ಸರ್ಕಾರ ನಡೆಸಲಾಗದಿದ್ದರೆ ರಾಜೀನಾಮೆ ನೀಡಿ: ಬಿಎಸ್‌ವೈ
Team Udayavani, Jun 22, 2019, 3:05 AM IST
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಅವಕಾಶ ನೀಡುವುದಿಲ್ಲ. ಶಕ್ತಿ ಇದ್ದರೆ ಸರ್ಕಾರ ನಡೆಸಲಿ. ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಹೊರ ಬರಲಿ. ಸ್ಥಿರ ಹಾಗೂ ಜನಪರ ಸರ್ಕಾರವನ್ನು ನಾವು ರಚಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಯಡಿಯೂರಪ್ಪ, ದೇವೇಗೌಡರು ಮಧ್ಯಂತರ ಚುನಾವಣೆ ನಿಶ್ಚಿತ ಎಂದು ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ.
“ನಿಮಗೆ ಶಕ್ತಿ ಇದ್ದರೆ ಸರ್ಕಾರ ನಡೆಸಿ. ಒಂದೊಮ್ಮೆ ನಿಮಗೆ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಹೊರ ಬನ್ನಿ. ನಾವು ಸ್ಥಿರ, ಜನಪರ ಸರ್ಕಾರ ರಚಿಸುತ್ತೇವೆ. ವಿಧಾನಸಭೆಯಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿ 105 ಶಾಸಕ ಬಲ ಹೊಂದಿದ್ದು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಅವಕಾಶ ನೀಡುವುದಿಲ್ಲ’ ಎಂದು ಖಡಕ್ ಹೇಳಿಕೆ ನೀಡಿದ್ದಾರೆ.
ರಾಜ್ಯದ ಜನ ಸಮ್ಮಿಶ್ರ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದಾರೆ. ಸರ್ಕಾರ ಎಲ್ಲ ಹಂತದಲ್ಲೂ ವಿಫಲವಾಗಿದೆ. 13 ತಿಂಗಳಿನಿಂದ ಜನರಿಗೆ ಸಾಲಮನ್ನಾ ಸೇರಿ ಹಲವು ಭರವಸೆ ನೀಡುತ್ತಲೇ ಬಂದಿದ್ದರೂ ಯಾವುದೂ ಈಡೇರಿಲ್ಲ. ರಾಜ್ಯದ ಜನತೆ ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಇದೇ ಕಾರಣಕ್ಕಾಗಿ ರಾಜ್ಯದ ಮತದಾರರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಜನರ ಭಾವನೆ ಅರ್ಥ ಮಾಡಿಕೊಂಡು ರಾಜೀನಾಮೆ ನೀಡಬೇಕಿತ್ತು ಎಂದು ತಿಳಿಸಿದ್ದಾರೆ.
ಒಂದೆಡೆ, ಕಾಂಗ್ರೆಸ್‌ನವರನ್ನು ಹತ್ತಿಕ್ಕಲು, ಮತ್ತೂಂದೆಡೆ, ಜನರ ಗಮನವನ್ನು ಬೇರೆಡೆ ಸೆಳೆಯಲು ಮಧ್ಯಂತರ ಚುನಾವಣೆ ಮತ್ತು ಗ್ರಾಮ ವಾಸ್ತವ್ಯದ ನಾಟಕ ಆಡುತ್ತಿದ್ದೀರಿ ಎಂದು ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಸಿಎಂಗೆ ಟಾಂಗ್: ಕಳೆದ 13 ತಿಂಗಳನ್ನು ನೀವು ಪಂಚತಾರಾ ಹೋಟೆಲ್‌ನಲ್ಲೇ ಕಳೆದಿರಿ. ನಾವು ಹೇಳಿದಾಗ ನೀವು ಹೊರ ಬರದೇ, ಈಗ ಏಕಾಏಕಿ ಹಳ್ಳಿಗಳು ಹೇಗೆ ನೆನಪಾದವು? ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಆ ಭಾಗದ ಜನರ ವಿರೋಧಿ ನಿಲುವನ್ನೇ ತಾಳುತ್ತಾ ಬಂದಿದ್ದೀರಿ. “ಉತ್ತರ ಕರ್ನಾಟಕದ ಜನ ನನಗೆ ಓಟು ನೀಡಿಲ್ಲ.
ನಾನು ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರ ಕೃಪಾಕಟಾಕ್ಷದಿಂದ. ಹಾಗಾಗಿ, ನಾನು ಉತ್ತರ ಕರ್ನಾಟಕದ ಜನರ ಹಂಗಿನಲ್ಲಿಲ್ಲ. ನಾನಿರುವುದು ರಾಹುಲ್‌ಗಾಂಧಿ ಹಂಗಿನಲ್ಲಿ’ ಎಂದಿದ್ದ ನಿಮಗೆ ಈಗ ಉತ್ತರ ಕರ್ನಾಟಕದ ನೆನಪಾದದ್ದು, ನನಗೆ ಆಶ್ಚರ್ಯ ಹಾಗೂ ವಿಸ್ಮಯ ಮೂಡಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.