ರಿಲೀಫ್ ಬೆನ್ನಲ್ಲೇ ಬಂತು ನೋಟಿಸ್
Team Udayavani, Sep 23, 2017, 7:58 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ ಹೈಕೋರ್ಟಿನಲ್ಲಿ ಡಿನೋಟಿಫಿಕೇಷನ್ ಪ್ರಕರಣಕ್ಕೆ
ರಿಲೀಫ್ ಸಿಕ್ಕರೆ, ಅದರ ಬೆನ್ನಲ್ಲೇ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ. ಎಸ್. ಈಶ್ವರಪ್ಪ ಪಿಎ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ ಪೊಲೀಸರು ನೋಟೀಸ್ ನೀಡಿದ್ದಾರೆ.
ಡಾ. ಶಿವರಾಮ ಕಾರಂತ ಬಡಾವಣೆಯ ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೆಲ ಜಮೀನುಗಳನ್ನು ಕೈ ಬಿಡುವಂತೆ ಸೂಚಿಸಿ ಡಿನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಯಡಿಯೂರಪ್ಪ ವಿರುದ್ಧ ಎರಡು ಪ್ರತ್ಯೇಕ ಎಫ್ಐಆರ್ ದಾಖಲಿ ಸಿದ್ದ ಭ್ರಷ್ಟಾಚಾರ ನಿಗ್ರಹ ದಳದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಎಸಿಬಿಗೆ ತೀವ್ರ ಹಿನ್ನಡೆಯಾಗಿದೆ. ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡು ವಂತೆ ಯಡಿಯೂರಪ್ಪ ಸಲ್ಲಿಸಿದ್ದ ಮಧ್ಯಂ ತರ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯ ಮೂರ್ತಿ
ಅರವಿಂದಕುಮಾರ್ ಅವರಿದ್ದ ಏಕ ಸದಸ್ಯ ಪೀಠ, ಶಿವರಾಮ ಕಾರಂತ ಬಡಾವಣೆಯ ನಿರ್ಮಾಣದ ಅಂತಿಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ. ಹೀಗಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟಾಗಿದೆ ಎಂಬ ವಾದದಲ್ಲಿ ಹುರುಳಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಎಸಿಬಿಯು ಅರ್ಜಿದಾರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಸೂಕ್ತ ದಾಖಲೆಗಳನ್ನು ಕಲೆ ಹಾಕದೆ, ಪೂರ್ವಗ್ರಹ ಪೀಡಿತವಾಗಿ ತನಿಖೆ ನಡೆಸಲು ಮುಂದಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದೂ ಸಹ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಎಸಿಬಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮತ್ತೂಂದೆಡೆ ಸುಪ್ರೀಂಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖೀಸಿ ಅರ್ಜಿದಾರರ ರಿಟ್ ಅರ್ಜಿಯ ಮಾನ್ಯತೆ ಹಾಗೂ ಕ್ರಿಮಿನಲ್ ಪ್ರಕರಣಗಳ ಪೊಲೀಸ್ ತನಿಖೆಗೆ ತಡೆಯಾಜ್ಞೆ ನೀಡಲು ಅವಕಾಶವಿಲ್ಲ ಎಂದು ಆಕ್ಷೇಪಿಸಿದ್ದ ಎಸಿಬಿ ವಾದಕ್ಕೆ ಅನುಗುಣವಾಗಿ ಕಾನೂನಿನ ಅಂಶಗಳನ್ನು ಉಲ್ಲೇಖೀಸಿರುವ ನ್ಯಾಯಪೀಠ, ಸಂವಿಧಾನದ ಕಲಂ 226 ಹಾಗೂ ಕಲಂಗಳ 227ರ ಅಡಿಯಲ್ಲಿ ಅರ್ಜಿದಾರರು ಸಲ್ಲಿಸಿರುವ ರಿಟ್ ಅರ್ಜಿಯನ್ನು ಹೈಕೋರ್ಟ್ ಪರಿಗಣಿಸಲು ಅವಕಾಶವಿದೆ. ಅಲ್ಲದೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದ ಒಂದೇ ಆರೋಪಕ್ಕೆ ಎರಡು ಎಫ್ಐಆರ್ ದಾಖಲಿಸಲು ಅವಕಾಶವಿಲ್ಲ, ಹೀಗಾಗಿ ಎರಡನೇ ಎಫ್ಐಆರ್ ರದ್ದುಪಡಿಸಲು ಅರ್ಹವಾಗಲಿದೆ ಎಂದು ನ್ಯಾಯಾಲಯ ತಿಳಿಸಿದೆ.
ಕ್ರಿಮಿನಲ್ ಕೇಸ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರ ತನಿಖೆಗೆ ಭ್ರಷ್ಟಾಚಾರ ನಿಗ್ರಹದಳ ಕಾಯಿದೆಯ ಸೆಕ್ಷನ್ 13(3) (ಸಿ) ಅನ್ವಯ ತಡೆಯಾಜ್ಞೆ ನೀಡಲು ಹೈಕೋರ್ಟ್‌ಗೆ ಅಧಿಕಾರ ವಿದೆ. ನಿಗದಿತ ಅವಧಿಯಲ್ಲಿ ಎಫ್ಐಆರ್ ದಾಖಲಿಸದೇ ವಿಳಂಬ ಮಾಡಲು ಕೆಲವೇ ಕೆಲವು ಪ್ರಕರಣಗಳಲ್ಲಿ ಮಾತ್ರ ಅವಕಾಶವಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಿಸಲು ವಿಳಂಬ ತೋರಿರುವುದಕ್ಕೆ ಎಸಿಬಿ ಸೂಕ್ತ ಕಾರಣಗಳನ್ನು ನೀಡಿಲ್ಲ. ಈ ಅಂಶಗಳನ್ನು ಆಧರಿಸಿ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ತಿಳಿಸಿದೆ.
ಬಿ.ಎಸ್. ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಹಾಗೂ ಎಸಿಬಿಯ ಪರ ಮಾಜಿ ಅಡ್ವೋಕೇಟ್ ಜನರಲ್ ಪ್ರೊ. ರವಿ ವರ್ಮಕುಮಾರ್ ವಾದ ಮಂಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧ ವಿಲ್ಲ ಎಂದು ಸ್ಪಷ್ಟ ಪಡಿಸಿದರಲ್ಲದೆ, ಪ್ರಕರಣ ಕಾನೂ ನಿನ ವ್ಯಾಪ್ತಿಯಲ್ಲಿದ್ದು, ಹೆಚ್ಚೇನೂ ಪ್ರತಿಕ್ರಿಯಿಸಲ್ಲ ಎಂದಿದ್ದಾರೆ.
ಪ್ರಕರಣ ಏನು?: ಡಾ. ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನವನ್ನು ಪ್ರಾಥಮಿಕ ಅಧಿಸೂಚನೆಯಿಂದ 257.25 ಗುಂಟೆ ಎಕರೆ ಜಮೀನು ಕೈ ಬಿಡಲು ಭೂ ಮಾಲೀಕರಿಂದ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ ಹಣಪಡೆದುಕೊಂಡಿದ್ದು ಅಕ್ರಮ ಎಸಗಿದ್ದಾರೆ. ಈ ಸಂಬಂಧ ತನಿಖೆ ನಡೆಸುವಂತೆ ಕೋರಿ ದಾಖಲಾಗಿದ್ದ ದೂರಿನ ಅನ್ವಯ ಎಸಿಬಿ ಮೊದಲ ಹಂತವಾಗಿ 2009ರಿಂದ 2012 ರ ಅವಧಿಯಲ್ಲಿ ಯಲಹಂಕ ಹೋಬಳಿಯ ಆವಲಹಳ್ಳಿ ಗ್ರಾಮದ ಸರ್ವೇ ನಂಬರ್ 109/ 1 ರಲ್ಲಿ 3 ಎಕರೆ 6 ಗುಂಟೆ ಜಮೀನು ಡಿನೋಟಿಫಿಕೇಶನ್ ಸಂಬಂಧ ಆಗಸ್ಟ್ 10ರಂದು ಹಾಗೂ ಯಶವಂತಪುರ ಹೋಬಳಿ ಸೋಮಶೆಟ್ಟಿ ಗ್ರಾಮದ ಸರ್ವೇ ನಂಬರ್ 22/2ರಲ್ಲಿರುವ 18ಗುಂಟೆ ಹಾಗೂ ಸರ್ವೇನಂಬರ್ 24/ 1 ಎಕರೆ 8 ಗುಂಟೆ ಜಮೀನು ಡಿನೋಟಿಫಿಕೇಶನ್ ಸಂಬಂಧ ಆಗಸ್ಟ್ 17ರಂದು ಪ್ರತ್ಯೇಕ ಎಫ್ ಐಆರ್‌ಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿತ್ತು. ಈ ಎರಡೂ ಎಫ್ಐಆರ್‌ಗಳ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.
ನೋಟಿಸ್ ಯಾಕೆ?
ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಪ್ತ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ಮಲ್ಲೇಶ್ವರಂ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎ.ಆರ್. ಬಡಿಗೇರ್ ಶುಕ್ರವಾರ ಬಿಎಸ್‌ವೈಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ದೂರುದಾರ ವಿನಯ್‌ಗೂ ಶನಿವಾರ ವಿಚಾರಣೆಗೆ ಬರಲು ಹೇಳಲಾಗಿದೆ.
ನನ್ನನ್ನು ಸಿಲುಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ಹಾಗೂ ಇತರ ಅಧಿಕಾರಿಗಳು ರೂಪಿಸಿದ್ದ ಸಂಚು ವಿಫಲವಾಗಿದೆ. ಕೇವಲ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಕೋರ್ಟ್ ತಡೆಯಾಜ್ಞೆ ನೀಡಿದ ತಕ್ಷಣ ಯಡಿಯೂರಪ್ಪ ನಿರಪರಾಧಿ ಆಗುವುದಿಲ್ಲ. ನ್ಯಾಯಾಲಯಗಳಲ್ಲಿ ಸಹಜವಾಗಿಯೇ ತಡೆಯಾಜ್ಞೆ ದೊರೆಯುತ್ತದೆ. ತಡೆಯಾಜ್ಞೆ ತೆರವುಗೊಳಿಸಲು ಎಸಿಬಿಗೆ ಅವಕಾಶ ಇದೆ. ಎಸಿಬಿ ತನ್ನ ಪ್ರಯತ್ನ ಮಾಡುತ್ತದೆ.
ರಾಮಲಿಂಗಾ ರೆಡ್ಡಿ, ಗೃಹ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.