ಆರ್‌ಎನ್‌ಎಸ್ ಕಂಪನಿಯಿಂದ 4 ಕೋಟಿ ರೂ. ಲಂಚ
Team Udayavani, Apr 7, 2018, 7:00 AM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ನೀಡಲು ಆರ್‌ಎನ್‌ಎಸ್ ಸಂಸ್ಥೆಯಿಂದ 4 ಕೋಟಿ ರೂ. ಲಂಚ ಪಡೆದಿದ್ದಾರೆಂದು ಗಂಭೀರ ಆರೋಪ ಮಾಡಿರುವ ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ, ಆ ಸಂಬಂಧ ದಾಖಲೆ ಬಿಡುಗಡೆ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 2007-08ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮುರುಡೇಶ್ವರ ಪವರ್ ಕಾರ್ಪೊರೇಶನ್ ಕಂಪನಿಗೆ 1033 ಕೋಟಿ ರೂ. ಟೆಂಡರ್ ನೀಡಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧ್ಯಕ್ಷರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಯೋಜನೆಗೆ
ಅನುಮತಿ ನೀಡಲು 2009-10 ರಲ್ಲಿ ಒಂದು ಕೋಟಿ ರೂ., 10-11 ರಲ್ಲಿ ಒಂದು ಕೋಟಿ ರೂ., 11-12 ರಲ್ಲಿ 2 ಕೋಟಿ ರೂ.
ಪಡೆದುಕೊಂಡಿದ್ದಾರೆಂದು ಆರೋಪಿಸಿದ್ದಾರೆ.
ಯಡಿಯೂರಪ್ಪ ತಮ್ಮ ಆದಾಯ ಪ್ರಮಾಣ ಪತ್ರದಲ್ಲಿ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಆದರೆ, ಆರ್‌ಎನ್‌ಎಸ್ ಕಂಪನಿ ಲೆಕ್ಕ ಪರಿಶೋಧನೆ ಸಂದರ್ಭದಲ್ಲಿ ಹಣ ನೀಡಿರುವ ಬಗ್ಗೆ ಸಂಸ್ಥೆಯ ಹಣಕಾಸು ವಿಭಾಗದ ಉಪಾಧ್ಯಕ್ಷ ಸುನಿಲ್ ಸಹಸ್ರಬುದೆಟಛಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರ ಆಧಾರದ ಮೇಲೆ ಆದಾಯ ತೆರಿಗೆ ಇಲಾಖೆ ಯಡಿಯೂರಪ್ಪ ಅವರಿಗೆ ದಂಡ
ಕೂಡ ವಿಧಿಸಿದೆ ಎಂದು ದೂರಿದರು.
ಉಗ್ರಪ್ಪ ಆರೋಪದಲ್ಲಿ ಹುರುಳಿಲ್ಲ: ಬಿಜೆಪಿ ಸ್ಪಷ್ಟನೆ
ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಉಗ್ರಪ್ಪ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಬಿಜೆಪಿ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ವರದಿ ಸಲ್ಲಿಸಿರುತ್ತಾರೆ. ಲೋಕಾಯುಕ್ತ ಪೊಲೀಸರ ಎಫ್ಐಆರ್ ಅನ್ನು ಹೈಕೋರ್ಟ್ ಸಹ ವಜಾ ಮಾಡಿತ್ತು. ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸ್ ಬಗ್ಗೆಯೂ ಹಿಂದೆಯೇ ಸ್ಪಷ್ಟನೆ ನೀಡಲಾಗಿತ್ತು ಎಂದು ಪ್ರಕಟಣೆಯಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.