ಮೀಸಲು ಭೂಮಿ ಮಂಜೂರು: ವರದಿಯಂತೆ ತೀರ್ಮಾನ
Team Udayavani, Mar 31, 2022, 5:55 AM IST
ಬೆಂಗಳೂರು: ಕುಮ್ಕಿ, ಗೋಮಾಳ, ಗಾಯರಾಣ, ಹುಲ್ಲು ಬನ್ನಿ, ಸೊಪ್ಪಿನಬೆಟ್ಟ ಇತ್ಯಾದಿ ಗ್ರಾಮೀಣ ಪ್ರದೇಶದ ಜಮೀನುಗಳನ್ನು ಸಾಗುವಳಿದಾರರಿಗೆ ಮಂಜೂರು ಮಾಡುವ ಸಂಬಂಧ ನೀತಿ ರೂಪಿಸಲು ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದ್ದು, ಸಮಿತಿಯ ವರದಿ ಪ್ರಕಾರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯ ಕುಮ್ಕಿ ಜಮೀನಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಆದೇಶವಿತ್ತು. ಆದರೆ, ಕೇಂದ್ರ ಸರಕಾರದ ಅನುಮತಿ ಪಡೆದುಕೊಂಡು ಮುಂದುವರಿಯ ಬೇಕಾಗುತ್ತದೆ ಎಂದು ಕಾನೂನು ಇಲಾಖೆ ಅದಕ್ಕೆ ಒಪ್ಪಿಗೆ ಕೊಟ್ಟಿಲ್ಲ. ಈಗ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ. ಅದರಂತೆ ಮುಂದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕರ್ನಾಟಕ ಭೂ ಕಂದಾಯ ಅಧಿನಿಯಮ-1964ರ ಕಲಂ 79(2)ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕುಮ್ಕಿ, ಬಾಣಿ ಮತ್ತು ಕಾಣಿ, ಉತ್ತರ ಕನ್ನಡ ಜಿಲ್ಲೆಯಲ್ಲಿನ ಬೆಟ್ಟ-ಹಾಡಿ, ಮೈಸೂರು ಪ್ರದೇಶದಲ್ಲಿನ ಕಾನು -ಸೊಪ್ಪಿನ ಬೆಟ್ಟ, ಕೊಡಗಿನ ಜಮ್ಮಾ-ಬಾಣಿ, ಹೈದರಬಾದ ಕರ್ನಾಟಕ ಭಾಗದ ಮೋಟಸ್ಥಲ್ ತರಿ ಭೂಮಿಗಳ ಬಗೆಗಿನ ವಿಶೇಷಾಧಿಕಾರ ಮುಂದುವರಿಯತಕ್ಕದ್ದು ಎಂದು ತಿಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕರಾವಳಿಯಲ್ಲಿ 84 ಸಾವಿರ ಹಕ್ಕುಪತ್ರ ವಿತರಣೆ
ಗ್ರಾಮೀಣ ಭಾಗದಲ್ಲಿ ಸರಕಾರಿ ಜಮೀನಿನಲ್ಲಿ ಮನೆ ಕಟ್ಟಿಸಿಕೊಂಡಿರುವ ಹಾಗೂ ನಗರ ಪ್ರದೇಶದಲ್ಲಿ ಸರಕಾರಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡವರಿಗೆ 94ಸಿ ಮತ್ತು 94ಸಿಸಿ ಅಡಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಒಟ್ಟು 84,104 ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 94ಸಿ ಅಡಿಯಲ್ಲಿ 49,383 ಹಾಗೂ 94ಸಿಸಿ ಅಡಿಯಲ್ಲಿ 24,760 ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ 94ಸಿ ಅಡಿ 7,782 ಹಾಗೂ 94ಸಿಸಿ ಅಡಿ 2,185 ಹಕ್ಕುಪತ್ರಗಳನ್ನು ವಿತರಿಸಲಾಗಿದೆ ಎಂದು ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಪ್ರಶ್ನೆಗೆ ಕಂದಾಯ ಸಚಿವ ಆರ್. ಅಶೋಕ್ ಉತ್ತರ ನೀಡಿದರು.
24 ಸಾವಿರ ಅರ್ಜಿಗಳ ವಿಲೇವಾರಿ: ಅಶೋಕ್
ಬೆಂಗಳೂರು: ಈವರೆಗೆ 5 ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ನಡೆದಿವೆ. 29,522 ಅರ್ಜಿಗಳು ಬಂದಿದ್ದವು. ಅದರಲ್ಲಿ 24,460 ಅರ್ಜಿಗಳಿಗೆ ಪರಿಹಾರ ದೊರಕಿಸಲಾಗಿದೆ. ಉಳಿದ ಅರ್ಜಿಗಳನ್ನು ಆಯಾ ಇಲಾಖೆಗಳಿಗೆ ವರ್ಗಾಯಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಸಹ ಎರಡು ಕಡೆ ಗ್ರಾಮ ವಾಸ್ತವ್ಯಕ್ಕೆ ಬಂದಿದ್ದರು. ಗ್ರಾಮ ವಾಸ್ತವ್ಯ ನಡೆದ ಗ್ರಾಮಗಳ ಸ್ಥಳೀಯ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳನ್ನು ಕಲ್ಪಿಸಲು 1 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಯವರು ಒದಗಿಸಿ ದ್ದಾರೆ ಎಂದರು.
60 ಲಕ್ಷ ರೈತರ ಮನೆಬಾಗಿಲಿಗೆ ದಾಖಲೆ ಪತ್ರ ಹಸ್ತಾಂತರ ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಯಡಿ ಪಹಣಿ, ಅಟ್ಲಾಸ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತಿತರ ದಾಖಲೆಗಳನ್ನು ರೈತರಿಗೆ ತಲುಪಿಸಲಾಗುತ್ತಿದೆ. ಅದರಂತೆ ಈವರೆಗೆ 60 ಲಕ್ಷ ರೈತರ ಮನೆ ಬಾಗಿಲಿಗೆ ಕಂದಾಯ ದಾಖಲೆಗಳನ್ನು ತಲುಪಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಜಾತಿ ಪ್ರಮಾಣ ಹೊರತುಪಡಿಸಿ ಉಳಿದ ಕಂದಾಯ ದಾಖಲೆಗಳ ಅವಧಿ 1 ವರ್ಷ ಇರಲಿದೆ ಎಂದು ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಪ್ರಶ್ನೆಗೆ ಅಶೋಕ್ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.