ಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ: ಚರ್ಚೆಯಿಲ್ಲದೆ ಒಪ್ಪಿಗೆ
Team Udayavani, Feb 14, 2019, 1:30 AM IST
ವಿಧಾನಸಭೆ: ಸರ್ಕಾರಿ ಸೇವೆಗಳಲ್ಲಿ ಸಿ ಮತ್ತು ಡಿ ಗ್ರೂಪ್ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳು ವುದಕ್ಕೂ ಮೀಸಲಾತಿ ಕಲ್ಪಿಸುವ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ ನೇಮಕಾತಿ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿಯ ಧರಣಿ ನಡುವೆಯೇ ಯಾವುದೇ ಚರ್ಚೆಯಿಲ್ಲದೇ ಅಂಗೀಕಾರಗೊಂಡಿತು.
1990ರ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ ಅಧಿನಿಯಮದಲ್ಲಿನ ಗೊಂದಲಗಳನ್ನು ನಿವಾರಿಸಿ, 45 ದಿನಗಳಿಗೆ ಹೆಚ್ಚಲ್ಲದ ತಾತ್ಕಾಲಿಕ, ಅರೆಕಾಲಿಕ, ಗುತ್ತಿಗೆ ಆಧಾರದ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಮೀಸಲಾತಿ ಅನ್ವಯ ನೇಮಕ ಮಾಡಿಕೊಳ್ಳಲು ತಿದ್ದುಪಡಿ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಖಾಸಗಿ ವಿವಿ ವಿಧೇಯಕ ಅನುಮೋದನೆ
ಬಿಜೆಪಿ ಸದಸ್ಯರ ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಮೂರು ಖಾಸಗಿ ವಿಶ್ವ ವಿದ್ಯಾಲಯ ಸ್ಥಾಪನೆಗೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ವಿಧೇಯಕ ಮಂಡಿಸಿದರು. ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಅಡಿಯಲ್ಲಿ ಆರ್.ವಿ. ವಿಶ್ವವಿದ್ಯಾಲಯ. ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್ ವಿಶ್ವವಿದ್ಯಾಲಯ ಸ್ಥಾಪನೆಗೆ ಅಂಗೀಕಾರ ನೀಡಲಾಯಿತು.
ಆದಿಚುಂಚನಗಿರಿ ವಿಶ್ವವಿದ್ಯಾಲಯ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದ್ದು, ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತ ಸದಸ್ಯರ ಸಂಖ್ಯೆಯನ್ನು ಎರಡರಿಂದ ಮೂರಕ್ಕೆ ಹೆಚ್ಚಿಸುವುದು. ಕುಲಾಧಿಪತಿಯವರು ನಾಮ ನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರನ್ನು ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ನೇಮಿಸಲು ಅವಕಾಶ ಕಲ್ಪಿಸಿ, ವಿಧೇಯಕ್ಕೆ ತಿದ್ದುಪಡಿಗೊಳಿಸಿ ಅಂಗೀಕಾರ ಮಾಡಲಾಯಿತು.
ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದ್ದು, ಬಸವಕಲ್ಯಾಣ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಗಳನ್ನು ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ಹೊರಗಿಡಲು ತಿದ್ದುಪಡಿ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.