ಸಮನ್ವಯಾಧಿಕಾರಿ ಸ್ಥಾನಕ್ಕೆ ಕಾ.ತ.ಚಿಕ್ಕಣ್ಣ ರಾಜೀನಾಮೆ
Team Udayavani, Oct 14, 2019, 3:02 AM IST
ಬೆಂಗಳೂರು: ಕಳೆದ ಏಳು ವರ್ಷಗಳಿಂದ ರಾಷ್ಟ್ರೀಯ ಸಂತ ಕವಿ ಕನಕದಾಸ ಮತ್ತು ಅಧ್ಯಯನ ಕೇಂದ್ರದ ಸಮನ್ವಯಾಧಿ ಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಾ.ತ.ಚಿಕ್ಕಣ್ಣ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ಇಲಾಖೆಯ ನಿರ್ದೇಶಕರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿರುವುದಾಗಿ ಕಾ.ತ.ಚಿಕ್ಕಣ್ಣ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಏಳು ವರ್ಷಗಳ ಅವಧಿಯ ಕಾರ್ಯ ತೃಪ್ತಿ ತಂದಿದೆ. ನನ್ನ ಅವಧಿ ಯಲ್ಲಿ 248 ಕಾರ್ಯಕ್ರಮಗಳು ನಡೆದಿದ್ದು, 76 ಕೃತಿಗಳನ್ನು ಪ್ರಕಟಿಸಲಾಗಿದೆ. 10 ಮಂದಿ ಪಿಎಚ್‌ಡಿ ಪಡೆದಿದ್ದಾರೆ. ಜತೆಗೆ ಕಾಲೇಜುಗಳಲ್ಲಿ ಪ್ರಾರಂಭಿಸಿದ ಕನಕ ಓದು ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನನಗೆ ಈ ಕೆಲಸ ಸಾಕು ಅನಿಸಿತು. ಆ ಹಿನ್ನೆಲೆಯಲ್ಲಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
15 ಭಾಷೆಗೆ ಕನಕದಾಸರ ಸಾಹಿತ್ಯ ಅನುವಾದ ಹಾಗೂ ತತ್ವಪದಗಳನ್ನು 50 ಸಂಪುಟಗಳಲ್ಲಿ ತರುವ ಯೋಜನೆ ಪೂರ್ಣಗೊಳಿಸುವವರೆಗೆ ಅಧಿಕಾರದಲ್ಲಿ ಮುಂದುವರಿಯುವ ನಿಬಂಧನೆಯಿತ್ತು. ಈ ಎರಡೂ ಯೋಜನೆ ಮುದ್ರಣಕ್ಕೆ ಸಿದ್ಧವಾಗಿದ್ದು, ಟೆಂಡರ್ ಪ್ರಕ್ರಿಯೆ ನಡೆಯಬೇಕಾಗಿದೆ ಎಂದು ಹೇಳಿದ್ದಾರೆ.
ವಿಸ್ತರಣೆ ಮಾಡಲಾಗಿತ್ತು: ರಾಷ್ಟ್ರೀಯ ಸಂತಕವಿ ಕನಕದಾಸ ಮತ್ತು ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿಯ ಕಾರ್ಯ ಅವಧಿ 3ವರ್ಷವಾಗಿದ್ದು, ಕಾ.ತ.ಚಿಕ್ಕಣ್ಣ ಅವರು ಈಗಾಗಲೇ ಎರಡು ಅವಧಿ ಪೂರ್ಣಗೊಳಿಸಿದ್ದರು. ಅಧ್ಯ ಯನ ಕೇಂದ್ರದ ಕೆಲ ಯೋಜನೆಗಳು ಮುಕ್ತಾಯದ ಹಂತ ತಲುಪಿದ್ದರಿಂದ ಅವರ ಅವಧಿಯನ್ನು ಸರ್ಕಾರ ವಿಸ್ತರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.