![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 31, 2019, 3:00 AM IST
ಚಿಕ್ಕಮಗಳೂರು: ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನ ಗಿರಿಗೆ ಆಗಮಿಸುವ ಪ್ರವಾಸಿಗರ ವಾಹನಗಳ ಸಂಚಾರವನ್ನು ಸೆ.3ರ ವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಹಾಗೂ ಇತರ ಭಾಗಗಳಲ್ಲಿ ಭೂಕುಸಿತ ಉಂಟಾಗಿ ಗಾಳಿ, ಮಳೆಗೆ ಮರಗಳು ಉರುಳಿ ಬಿದ್ದಿವೆ. ಇದರಿಂದ, ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸುರಕ್ಷಿತ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಪ್ರವಾಸಿ ತಾಣಗಳಿಗೆ ತೆರಳುವ ಮಾರ್ಗದಲ್ಲಿ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ವಾಹನಗಳು ಸಂಚರಿಸಿದರೆ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ, ಪ್ರವಾಸಿಗರ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಸೆ.3ರ ವರೆಗೆ ಇಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಗುರುದತ್ತಾತ್ರೇಯ ಬಾಬಾ ಬುಡನ್‌ಗಿರಿ ಸ್ವಾಮಿ ದರ್ಗಾ ಐಡಿ ಪೀಠಕ್ಕೆ ತೆರಳುವ ಪ್ರವಾಸಿಗರ ವಾಹನಗಳ ಸಂಚಾರಕ್ಕೆ ಆ.31ರಿಂದ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.