Oct 31ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ವಿಸ್ತರಿಸುವಂತೆ ಮನವಿ
Team Udayavani, Oct 22, 2023, 11:35 PM IST
ಬೆಂಗಳೂರು: ರಾಜ್ಯದ ಶಾಲೆಗಳಿಗೆ ನೀಡಿರುವ ದಸರಾ ರಜೆಯನ್ನು ಪರಿಷ್ಕರಿಸಿ ಅ. 31ರ ವರೆಗೆ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘವು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯನ್ನು ಒತ್ತಾಯಿಸಿದೆ.
ಶಾಲಾ ಶಿಕ್ಷಣ ಆಯುಕ್ತರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಸಿದ್ದಬಸಪ್ಪ ಅವರು, ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ಅನಂತರದಲ್ಲಿ ಶಾಲೆಗಳಿಗೆ ದಸರಾ ರಜೆಯನ್ನು ಅ. 3ರಿಂದ 31ರ ವರೆಗೆ (29 ದಿನ) ನೀಡುವ ಮೂಲಕ ದಸರಾ ಸೇರಿದಂತೆ ನಾಡಿನ ಪರಂಪರೆ, ಆಚರಣೆಗಳನ್ನು ತಿಳಿಯಲು ಮಕ್ಕಳಿಗೆ ಅವಕಾಶ ನೀಡಲಾಗುತ್ತಿತ್ತು ಎಂದು ಹೇಳಿದ್ದಾರೆ.
ಆದರೆ, ಇತ್ತೀಚಿನ ವರ್ಷಗಳಲ್ಲಿ ದಸರಾ ರಜೆ ಅವಧಿಯನ್ನು ಅರ್ಧದಷ್ಟು ಕಡಿಮೆ ಮಾಡಿ 14- 15 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಇದರಿಂದ ಮಕ್ಕಳು ಹಾಗೂ ಶಿಕ್ಷಕರಿಗಿದ್ದ 230 ಶಾಲಾ ದಿನಗಳು ಈಗ 260 ದಿನಗಳಿಗೆ ಏರಿಕೆಯಾಗಿದ್ದು ಇಬ್ಬರ ಮೇಲೂ ಶೈಕ್ಷಣಿಕ ಒತ್ತಡ ಹೆಚ್ಚಾಗುತ್ತದೆ. ಆದ್ದರಿಂದ ದಸರಾ ರಜೆಯನ್ನು ಪುನರ್ ಪರಿಶೀಲಿಸಿ ಅ. 31ರ ವರೆಗೆ ರಜೆ ವಿಸ್ತರಿಸಲು ಕ್ರಮ ವಹಿಸಬೇಕು ಎಂದು ಅವರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.