ಪರಿಹಾರ ಕಾರ್ಯಕ್ಕೆ 172 ಕೋಟಿ ರೂ.ಲಭ್ಯ
Team Udayavani, Jun 6, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರ ಜತೆಗೆ ಮಳೆಹಾನಿಯೂ ಸಂಭವಿಸುತ್ತಿದ್ದು, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳ ಬಳಿ ಈಗಾಗಲೇ ಲಭ್ಯವಿರುವ 172 ಕೋಟಿ ರೂ. ಅನುದಾನವನ್ನು ಆದ್ಯತೆ ಮೇಲೆ ಸದ್ವಿನಿಯೋಗ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದರ ಮಧ್ಯೆ ಹಿರಿಯ ಅಧಿಕಾರಿಗಳು ಭಾನುವಾರದ ರಜಾದಿನವೂ ವಿಶ್ರಾಂತಿ ಪಡೆಯದೆ ಕೆಲಸ ಮಾಡಿದ್ದಾರೆ. ಅಲ್ಲದೆ, ತಮ್ಮ ಕರೆಗೆ ಓಗೊಟ್ಟು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮಗೆ ಹಂಚಿಕೆಯಾದ ಜಿಲ್ಲೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ವರದಿ ಸಲ್ಲಿಸಿದ್ದಾರೆ. ಈ ವರದಿ ಆಧರಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದರು.ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್ .ಯಡಿಯೂರಪ್ಪ ಅವರು ಜೂ.8ರಿಂದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಹೇಳಿರುವ ಕುರಿತು ಪ್ರತಿಕ್ರಿಯಿಸಿ, ಅವರು ಪ್ರವಾಸ ಮಾಡಿ, ಅಧ್ಯಯನ ವರದಿಯನ್ನು ಸರ್ಕಾರಕ್ಕೆ ನೀಡಲಿ. ನಾವು ಸಮಸ್ಯೆ ಬಗೆಹರಿಸಲು ಕ್ರಮ ವಹಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.