ಹಿರಿಯ ನಾಗರಿಕರಿಗೆ ಸಂಪನ್ಮೂಲ ಕೇಂದ್ರ
Team Udayavani, Oct 2, 2017, 7:15 AM IST
ಬೆಂಗಳೂರು: ಹಿರಿಯ ನಾಗರಿಕರ ಆರೋಗ್ಯ, ಕಾನೂನು ಹಾಗೂ ಮಾನಸಿಕ ಒತ್ತಡಕ್ಕೆ ಸಂಬಂಧಿಸಿದ ಸಮಸ್ಯೆ ನಿವಾರಿಸಲು ನಿಮ್ಹಾನ್ಸ್ ಸಹಯೋಗದಲ್ಲಿ ಹಿರಿಯ ನಾಗರಿಕರ ಸಂಪನ್ಮೂಲ ಕೇಂದ್ರ ತೆರೆಯಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು. ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ಭಾನುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವಹಿರಿಯ ನಾಗರಿಕರ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ಎಲ್ಲಾ ರೀತಿಯಲ್ಲೂ ಸ್ಪಂದಿಸುವ ಉದ್ದೇಶದಿಂದ ರಾಜ್ಯ ಹಿರಿಯ ನಾಗರಿಕರ ಸಂಪನ್ಮೂಲ ಕೇಂದ್ರವನ್ನು ನಿಮ್ಹಾನ್ಸ್ ಸಹಯೋಗದಲ್ಲಿ
ಅ.4ರಂದು ಆರಂಭಿಸಲಿದ್ದೇವೆ ಎಂದು ಹೇಳಿದರು.
ಬೆಳಗಾವಿ ಮತ್ತು ಕಲಬುರಗಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಹಿರಿಯ ನಾಗರಿಕರ ಸಹಾಯವಾಣಿ ತೆರೆದಿದ್ದೇವೆ. 1090ಗೆ ಕರೆ ಮಾಡಿ ಹಿರಿಯ ನಾಗರಿಕರು ತಮ್ಮ ಸಮಸ್ಯೆಯನ್ನು ಮುಕ್ತವಾಗಿ ಹೇಳಿಕೊಳ್ಳಬಹುದು. ಇದರ
ಅನುದಾನವನ್ನು 3.60 ಲಕ್ಷದಿಂದ 7.15ಲಕ್ಷಕ್ಕೆ ಏರಿಕೆ ಮಾಡಿದ್ದೇವೆ. ಕಲಬುರಗಿ, ಬೆಳಗಾವಿ, ಬೆಂಗಳೂರು ಮತ್ತು ಧಾರವಾಡದಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ತೆರೆದಿದ್ದೇವೆ. ಇದರ ಅನುದಾನವನ್ನು 4.15ಲಕ್ಷದಿಂದ 11.20 ಲಕ್ಷಕ್ಕೆ ಹೆಚ್ಚಿಸಿದ್ದೇವೆ ಎಂದು ಮಾಹಿತಿ ನೀಡಿದರು.
ವೃದಾಟಛಿಶ್ರಮಕ್ಕೆ ನೀಡುತ್ತಿದ್ದ ಅನುದಾನವನ್ನು 2ಲಕ್ಷದಿಂದ 8 ಲಕ್ಷಕ್ಕೆ ಏರಿಸಿದ್ದೇವೆ. ಹಿರಿಯ ನಾಗರಿಕರ ಜೀವಮಾನ ಸಾಧನೆಯ ರಾಜ್ಯ ಪ್ರಶಸ್ತಿಯ ಮೊತ್ತವನ್ನು 10 ಸಾವಿರದಿಂದ ಒಂದು ಲಕ್ಷಕ್ಕೆ ಏರಿಸಿದ್ದೇವೆ. ಮನುಷ್ಯ ಹುಟ್ಟನ್ನು ಖುಷಿ
ಮತ್ತು ಸಂಭ್ರಮದಿಂದ ಸ್ವೀಕರಿಸುವಂತೆ ಮುಪ್ಪನ್ನು ಸಂತೋಷದಿಂದಲೇ ಸ್ವಾಗತಿಸಬೇಕು. ಮುಪ್ಪಿನ ಅನುಭವದ ಸುಖವನ್ನು ಇತರರು ಪಡೆಯಬೇಕು. ಹಿರಿಯ ನಾಗರಿಕರನ್ನು ಕಡೆಗಣಿಸುವುದು ಸರಿಯಲ್ಲ. ಹಿರಿಯರ ತ್ಯಾಗದ ಅರ್ಥವನ್ನು ಮಕ್ಕಳಿಗೆ ತಿಳಿಸಿ, ಅವರಲ್ಲಿ ನೈತಿಕ ಪ್ರಜ್ಞೆ ಬೆಳೆಸಬೇಕು ಎಂದು ಹೇಳಿದರು.
ಗೃಹ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಕೂಡುಕುಟುಂಬ ವ್ಯವಸ್ಥೆ ಕಣ್ಮರೆಯಾಗುತ್ತಿದೆ. ಇದರಿಂದ ಹಿರಿಯ ನಾಗರಿಕೆರಿಗೆ ಹೆಚ್ಚಿನ ನೋವಾಗುತ್ತಿದೆ, ಮಾತ್ರವಲ್ಲದೇ ಹಿರಿಯ ನಾಗರಿಕರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ. ಮಕ್ಕಳು ತಮ್ಮ ಜವಾಬ್ದಾರಿಯನ್ನು ಮರೆಯುತ್ತಿದ್ದಾರೆ. ಕೇಂದ್ರ ಅಥವಾ ರಾಜ್ಯ ಸರ್ಕಾರವು ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಎಷ್ಟೇ ಯೋಜನೆ ತಂದರೂ, ಅದು ಪರಿಪೂರ್ಣವಾಗಬೇಕಾದರೆ ಮಕ್ಕಳು ತಮ್ಮ
ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಜಾನಪದ ಕಲಾವಿದೆ ಪದ್ಮಶ್ರೀ ಸುಕ್ರಿಬೊಮ್ಮಗೌಡ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಶ್ರಾಂತ
ನ್ಯಾಯಮೂರ್ತಿ ಅರಳಿ ನಾಗರಾಜ, ಡಾ.ಬಿ.ಜಿ.ಸುಧಾ, ಎಚ್.ರಾಮೇಗೌಡ, ಕೆ.ಎ.ನಾಗೇಶ್, ಲಕ್ಷ್ಮೀಬಾಯಿ, ನಿಮ್ಹಾನ್ಸ್ ಸಂಸ್ಥೆಯ ಪರವಾಗಿ ಅದರ ನಿರ್ದೇಶಕ ಡಾ.ಗಂಗಾಧರ್ ಅವರನ್ನು ಸನ್ಮಾನಿಸಲಾಯಿತು.
ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಮಹಾದೇವನ್, ನಿರ್ದೇಶಕ ಡಾ.ಸಿದ್ದರಾಜು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.