ಸರ್ಕಾರಿ ನೌಕರರ ವಿದೇಶ ಪ್ರವಾಸಕ್ಕೆ ನಿರ್ಬಂಧ
Team Udayavani, Mar 18, 2020, 3:06 AM IST
ಬೆಂಗಳೂರು: ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರಿ ನೌಕರರ ಹಾಗೂ ಅಧಿಕಾರಿಗಳ ಅಧಿಕೃತ ಹಾಗೂ ಖಾಸಗಿ ವಿದೇಶ ಪ್ರವಾಸವನ್ನು ಸರ್ಕಾರ ನಿಷೇಧಿಸಿದೆ. ಮಂಗಳವಾರದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ವಿದೇಶ ಪ್ರವಾಸ ನಿಷೇಧಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಡಿಸಿಎಂಗೆ ಕಲಬುರಗಿಗೆ ಹೋಗಲು ಭಯ!: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಕೊರೊನಾ ಸೋಂಕು ಪತ್ತೆಯಾದ ಬಳಿಕ ಕಲಬುರಗಿಗೆ ಭೇಟಿ ನೀಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನಸೌಧದಿಂದಲೇ ಜಿಲ್ಲಾಧಿಕಾರಿಯೊಂದಿಗೆ ವಿಡಿಯೊ ಕಾನ್ಪರೆನ್ಸ್ ನಡೆಸಿದರು.
ಈ ವೇಳೆ, ಕಲಬುರಗಿಯಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದರು. ಬಳಿಕ, ಮಾಧ್ಯಮದವರು ಕಲಬುರಗಿಗೆ ಹೋಗಲು ಭಯವೇ ಎಂದು ಉಪಮುಖ್ಯಮಂತ್ರಿಗಳನ್ನು ಪ್ರಶ್ನಿಸಿದಾಗ, “ಹೌದು, ಯಾರಿಗೆ ಇಲ್ಲ ಭಯ.
ನಿಮಗೂ ಭಯ ಇದೆ. ನಮಗೂ ಇದೆ. ಇಲ್ಲಿಂದಲೇ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಈ ಹಿಂದೆ ಮಹಾರಾಷ್ಟ್ರಕ್ಕೆ ಹೋಗಿ ಬಂದಾಗ ಎಚ್1ಎನ್1 ಬಂದಿತ್ತು. ಈಗ ಮತ್ತೆ ಅದೇ ಸಮಸ್ಯೆ ತಂದುಕೊಳ್ಳುವುದು ಬೇಡ’ ಎಂದು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.