ಪರೀಕ್ಷೆ ಬರೆಯಲು ಕಳುಹಿಸುವಂತೆ ಪೋಷಕರಲ್ಲಿ ಮನವಿ
Team Udayavani, Jun 25, 2020, 7:05 AM IST
ಬೆಂಗಳೂರು: ರಾಜ್ಯದಲ್ಲಿ ಗುರುವಾರದಿಂದ 10ನೇ ತರಗತಿ ಪರೀಕ್ಷೆಗಳು ಆರಂಭವಾಗಲಿದ್ದು, ಕೋವಿಡ್ 19 ಮಹಾಮಾರಿಯ ನಡುವೆಯೂ ನಿರಾತಂಕವಾಗಿ ಪರೀಕ್ಷೆ ನಡೆಸಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳು ಜೀವನದ ಪ್ರಮುಖ ಘಟ್ಟವಾದ ಎಸ್ ಎಸ್‌ಎಲ್‌ಸಿ ಪರೀಕ್ಷೆಯನ್ನು ನಿರಾತಂಕವಾಗಿ ಬರೆಯ ಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ನಡೆಸಿ ಪರೀಕ್ಷಾ ವ್ಯವಸ್ಥೆಯ ಪೂರ್ವ ತಯಾರಿಯನ್ನು ಅವಲೋಕಿಸಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಅಗತ್ಯ ಸುರಕ್ಷತಾ ಕ್ರಮ ತೆಗೆದುಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆ ಬರೆಯುವ ಮೊದಲು ಆರೋಗ್ಯ ತಪಾಸಣೆ, ಮಾಸ್ಕ್ ವಿತರಣೆ, ಸಮರ್ಪಕ ಸ್ಯಾನಿಟೈಸೇಷನ್, ಅಗತ್ಯ ವೈದ್ಯಕೀಯ ಸೌಲಭ್ಯ ದೊರೆಯುವುದು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಶಿಕ್ಷಣ ಸಚಿವರು ತೆಗೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷಿತ ಪರೀಕ್ಷಾ ವ್ಯವಸ್ಥೆಗಾಗಿ ಶಿಕ್ಷಣ ಇಲಾಖೆಯೊಂದಿಗೆ ಆರೋಗ್ಯ, ಸಾರಿಗೆ, ಗೃಹ ಇಲಾಖೆಯೂ ಕೈಜೋಡಿಸಿದೆ. ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಎಲ್ಲ ಕ್ರಮಗಳ ಹಿನ್ನೆಲೆಯಲ್ಲಿ ಪೋಷಕರು ಭಯ ಬಿಟ್ಟು ಧೈರ್ಯ, ವಿಶ್ವಾಸಗಳಿಂದ ಮಕ್ಕಳನ್ನು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.