ರೋಹಿಣಿ ವರ್ಗಾವಣೆ ಹಸ್ತಕ್ಷೇಪ ಆರೋಪ: ಸಿಎಸ್‌ಗೆ ಮಣಿವಣ್ಣನ್ ಪತ್ರ
Team Udayavani, Sep 25, 2019, 3:05 AM IST
ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಯಿಂದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ವಿಷಯದಲ್ಲಿ ತಮ್ಮ ಹಸ್ತಕ್ಷೇಪವಿಲ್ಲ ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್‌ಗೆ ಪತ್ರ ಬರೆದಿದ್ದಾರೆ.
ಕಟ್ಟಡ ಕಾರ್ಮಿಕರು ಹಾಗೂ ಇತರ ನಿರ್ಮಾಣ ಹಂತದ ಕಾರ್ಮಿಕರ ಕಲ್ಯಾಣ ಮಂಡ ಳಿಯ ಕಾರ್ಯದರ್ಶಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಕಲ್ಯಾಣ ಮಂಡಳಿ ಯಲ್ಲಿರುವ ಕಟ್ಟಡ ಕಾರ್ಮಿಕರು ಹಾಗೂ ಅವರ ಮಕ್ಕಳ ಶ್ರೇಯೋಭಿವೃದ್ಧಿಗೆ ಮೀಸಲಿರುವ ಸುಮಾರು 8 ಸಾವಿರ ಕೋಟಿ ಹಣದಲ್ಲಿ ಕನಿಷ್ಠ 3 ಸಾವಿರ ಕೋಟಿ ರೂ.ನ್ನು ಪ್ರವಾಹ ಸಂತ್ರಸ್ತರ ಪುನರ್ವಸತಿ ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲು ಹಣ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಅದೇ ಕಾರಣಕ್ಕೆ ಅವರನ್ನು ಮಂಡಳಿಯ ಕಾರ್ಯದರ್ಶಿ ಹುದ್ದೆಯಿಂದ ಯಾವುದೇ ಹುದ್ದೆ ತೋರಿಸದೇ ವರ್ಗಾವಣೆ ಮಾಡಲಾಗಿತ್ತು.
ರೋಹಿಣಿ ಸಿಂಧೂರಿ ವರ್ಗಾವಣೆಗೆ “ಕಾರ್ಮಿಕರ ಕಲ್ಯಾಣ ನಿಧಿಯಿಂದ ಹಣ ವರ್ಗಾವಣೆಗೆ ನಿರಾಕರಿಸಿದ್ದೇ ಕಾರಣ’ ಎಂಬ ಮಾತುಗಳು ಐಎಎಸ್ ಅಧಿಕಾರಿಗಳ ವಲಯ ದಲ್ಲಿ ಕೇಳಿ ಬಂದಿತ್ತು. ಅಲ್ಲದೇ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಲು ಮಂಡಳಿಯಲ್ಲಿ ತಂತ್ರಜ್ಞಾನ ಹಾಗೂ ಆ್ಯಪ್ ಅಭಿವೃದ್ಧಿ ಪಡಿಸಲು ರೋಹಿಣಿ ಸಿಂಧೂರಿ ನಿರ್ಧರಿಸಿದ್ದರು. ಕಾರ್ಮಿಕರ ಸಹಾಯವಾಣಿ ಆ್ಯಪ್ ಅಭಿವೃದ್ಧಿ ಕಾರ್ಯವನ್ನು ಕಿಯೋನಿಕ್ಸ್‌ಗೆ ನೀಡುವಂತೆ ಮಣಿವಣ್ಣನ್, ರೋಹಿಣಿ ಅವರ ಮೇಲೆ ಒತ್ತಡ ಹಾಕಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಆದರೆ, ಈ ಆರೋಪದ ಬಗ್ಗೆ ಟಿ.ಎಂ. ವಿಜಯಭಾಸ್ಕರ್‌ಗೆ ಪತ್ರ ಬರೆದು ಸ್ಪಷ್ಟನೆ ನೀಡಿರುವ ಮಣಿವಣ್ಣನ್, ಆ್ಯಪ್ ಅಭಿವೃದ್ಧಿ ಪಡಿಸಲು ನಿಯಮಗಳ ಪ್ರಕಾರ ಟೆಂಡರ್ ಮೂಲಕವೇ ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಕಾರ್ಮಿಕ ಇಲಾಖೆಯಿಂದ ಸರ್ಕಾರಿ ಆದೇಶವೂ ಆಗಿದೆ. ಟೆಂಡರ್ ಪ್ರಕ್ರಿಯೆ ಮುಗಿಯುವವರೆಗೂ ಕಟ್ಟಡ ಕಾರ್ಮಿಕ ಸಹಾಯವಾಣಿ ತೆರೆಯುವ ಬಗ್ಗೆ ಮಾತ್ರ ನಾನು ಸೂಚನೆ ನೀಡಿದ್ದೆ ಎಂದು ತಿಳಿಸಿದ್ದಾರೆ. ಅಲ್ಲದೆ ಮಂಡಳಿಯ ಅಭಿವೃದ್ದಿ ದೃಷ್ಠಿಯಿಂದ ರೋಹಿಣಿ ಸಿಂಧೂರಿ ಅವರನ್ನು ಮಂಡಳಿಯ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಸ ಬಹುದು ಎಂದು ತಮ್ಮ ಪತ್ರದಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!
Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.