65 ವರ್ಷ ಮೇಲ್ಪಟ್ಟವರ ಸಂಚಾರ ನಿರ್ಬಂಧ ಆದೇಶ ಹಿಂದಕ್ಕೆ
Team Udayavani, Jun 6, 2020, 6:53 AM IST
ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಿಸುವ ಕ್ರಮವಾಗಿ 65 ವರ್ಷ ಮೇಲ್ಪಟ್ಟವರ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಈ ಕುರಿತು ಬಿ.ಎನ್.ಜಯದೇವ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಎ. ಎಸ್.ಓಕಾ ಹಾಗೂ ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ, 65 ವರ್ಷ ಮೇಲ್ಪಟ್ಟವರ ಸಂಚಾರಕ್ಕೆ ನಿರ್ಬಂಧ ವಿಧಿಸಿ ಹೊರಡಿಸಲಾಗಿದ್ದ ಹಿಂದಿನ ಆದೇಶ ವಾಪಸ್ ಪಡೆಯಲಾಗಿದ್ದು, ಈಗ ಅವರ ಸಹಿತ ಗರ್ಭಿಣಿಯರು, ಅನಾರೊಗ್ಯಪೀಡಿತರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಹೊರಗೆ ಬಾರದೆ, ಮನೆಯಲ್ಲೇ ಉಳಿಯುವಂತೆ ಸಲಹೆ ನೀಡಲಾಗಿದೆಯೇ ಹೊರತು ಕಡ್ಡಾಯಗೊಳಿಸಲಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.