ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿತ
Team Udayavani, Jan 29, 2020, 3:00 AM IST
ಮಂಡ್ಯ: ಮದ್ದೂರು ತಾಲೂಕು ರುದ್ರಾಕ್ಷಿಪುರದಲ್ಲಿ ಮಂಗಳವಾರ ಬೆಳಗ್ಗೆ ಶಿಥಿಲಾವಸ್ಥೆಯಲ್ಲಿದ್ದ ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಒಳ ಗಿದ್ದ 15 ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಗನವಾಡಿ ಕಟ್ಟಡ ಹಲವಾರು ತಿಂಗಳಿಂದ ಶಿಥಿಲಗೊಂಡಿತ್ತು. ಕಟ್ಟಡದ ಮೇಲ್ಛಾವಣಿಯ ಕಲಾ°ರ್ ಶೀಟ್‌ಗಳಿಗೆ ಬೆಂಬಲವಾಗಿ ಇರಿಸಲಾಗಿದ್ದ ಮರದ ತೊಲೆಗಳು ಗೆದ್ದಲು ಹಿಡಿದು ಕುಸಿದು ಬೀಳುವ ಹಂತದಲ್ಲಿದ್ದವು.
ಈ ಬಗ್ಗೆ ದೂರು ನೀಡಿದ್ದರೂ, ದುರಸ್ತಿಗೆ ಕ್ರಮ ಕೈಗೊಂಡಿರಲಿಲ್ಲ. ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮಕ್ಕಳು ಕುಳಿತಿದ್ದ ವೇಳೆಯೇ ಮೇಲ್ಛಾವಣಿಯ ಕಲಾ°ರ್ ಶೀಟು ಕುಸಿದು ಬಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಮಕ್ಕಳನ್ನು ಹೊರಕ್ಕೆ ಕರೆ ತಂದರು. ಮಕ್ಕಳಿಗೆ ರಜಾ ನೀಡಿ ಮನೆಗೆ ಕಳುಹಿಸಲಾಯಿತು. ಕಟ್ಟಡ ದುರಸ್ಥಿಗೊಳ್ಳುವವರೆಗೆ ಖಾಸಗಿ ಸ್ಥಳದಲ್ಲಿ ಅಂಗನವಾಡಿ ಶಾಲೆ ನಡೆಸುವಂತೆ ನೌಕರರಿಗೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.