ಕೈಗಾರಿಕಾ ಪ್ರದೇಶದಲ್ಲಿ ತಲೆ ಎತ್ತಲಿದೆ ರೆಸಿಡೆನ್ಸಿಯಲ್ ಟೌನ್ ಶಿಪ್: ಮುರುಗೇಶ್ ನಿರಾಣಿ
Team Udayavani, Aug 20, 2021, 4:43 PM IST
ಬೆಂಗಳೂರು: ಇನ್ನು ಮುಂದೆ ಕೈಗಾರಿಕಾ ಪ್ರದೇಶಗಳಲ್ಲಿ ಶೇ.10ರಿಂದ 15ರಷ್ಟು ಜಾಗವನ್ನು ವಸತಿ ಬಡಾವಣೆ (ರೆಸಿಡೆನ್ಸಿಯಲ್ ಟೌನ್‍ಶಿಪ್) ಗಳ ನಿರ್ಮಾಣದ ಉದ್ದೇಶಕ್ಕಾಗಿ ಮೀಸಲಿಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಮುರುಗೇಶ್ ನಿರಾಣಿ ಎಂದು ಹೇಳಿದ್ದಾರೆ.
ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಕಾರ್ಯ ನಿರ್ವಹಣಾಕಾರಿ(ಸಿಇಒ) ಎನ್.ಶಿವಶಂಕರ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಗುರುವಾರ ನಡೆಸಿದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ.
ಮೀಸಲಿರಿಸಿದ ಜಾಗದಲ್ಲಿ ಶಾಲಾ-ಕಾಲೇಜುಗಳು, ಆರೋಗ್ಯ ಕೇಂದ್ರ, ವಾಣಿಜ್ಯ ಸಂಕೀರ್ಣಗಳು, ಉದ್ಯಾನವನ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಯೋಜನೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ಮಾಡಿದ್ದಾರೆ. ಸಮಗ್ರ ಕೈಗಾರಿಕಾ ನಿವಾಸಿಗಳ ನಗರ (ಇಂಟಿಗ್ರೇಟೆಡ್ ಇಂಡಸ್ಟ್ರಿಯಲ್ ರೆಸಿಡೆನ್ಸಿಯಲ್ ಟೌನ್‍ಶಿಪ್) ಪರಿಕಲ್ಪನೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿನ ಜಾಗವನ್ನು ಶೇ. 10ರಿಂದ 15ರಷ್ಟು ವಸತಿ ಬಡಾವಣೆಯ ಉದ್ದೇಶಕ್ಕಾಗಿ ಕಾಯ್ದಿರಿಸಬೇಕೆಂದು ಸೂಚಿಸಿದರು.
ಇದನ್ನೂ ಓದಿ:ಭಯೋತ್ಪಾದನೆಯ ಪ್ರಾಬಲ್ಯ ಶಾಶ್ವತವಲ್ಲ : ಪ್ರಧಾನಿ ನರೇಂದ್ರ ಮೋದಿ
ವಾಕ್ -ಟು -ವರ್ಕ್ ಎಂಬ ಪರಿಕಲ್ಪನೆಯಡಿ ಕೈಗಾರಿಕಾ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂಬ ಯೋಜನೆ ಹಾಕಿಕೊಳ್ಳಲಾಗಿದೆ. ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ತಾವು ವಾಸಿಸುವ ಪ್ರದೇಶದಿಂದ ಬಂದುಹೋಗಲು ಸಂಚಾರ ದಟ್ಟಣೆ, ವಾಹನಗಳ ಸಮಸ್ಯೆ, ಸಮಯದ ಅಭಾವ ಹೀಗೆ ನಾನಾ ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ವಿನೂತನ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದರು.
ಬೆಂಗಳೂರಿನಲ್ಲಿ ಕೈಗಾರಿಕೆಗಳಿದ್ದರೆ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಸೇರಿದಂತೆ ದೂರದಿಂದ ಬರಲು ಸಿಬ್ಬಂದಿಗಳಿಗೆ ಅನಾನುಕೂಲವಾಗಲಿವೆ. ಕೈಗಾರಿಕಾ ಪ್ರದೇಶದಲ್ಲೇ ವಸತಿಗಳನ್ನು ನಿರ್ಮಿಸಿಕೊಟ್ಟರೆ ಸಮಯದ ಉಳಿತಾಯ ಹಾಗೂ ದಕ್ಷತೆಯಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಪ್ರದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ವಸತಿ ಸಮ್ಮುಚ್ಚಯಗಳು, ಆಸ್ಪತ್ರೆ, ಮಾಲ್‍ಗಳು, ಶಾಲಾ-ಕಾಲೇಜುಗಳು, ನೀರಿನ ಸೌಲಭ್ಯ ಸೇರಿದಂತೆ ಎಲ್ಲ ರೀತಿಯ ಸೌಲಭ್ಯವು ಇದರಲ್ಲಿ ಸಿಗಲಿವೆ ಹೇಳಿದರು.
ಶೀಘ್ರದಲ್ಲೇ ಉನ್ನತ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಲಾಗುವುದು. ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆಗಳನ್ನು ಆಕರ್ಷಿಸುವ ವಿಷಯಗಳ ಬಗ್ಗೆ ಚರ್ಚಿಸುಲಾಗುವುದು. ಕೈಗಾರಿಕಾ ವಲಯ ಮತ್ತು ಹೂಡಿಕೆದಾರರ ಸ್ನೇಹಿ ವಾತಾವರಣದಲ್ಲಿ ರಾಜ್ಯವನ್ನು ಮುಂಚೂಣಿಯ ಸ್ಥಾನದಲ್ಲಿ ಕಾಯ್ದುಕೊಳ್ಳುವಲ್ಲಿ ಸರ್ಕಾರ ಬದ್ದವಾಗಿದೆ ಎಂದು ಆಶ್ವಾಸನೆ ನೀಡಿದರು.
ಕೈಗಾರಿಕಾ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡುವುದಾಗಿ ಭರವಸೆ ನೀಡಿದ ನಿರಾಣಿ, ಕರ್ನಾಟಕವು ಹೂಡಿಕೆದಾರರಿಗೆ ಆದ್ಯತೆಯ ತಾಣವಾಗಿದೆ. ಮುಂದಿನ ದಿನಗಳಲ್ಲಿ ಹೂಡಿಕೆದಾರ ಸ್ನೇಹಿ ಮತ್ತು ವ್ಯಾಪಾರ ಸ್ನೇಹಿ ಹಂತಗಳೊಂದಿಗೆ ನಾವು ಮತ್ತಷ್ಟು ಪ್ರಗತಿಯನ್ನು ಖಚಿತಪಡಿಸುತ್ತೇವೆ ಎಂದು ಭರವಸೆ ಕೊಟ್ಟರು.
ಕಾರ್ಯಕ್ರಮದಲ್ಲಿ ಬಾಷ್ ಲಿಮಿಟೆಡ್ ವ್ಯವಸ್ಥಾಪಕ ನಿದೇರ್ಶಕ ಹಾಗೂ ಭಾರತದ ಬಾಷ್ ಸಮೂಹ ಸಂಸ್ಥೆಯ ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ಹಾಗೂ ಬ್ರಿಗೇಡ್ ಎಂಟರ್ಪ್ರೈಸಸ್ ನ ವ್ಯವಸ್ಥಾಪಕ ನಿದೇರ್ಶಕ ಮತ್ತು ಅಧ್ಯಕ್ಷ ಎಂ.ಆರ್. ಜೈಶಂಕರ್ , ಬಿಸಿಐಸಿ ಅಧ್ಯಕ್ಷರಾದ ಟಿ.ಆರ್.ಪರಶುರಾಮನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.