HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
ಅಸಭ್ಯ ವರ್ತನೆ, ಕಿರುಕುಳ ಆರೋಪ: ಎಫ್ಐಆರ್ ದಾಖಲು
Team Udayavani, Apr 29, 2024, 7:10 AM IST
ಹಾಸನ: ಲೋಕಸಭಾ ಚುನಾವಣೆಯ ಮುನ್ನಾ ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದ ಲೈಂಗಿಕ ದೌರ್ಜನ್ಯದ ವೀಡಿಯೋಗಳ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಮಾಜಿ ಸಚಿವ, ಶಾಸಕ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.
47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದು, ಪೊಲೀಸರು ಐಪಿಸಿ 1860 (ಯು/ಎಸ್ 354 (ಎ), 354(ಡಿ), 506, 509ರ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಅವರನ್ನು ಪ್ರಥಮ (ಎ 1)ಆರೋಪಿ, ಪ್ರಜ್ವಲ್ ರೇವಣ್ಣ ಅವರನ್ನು ದ್ವಿತೀಯ (ಎ 2) ಆರೋಪಿಯನ್ನಾಗಿ ಮಾಡಲಾಗಿದೆ.
ದೂರಿನಲ್ಲಿ ಇರುವುದೇನು?
ಹೊಳೆನರಸೀಪುರ ಸಮೀಪದ ಡೇರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಪತ್ನಿಯೊಬ್ಬರಿಗೆ ಎಚ್.ಡಿ. ರೇವಣ್ಣ ಅವರು ಹಾಸ್ಟೆಲ್ ಒಂದರಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. ಆಕೆ ಭವಾನಿ ರೇವಣ್ಣ ಅವರ ದೂರದ ಸಂಬಂಧಿಯೂ ಆಗಿದ್ದಾರೆ.
ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಮಹಿಳೆಯನ್ನು ರೇವಣ್ಣ ಅವರು ತಮ್ಮ ಮೊದಲ ಮಗನ ಮದುವೆ ಸಂದರ್ಭದಲ್ಲಿ ಮನೆಯ ಕೆಲಸಕ್ಕೆ ಕರೆಯಿಸಿಕೊಂಡಿದ್ದರು.
ಆಕೆ ರೇವಣ್ಣ ಅವರ ಮನೆಯಲ್ಲಿ ಮೂರೂವರೆ ವರ್ಷ ಕೆಲಸ ಮಾಡಿಕೊಂಡಿದ್ದರು. ಕೆಲಸಕ್ಕೆ ಸೇರಿದ 4 ತಿಂಗಳ ಅನಂತರ ರೇವಣ್ಣ ಅವರು ಆ ಮಹಿಳೆಯನ್ನು ತಮ್ಮ ಕೊಠಡಿಗೆ ಬರುವಂತೆ ಕರೆಯುತ್ತಿದ್ದರು. ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಸ್ಟೋರ್ ರೂಂನಲ್ಲಿ ತನ್ನ ಕೈ ಹಿಡಿದೆಳೆದು ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು. ಸೀರೆ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ವಿವರಿಸಿದ್ದಾರೆ.
ಹಲವು ಬಾರಿ ಲೈಂಗಿಕ ದೌರ್ಜನ್ಯ
ಹಲವಾರು ಬಾರಿ 2019ರಿಂದ 2022ರ ವರೆಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಹೆದರಿ ನಂಬರ್ ಬ್ಲಾಕ್
ರೇವಣ್ಣ ತನ್ನ ಮಗಳಿಗೆ ಹಲವು ಬಾರಿ ವೀಡಿಯೋ ಕರೆ ಮಾಡಿ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದನೆ ಮಾಡುತ್ತಿದ್ದು, ಹೆದರಿದ್ದ ತನ್ನ ಮಗಳು ನಂಬರ್ ಬ್ಲಾಕ್ ಮಾಡಿದ್ದಳು ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಕಾನೂನು ಕ್ರಮಕ್ಕೆ ಒತ್ತಾಯ
ಪ್ರಜ್ವಲ್ ರೇವಣ್ಣ ಎಸಗಿದ್ದಾರೆ ಎನ್ನಲಾದ ವೀಡಿಯೋಗಳು ಇತ್ತೀಚೆಗೆ ಜಾಲತಾಣಗಳಲ್ಲಿ ಹರಿದಾಡುತ್ತಿದ್ದುದರಿಂದ ಮಾನಸಿಕ ಹಿಂಸೆ ಆಗುತ್ತಿದೆ. ಹೀಗಾಗಿ ತನ್ನ ಮತ್ತು ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ಮನವಿ ಮಾಡಿದ್ದಾರೆ.
ಯಾವ ಸೆಕ್ಷನ್, ಏನು ಶಿಕ್ಷೆ?
-354 (ಎ)-ಲೈಂಗಿಕ ದೌರ್ಜನ್ಯ: 3 ವರ್ಷ ಜೈಲು ಹಾಗೂ ದಂಡ
-354(ಡಿ)- ಪದೇ ಪದೆ ಮಹಿಳೆ ಜತೆ ಲೈಂಗಿಕ ಸಂಪರ್ಕ ಬೆಳೆಸಲು ತಂತ್ರಜ್ಞಾನ ಬಳಕೆ:
3 ಅಥವಾ 5 ವರ್ಷ ಶಿಕ್ಷೆ, ದಂಡ
-506- ಕ್ರಿಮಿನಲ್ ಬೆದರಿಕೆ, ಕೊಲೆ ಬೆದರಿಕೆ: 2- 7 ವರ್ಷ ಜೈಲು ಮತ್ತು ದಂಡ
-509- ಮಹಿಳೆಯನ್ನು ಅವಮಾನಿಸುವುದು:
3 ವರ್ಷ ಜೈಲು ಶಿಕ್ಷೆ ಮತ್ತು ದಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.