ಶಕ್ತಿ ಸೌಧದಲ್ಲಿ ರಾಜೀನಾಮೆ “ಹೈ ಡ್ರಾಮಾ’

Team Udayavani, Jul 11, 2019, 3:10 AM IST

shktisoudha

ಬೆಂಗಳೂರು: ರಾಜ್ಯದ ಶಕ್ತಿಸೌಧ ಬುಧವಾರ ಅಕ್ಷರಶ: “ಶಕ್ತಿ ಪ್ರದರ್ಶನ’ದ ಅಖಾಡವಾಗಿ ಬಿಟ್ಟಿತ್ತು. ಸರ್ಕಾರ ಉಳಿಸಬೇಕೆನ್ನುವ ಟೀಮ್‌ ಹಾಗೂ ಉರುಳಿಸಬೇಕೆನ್ನುವ ಟೀಮ್‌ಗಳ ನಡುವೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಬಹಿರಂಗ ಕಿತ್ತಾಟವೇ ನಡೆದು ಬಿಟ್ಟಿತ್ತು. ಇದೆಲ್ಲ ನಡೆದದ್ದು ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್‌ ರಾಜೀನಾಮೆ ನೀಡಿ ಹೊರ ಬರುವ ಸಂದರ್ಭದಲ್ಲಿ.

ಮಧ್ಯಾಹ್ನ ನಾಲ್ಕು ಗಂಟೆ ಹೊತ್ತಿಗೆ ಎಂ.ಟಿ.ಬಿ.ನಾಗರಾಜ್‌ ಹಾಗೂ ಡಾ.ಸುಧಾಕರ್‌ ರಾಜೀನಾಮೆ ಸಲ್ಲಿಸಿ ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಸ್ಪೀಕರ್‌ ಕಚೇರಿಯಿಂದ ಹೊರಗಡೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ನಜೀರ್‌ ಅಹಮದ್‌, ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಡಾ.ಸುಧಾಕರ್‌ ಅವರನ್ನು ಕೊರಳಿಗೆ ಕೈ ಹಾಕಿ ಹಿಡಿದುಕೊಂಡು, ಲಿಫ್ಟ್ ಮೂಲಕ ಮೂರನೇ ಮಹಡಿಯಲ್ಲಿರುವ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್‌ ಅವರ ಕೊಠಡಿಗೆ ಕರೆದುಕೊಂಡು ಹೋದರು.

ಈ ಸಂದರ್ಭದಲ್ಲಿ ಶಾಸಕ ಸುಧಾಕರ್‌ ಹಾಗೂ ಕಾಂಗ್ರೆಸ್‌ ನಾಯಕರ ನಡುವೆ ತಳ್ಳಾಟ ಉಂಟಾಯಿತು. ಡಾ.ಸುಧಾಕರ್‌ ಅವರನ್ನು ಕಾಂಗ್ರೆಸ್‌ ನಾಯಕರು “ಎತ್ತಿಕೊಂಡು ಹೋಗಿದ್ದಾರೆ’ ಎಂಬ ಮಾಹಿತಿ ದೊರೆತ ತಕ್ಷಣ ಅಲ್ಲಿಯೇ ಸ್ಪೀಕರ್‌ ಕಚೇರಿಗೆ ಆಗಮಿಸಿದ್ದ ಬಿಜೆಪಿ ಶಾಸಕರಾದ ಬಸವರಾಜ್‌ ಬೊಮ್ಮಾಯಿ, ಜೆ.ಸಿ.ಮಾಧುಸ್ವಾಮಿ ಅವರು ಸ್ಪೀಕರ್‌ ರಮೇಶ್‌ ಕುಮಾರ್‌ಗೆ ಡಾ.ಸುಧಾಕರ್‌ ಮೇಲೆ ಹಲ್ಲೆ ನಡೆಸಲಾಗಿದೆ. ವಿಧಾನಸೌಧದಲ್ಲಿ ಶಾಸಕರಿಗೆ ಭದ್ರತೆಯಿಲ್ಲ ಎಂದು ದೂರು ಸಲ್ಲಿಸಿದರು.

ನಂತರ, ವಿಧಾನಸೌಧದ ಮೂರನೇ ಮಹಡಿಗೆ ಬಿಜೆಪಿ ಶಾಸಕರು ಸುಧಾಕರ್‌ ಭೇಟಿಗೆ ತೆರಳಿದರು. ಈ ಸಂದರ್ಭದಲ್ಲಿ ಪೊಲೀಸರು ಮೂರನೇ ಮಹಡಿಗೆ ಯಾರನ್ನೂ ಒಳಗೆ ಬಿಡುವುದಿಲ್ಲ ಎಂದು ಮೂರನೇ ಮಹಡಿಯ ಗೇಟ್‌ ಹಾಕಿದರು. ಈ ಸಂದರ್ಭದಲ್ಲಿ ಬಿಜೆಪಿಯ ಸಹ ವಕ್ತಾರ ಆನಂದ್‌ ಹಾಗೂ ಶಾಸಕ ಜೆ.ಸಿ.ಮಾಧುಸ್ವಾಮಿ ಹಾಗೂ ಪೊಲೀಸ್‌ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ನಡುವೆ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿ, ಡಾ.ಸುಧಾಕರ್‌ ಅವರನ್ನು ಮನವೊಲಿಸುವ ಯತ್ನ ನಡೆಸಿದರು.

ಜಾರ್ಜ್‌ ಕಚೇರಿ ಎದುರು ಪ್ರತಿಭಟನೆ: ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್‌ ಕಚೇರಿ ಎದುರು ಸುಧಾಕರ್‌ ಭೇಟಿಗೆ ಅವಕಾಶ ನೀಡುವಂತೆ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಶಾಸಕರು ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಬಿಜೆಪಿ ಶಾಸಕರನ್ನು ಎಳೆದು ಹೊರ ನಡೆಯುವಂತೆ ತಳ್ಳಿದರು.

ಇದರಿಂದ ಆಕ್ರೋಶಗೊಂಡ ಬಿಜೆಪಿ ಶಾಸಕ ಬಸವರಾಜ್‌ ಬೊಮ್ಮಾಯಿ ಅವರು ಜಾರ್ಜ್‌ ಕಚೇರಿಯ ಬಾಗಿಲಿಗೆ ಜೋರಾಗಿ ಗುದ್ದಿ ಕಾಲಿನಿಂದ ಒದ್ದರು. ಕೆ.ಜೆ.ಜಾರ್ಜ್‌ ಕಚೇರಿಯಲ್ಲಿ ಹೈ ಡ್ರಾಮಾ ಶುರುವಾಗುತ್ತಿರುವಂತೆ ಬಿಜೆಪಿ ಶಾಸಕರು ವಿಧಾನಸೌಧಕ್ಕೆ ದೌಡಾಯಿಸಿದರು. ಈ ಸಂದರ್ಭದಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಯುವ ಕಾಂಗ್ರೆಸ್‌ ಪತ್ರಿಭಟನೆ: ಬಿಜೆಪಿ ಶಾಸಕರು ಸಚಿವ ಜಾರ್ಜ್‌ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವಂತೆ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ವಿಧಾನಸೌಧಕ್ಕೆ ಆಗಮಿಸಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟ ನಡೆಯಿತು.

ಆಗ ಮಧ್ಯ ಪ್ರವೇಶಿಸಿದ ಪೊಲೀಸರು ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಹೊರ ನಡೆಯುವಂತೆ ತಳ್ಳಿದರು. ಬಿಜೆಪಿಯವರನ್ನೂ ಹೊರ ಹಾಕುವಂತೆ ಅವರು ಆಗ್ರಹಿಸಿದ್ದರಿಂದ ಪೊಲೀಸರು ಅಸಹಾಯಕರಾಗಿ ನಿಲ್ಲುವಂತಾಯಿತು.

ಸುಧಾಕರ್‌ರನ್ನು ಕರೆದೊಯ್ಯಲು ಕಮಿಷನರ್‌: ಡಾ.ಸುಧಾಕರ್‌ ಮೇಲೆ ಹಲ್ಲೆಯಾಗಿದೆ ಎಂದು ಬಿಜೆಪಿ ರಾಜ್ಯಪಾಲರಿಗೆ ಮೌಖೀಕ ದೂರು ಸಲ್ಲಿಸಿದ ಬೆನ್ನಲ್ಲೇ ರಾಜ್ಯಪಾಲ ವಜುಬಾಯಿ ವಾಲಾ ಅವರು ನಗರ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ಗೆ ಸೂಚನೆ ನೀಡಿ, ಡಾ.ಸುಧಾಕರ್‌ ಅವರನ್ನು ರಾಜಭವನಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವಂತೆ ನಿರ್ದೇಶನ ನೀಡಿದರು. ಅವರ ನಿರ್ದೇಶನದಂತೆ ಪೊಲೀಸರು ಡಾ.ಸುಧಾಕರ್‌ ಅವರನ್ನು ರಾಜಭವನಕ್ಕೆ ಕರೆದುಕೊಂಡು ಹೋದರು.

ಈ ಮಧ್ಯೆ, ವಿಧಾನಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದ ಎಂಟಿಬಿ ನಾಗರಾಜ್‌ ರಾಜ್ಯಪಾಲರ ಭೇಟಿಗೆ ತೆರಳಿದ್ದರು. ನಂತರ, ಡಾ.ಸುಧಾಕರ್‌ ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ, ತಾವೂ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿರುವುದಾಗಿ ರಾಜ್ಯಪಾಲರಿಗೆ ಮಾಹಿತಿ ನೀಡಿದರು.

ಸುಧಾಕರ್‌ ಅವರು ನಮ್ಮ ಪಕ್ಷದವರು. ಅವರ ಬಗ್ಗೆ ನಾವು ಎಮೋಷನಲ್‌ ಆಗದೇ ಮತ್ಯಾರು ಆಗುತ್ತಾರೆ? ಅವರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ಕರೆದುಕೊಂಡು ಹೋಗುವಾಗ ಸ್ವಲ್ಪ ತಳ್ಳಾಟವಾಗಿದೆ. ಬಿಜೆಪಿಯವರಿಗೆ ನಮ್ಮ ಶಾಸಕರ ಬಳಿ ಏನು ಕೆಲಸ. ಅವರು ರಾಜೀನಾಮೆ ನೀಡಿದಾಗ ಮನವೊಲಿಸುವ ಕೆಲಸ ಮಾಡುವುದರಲ್ಲಿ ತಪ್ಪೇನಿದೆ.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ನಾವು ಯಾವುದೇ ಶಾಸಕರ ಮೇಲೆ ಹಲ್ಲೆ ಮಾಡಿಲ್ಲ. ಬಿಜೆಪಿಯವರು ಯಾವ ರೀತಿ ವರ್ತಿಸುತ್ತಿದ್ದಾರೆ ಎಂಬುದನ್ನು ಎಲ್ಲರೂ ನೋಡಿದ್ದಾರೆ. ನಮ್ಮ ಶಾಸಕರ ಜೊತೆ ನಾವು ಮಾತನಾಡುತ್ತಿದ್ದರೆ ಅಲ್ಲಿಗೆ ಬಂದು ಪ್ರತಿಭಟನೆ ನಡೆಸಲು ಅವರಿಗೇನು ಕೆಲಸ?.
-ಪ್ರಿಯಾಂಕ್‌ ಖರ್ಗೆ, ಸಮಾಜ ಕಲ್ಯಾಣ ಸಚಿವ

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.