ಕಾಂಗ್ರೆಸ್ ತೊರೆದ ರೋಷನ್‌ಬೇಗ್ ತೆರೆಮರೆಗೆ
Team Udayavani, Dec 11, 2019, 3:06 AM IST
ಬೆಂಗಳೂರು: ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಮಾಜಿ ಸಚಿವ ರೋಷನ್ ಬೇಗ್ ವಿಫಲರಾಗಿದ್ದು, ಈಗ ಬಿಜೆಪಿ ತಮಗೆ ಭವಿಷ್ಯ ಕಲ್ಪಿಸುತ್ತಾ ಎನ್ನುವ ಆತಂಕದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಬಹಿರಂಗವಾಗಿ ಆರೋಪ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿ ಪಕ್ಷದಿಂದ ಉಚ್ಚಾಟನೆಗೊಂಡಿದ್ದರು.
ಬಳಿಕ, ಬಿಜೆಪಿ ನಾಯಕರು ಬಯಸದಿದ್ದರೂ ಅತೃಪ್ತ ಶಾಸಕ ರೊಂದಿಗೆ ಏಕಾಏಕಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಎಲ್ಲರ ಅಚ್ಚರಿಗೆ ಕಾರಣರಾಗಿದ್ದರು. ಅದೇ ಕಾರಣಕ್ಕೆ ಅನರ್ಹ ಶಾಸಕರ ಪಟ್ಟಿಗೆ ಸೇರಿ ಉಳಿದ ಬಂಡಾಯ ಶಾಸಕರೊಂದಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ ಮಾಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಪಡೆದು ಕೊಂಡರು. ಆದರೂ, ಐಎಂಎ ವಂಚನೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವುದನ್ನೇ ಮುಂದಿಟ್ಟು ಬಿಜೆಪಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳದೇ ದೂರ ಇಟ್ಟಿತ್ತು. ಇದು ರೋಷನ್ ಬೇಗ್‌ರ ಮೊದಲ ಆಘಾತಕ್ಕೆ ಕಾರಣವಾಗಿತ್ತು.
ಈ ಬೆಳವಣಿಗೆ ನಡುವೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಲೋಚಿಸಿದರೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಲಹೆ ಮೇರೆಗೆ ಬಿಜೆಪಿ ಅಭ್ಯರ್ಥಿಗೆ ಬಹಿರಂಗ ಬೆಂಬಲ ನೀಡಿದ್ದರು. ಶಿವಾಜಿನಗರದ ಬಿಜೆಪಿ ಅಭ್ಯರ್ಥಿ ಶರವಣ ಅವರನ್ನು ಗೆಲ್ಲಿಸಿಕೊಂಡು ಬಂದರೆ, ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಬಿಎಸ್‌ವೈ ಮಂತ್ರಿ ಮಾಡುತ್ತಾರೆ ಎಂಬ ಭರವಸೆ ನೀಡಿದ್ದರು ಎಂದು ಹೇಳಲಾಗಿತ್ತು. ಆದರೆ, ಶಿವಾಜಿನಗರ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‌ರನ್ನು ಗೆಲ್ಲಿಸುವ ಮೂಲಕ ಮುಸ್ಲಿಂ ಸಮುದಾಯ ಕ್ಷೇತ್ರದಲ್ಲಿ ಮತ್ತೋರ್ವ ನಾಯಕನನ್ನು ಕಂಡುಕೊಂಡಿದ್ದಾರೆ. ಈ ಗೆಲುವು ರೋಷನ್ ಬೇಗ್ ಅವರ ರಾಜಕೀಯ ಜೀವನಕ್ಕೆ ಮುಳುವಾಗುವಂತೆ ಮಾಡಿದೆ.
ಸ್ಪಂದನೆ ಅನುಮಾನ: ಕ್ಷೇತ್ರದಲ್ಲಿ ಬಿಜೆಪಿ ಸೋಲಿನಿಂದ ನಾಯಕರೂ ರೋಷನ್ ಬೇಗ್ ಅವರ ಬೇಡಿಕೆಗೆ ಸ್ಪಂದಿಸುವುದು ಅನುಮಾನ. ಅಲ್ಲದೇ ಮುಂದಿನ ದಿನಗಳಲ್ಲಿ ಅವರ ಪುತ್ರ ರುಮಾನ್ ಬೇಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಕ್ಷೇತ್ರದ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಆದರೆ, ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿಯ ಮುಸ್ಲಿಂ ಅಭ್ಯರ್ಥಿಯನ್ನು ಜನರು ಬೆಂಬಲಿಸುತ್ತಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಪಕ್ಷದ ನಾಯಕರ ವಿರುದ್ಧ ರೋಷನ್‌ಬೇಗ್ ಆಕ್ರೋಶದಲ್ಲಿ ಆಡಿದ ಮಾತಿನಿಂದ ತೆಗೆದುಕೊಂಡ ನಿರ್ಧಾರ ಅವರ ರಾಜಕೀಯ ಜೀವನವನ್ನೇ ಅಂತ್ಯಗೊಳಿಸುವ ಹಂತಕ್ಕೆ ತಂದು ನಿಲ್ಲಿಸಿದೆ ಎಂಬ ಮಾತುಗಳು ಅವರ ಆಪ್ತ ವಲಯದಲ್ಲಿ ಕೇಳಿ ಬರುತ್ತಿವೆ.
ಕೈ ನಲ್ಲಿ ಬದಲಾವಣೆ ನಿರೀಕ್ಷೆ: ಬಿಜೆಪಿಯಿಂದ ಸೂಕ್ತ ಸ್ಪಂದನೆ ದೊರೆಯದೆ ಹೋದರೆ, ಮತ್ತೆ ರೋಷನ್ ಬೇಗ್ ಕಾಂಗ್ರೆಸ್ ಕಡೆಗೆ ಮುಖ ಮಾಡುವ ಸಾಧ್ಯತೆ ಇದೆ ಎಂಬ ಮಾತೂ ಕೇಳಿ ಬರುತ್ತಿವೆ. ಮೂಲ ಕಾಂಗ್ರೆಸ್ ನಾಯಕರಿಗೆ ಜವಾಬ್ದಾರಿ ದೊರೆತರೆ, ಮತ್ತೆ ಕಾಂಗ್ರೆಸ್ ಕಡೆಗೆ ಮುಖ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.