಹಕ ರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತವರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಿದ್ದಾರೆ. ಪೊಲೀಸರೂ ಕಠಿನ ಕ್ರಮ ಕೈಗೊಳ್ಳುತ್ತಿದ್ದಾರೆ.
ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ$°, ಜಿ.ಪಂ. ಸಿಇಒ ಡಾ| ದಿಲೀಷ್ ಸಸಿ, ನಗರ ಪೊಲೀಸ್ ಆಯುಕ್ತ ಎನ್. ಸತೀಶಕುಮಾರ, ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಸ್ವತಃ ರಸ್ತೆಗಿಳಿದು ಅರಿವು ಮೂಡಿಸಿದರು. ಮಧ್ಯಾಹ್ನದ ಸುಡು ಬಿಸಿಲಿನಲ್ಲೂ ಹಲವೆಡೆ ಸಂಚರಿಸಿ ಸಾರ್ವಜನಿಕರಲ್ಲಿ ಕೊರೊನಾ ಬಗ್ಗೆ ಎಚ್ಚರಿಸಿದರು. ಮಾರ್ಸ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸಿ ದರು. ಕೆಲವರಿಗೆ ಸ್ವತಃ ಮಾಸ್ಕ್ ವಿತರಿಸಿ ಅರಿವು ಮೂಡಿಸಿದರು.
ಯಾದಗಿರಿ ಜಿಲ್ಲೆಯಲ್ಲಿ ಮಾಸ್ಕ್ ಇಲ್ಲದೆ ಓಡಾಡುತ್ತಿದ್ದ ಸಾರ್ವಜನಿಕರಿಗೆ ನಗರಸಭೆ ಪೌರಾಯುಕ್ತ ಬಿ.ಟಿ. ನಾಯಕ ನೇತೃತ್ವದಲ್ಲಿ ದಂಡ ವಿಧಿಸಲಾಯಿತು.
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಮಹಾಂ ತೇಶ್ ಜಿ. ಬೀಳಗಿ ಅವರು, ಕೊರೊನಾ ತಡೆಗೆ ಮಾಸ್ಕ್ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಧಾರವಾಡ ಜಿಲ್ಲಾಧಿಕಾರಿ ನಿತೀಶ ಪಾಟೀಲ್ ಕೂಡ ಪ್ರಮುಖ ಮಾಲ್‌ಗಳು, ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ನೀಡಿದರು.
ಉಡುಪಿ, ದಕ್ಷಿಣ ಕನ್ನಡ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಜಿಲ್ಲಾಡಳಿತದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ:‘ಹೆಣ್ಣಿಗೆ ಸೀರೆ ಯಾಕೆ ಅಂದ’ ಎನ್ನುತ್ತಿದ್ದಾರೆ ನಟಿ ತನುಶ್ರೀ ದತ್ತ
ಕೋವಿಡ್ ಎರಡನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ. ಕೇಂದ್ರದ ಮಾರ್ಗಸೂಚಿ ವಿನಾ ಉಳಿದ ಯಾವುದೇ ರೀತಿಯಲ್ಲೂ ವ್ಯಾಪಾರ ವಹಿವಾಟು ಸಹಿತ ವಾಣಿಜ್ಯ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಿಲ್ಲ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಮದುವೆ ಸಂದರ್ಭ ತೆರೆದ ಪ್ರದೇಶಗಳಲ್ಲಿ 500 ಜನ, ಸಭಾಂಗಣಗಳಲ್ಲಿ 200 ಜನ, ಜನ್ಮದಿನ ಮತ್ತಿತರ ಆಚರಣೆ ಸಂದರ್ಭ ತೆರೆದ ಪ್ರದೇಶಗಳಲ್ಲಿ 100 ಜನ, ಸಭಾಂಗಣಗಳಲ್ಲಿ 50 ಜನ, ಅಂತ್ಯಕ್ರಿಯೆಗಳಲ್ಲಿ 50 ಜನ, ಧಾರ್ಮಿಕ ಮತ್ತು ರಾಜಕೀಯ ಆಚರಣೆ ತೆರೆದ ಪ್ರದೇಶಗಳಲ್ಲಿ 500 ಜನ ಪಾಲ್ಗೊಳ್ಳಲು ಮಾತ್ರ ಅವಕಾಶ ಎಂದು ಇತ್ತೀಚೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.