6980.88 ಕೋಟಿ ರೂ. ಹೆಚ್ಚುವರಿ ಸೇರ್ಪಡೆ


Team Udayavani, Dec 14, 2018, 6:00 AM IST

37.jpg

ಸುವರ್ಣಸೌಧ: ರಾಜ್ಯ ಸರ್ಕಾರವು 2018-19ನೇ ಹಣಕಾಸು ವರ್ಷದ ಬಜೆಟ್‌ಗೆ ಪೂರಕ ಅಂದಾಜಿನಡಿ ಮೊದಲೇ ಕಂತಿನಡಿ 6980.88 ಕೋಟಿ ರೂ. ಹೆಚ್ಚುವರಿಯಾಗಿ ಸೇರ್ಪಡೆ ಮಾಡಲಾಗಿದೆ. ವಿಧಾನಸಭೆಯಲ್ಲಿ ಗುರುವಾರ ಮಂಡನೆಯಾದ ಪೂರಕ
ಅಂದಾಜು ವಿವರದಲ್ಲಿ ರೈತರ ಸಾಲ ಮನ್ನಾ ಘೋಷಣೆ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಅನುದಾನಕ್ಕೆ 2,600 ಕೋಟಿ ರೂ., ಲೋಕೋಪಯೋಗಿ ಇಲಾಖೆ ಅನುದಾನಕ್ಕೆ 1997 ಕೋಟಿ ರೂ. ಹೆಚ್ಚುವರಿ ಸೇರ್ಪಡೆ ಮಾಡಿರುವುದು ಉಲ್ಲೇಖವಾಗಿದೆ.

ಲೋಕೋಪಯೋಗಿ ಇಲಾಖೆಗೆ 1,997 ಕೋಟಿ ರೂ. ಹೆಚ್ಚುವರಿ ಮೊತ್ತ ಸೇರ್ಪಡೆ ಮಾಡಲಾಗಿದೆ. ಇದರಲ್ಲಿ ಬಾಕಿ ಬಿಲ್‌ ಪಾವತಿಗಾಗಿ 1850 ಕೋಟಿ ರೂ. ಸೇರ್ಪಡೆ ಮಾಡಲಾಗಿದೆ. ಜತೆಗೆ ಕೆಆರ್‌ಡಿಸಿಎಲ್‌ ವತಿಯಿಂದ ಕೈಗೊಳ್ಳಲಾದ ರಸ್ತೆ, ಸೇತುವೆ ಕಾಮಗಾರಿಗಳ ಭೂಸ್ವಾಧೀನ ಪ್ರಕರಣಗಳ ಭೂಪರಿಹಾರ ವೆಚ್ಚಗಳಿಗಾಗಿ 41.45 ಕೋಟಿ ರೂ., ಹಾಸನ ನಗರದ ಚೆನ್ನಪಟ್ಟಣ ಕೆರೆ ಅಭಿವೃದ್ಧಿಗೆ 36 ಕೋಟಿ ರೂ. ಹೆಚ್ಚುವರಿಯಾಗಿ ಸೇರ್ಪಡೆ ಮಾಡಲಾಗಿದೆ. ಕೇಂದ್ರ ಪುರಸ್ಕೃತ ನೀಲಿಕ್ರಾಂತಿ/ ಮೀನುಗಾರಿಕೆಯ ಸಮಗ್ರ ಅಭಿವೃದಿಟಛಿ ಮತ್ತು ನಿರ್ವಹಣೆ ಯೋಜನೆಗೆ ಕೇಂದ್ರದಿಂದ ಮರುಮೌಲಿಕರಿಸಿದ ಅನುದಾನಕ್ಕೆ ರಾಜ್ಯದ ಪಾಲು ಸೇರಿಸಿ 6.30 ಕೋಟಿ ರೂ. ಸೇರ್ಪಡೆ ಮಾಡಲಾಗಿದೆ. ಮೋಟಾರು ನಾಡ ದೋಣಿಗಳಿಗೆ ಪಡಿತರ ದರದಲ್ಲಿ ಸೀಮೆಎಣ್ಣೆ ಪೂರೈಕೆಗೆ 8.57 ಕೋಟಿ ರೂ. ಹೆಚ್ಚುವರಿ ಸೇರ್ಪಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಳಾಯಿಯಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ
ಕಾಮಗಾರಿಗೆ ಕೇಂದ್ರದಿಂದ ಬಿಡುಗಡೆಯಾದ ಅನುದಾನಕ್ಕೆ ಪೂರಕವಾಗಿ ರಾಜ್ಯದ ಪಾಲು ಸೇರಿಸಿ ಬಿಡುಗಡೆ ಮಾಡಲು
54.04 ಕೋಟಿ ರೂ. ಸೇರ್ಪಡೆ ಮಾಡಲಾಗಿದೆ. 

ಮುಖ್ಯಾಂಶಗಳು: ಪ್ರಸಕ್ತ ಸಾಲಿನಲ್ಲಿ 15ನೇ ಧಾನಸಭೆ ಆಯ್ಕೆಯಾದ ಶಾಸಕರಿಗೆ ಕಾರು ಖರೀದಿ ಮುಂಗಡಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದ 3.12 ಕೋಟಿ ರೂ. ಜತೆಗೆ ಹೆಚ್ಚುವರಿಯಾಗಿ 3.75 ಕೋಟಿ ರೂ. ಪೂರಕ ಅಂದಾಜಿನಲ್ಲಿ ಸೇರಿಸಲಾಗಿದೆ. ಬೆಳಗಾವಿ ಅಧಿವೇಶನ ವೆಚ್ಚಕ್ಕಾಗಿ 3.50 ಕೋಟಿ ರೂ., ಪೊಲೀಸ್‌ ವ್ಯವಸ್ಥೆ ಆಧುನೀಕರಣಕ್ಕಾಗಿ ‘ಸ್ಮಾರ್ಟ್‌ ಪೊಲೀಸಿಂಗ್‌’ಗೆ ಯೋಜನೆಗೆ 32.90 ಕೋಟಿ ರೂ., ಕೇರಳದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಜನತೆಗೆ ಪರಿಹಾರ, ಸಹಾಯಕ್ಕಾಗಿ 10
ಕೋಟಿ ರೂ.ರಾಜ್ಯದಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾದ ಜಿಲ್ಲೆಗಳಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು 200 ಕೋಟಿ ರೂ., ಬೆಂಗಳೂರಿನ ಶಂಕರ ಮಠದಲ್ಲಿರುವ ಶೃಂಗೇರಿ ಮಠದ ಅಭಿವೃದಿಟಛಿಗೆ 4.95 ಕೋಟಿ ರೂ., 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 6 ಕೋಟಿ ರೂ., ಸಾಲ ಮರುಪಾವತಿ, ಬಡ್ಡಿ ಪಾವತಿಗೆ 50.39 ಕೋಟಿ ರೂ. 

ಅಕ್ರಮ ಮದ್ಯ ಸಾಗಾಟಕ್ಕೆ ಕಡಿವಾಣ: ಕುಮಾರ ಸ್ವಾಮಿ
ವಿಧಾನಪರಿಷತ್ತು:
ಕಳಪೆ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಭರವಸೆ ನೀಡಿದ್ದಾರೆ. ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಎಲ್ಲಿಯೂ ಅನಧಿಕೃತ ಸಾರಾಯಿ ಅಂಗಡಿಗಳು ಇಲ್ಲ. ಒಂದು ವೇಳೆ ಅಂತಹ ಅಂಗಡಿಗಳು ಇದ್ದರೆ ಅವುಗಳ ವಿರುದ್ಧ ಕಠಿಣ ಕ್ರಮ
ಜರುಗಿಸುತ್ತೇವೆ ಎಂದು ತಿಳಿಸಿದರು.

ಪ್ರಶ್ನೋತ್ತರ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದ ತೇಜಸ್ವಿನಿ, ಹಳ್ಳಿಗಳಲ್ಲಿ ಕಳ್ಳಭಟ್ಟಿ ಮಾರಾಟ ಹೆಚ್ಚಾಗುತ್ತಿದೆ. ಕಳಪೆ ಮತ್ತು ಅಕ್ರಮ ಮದ್ಯ ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಅಬಕಾರಿ ಆದಾಯ ಸರ್ಕಾರಕ್ಕೆ ಅನಿವಾರ್ಯವೇ? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, “2007ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಸಾರಾಯಿ ನಿಷೇಧಿಸಿದ್ದೆ. ಪ್ರಸ್ತುತ ರಾಜ್ಯದಲ್ಲಿ ಎಲ್ಲಿಯೂ ಅನಧಿಕೃತ ಸಾರಾಯಿ ಅಂಗಡಿಗಳು ಇಲ್ಲ. ಒಂದು ವೇಳೆ, ರಾಜ್ಯದಲ್ಲಿ ಎಲ್ಲಿಯಾದರೂ ಅಕ್ರಮ ಮದ್ಯ ಮಾರಾಟ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಗ್ರಾನೈಟ್‌ ಕ್ವಾರಿ ಪರವಾನಗಿ ಪ್ರಕ್ರಿಯೆ ಸರಳ
ಬೆಳಗಾವಿ: ಗ್ರಾನೈಟ್‌ ಗಣಿಗಾರಿಕೆ ಸಂಬಂಧಿಸಿದಂತೆ ರಾಜ್ಯಕ್ಕೆ ರಾಜಧನ ನಷ್ಟವಾಗದಂತೆ ಉದ್ಯಮಿಗಳಿಗೆ ಪರವಾನಗಿ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಗ್ರಾನೈಟ್‌ ಕ್ವಾರಿಯಿಂಗ್‌ ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ನಡೆದ ಚರ್ಚೆಯಲ್ಲಿ ಉದ್ಯಮಿಗಳ ಸಮಸ್ಯೆಯನ್ನು ಆಲಿಸಿದ ಮುಖ್ಯಮಂತ್ರಿಗಳು ಮೇಲ್ಕಂಡಂತೆ ಸೂಚನೆ ನೀಡಿದರು.

ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶ ವ್ಯಾಪ್ತಿಯ ಶಾಸಕರು ನೀಡಿದ ಸಲಹೆಗಳನ್ನು ಪರಿಗಣಿಸಿ ಗ್ರಾನೈಟ್‌ ಉದ್ಯಮಗಳು 
ಎದುರಿಸುತ್ತಿರುವ ಸವಾಲುಗಳನ್ನು ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಗಣಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾ ಸಭೆಯಲ್ಲಿ ಮಾತನಾಡಿ, ಈಗಾಗಲೇ ಪರವಾನಗಿ ನೀಡುವ ಸಂಬಂಧ ಕಾನೂನು ಸರಳೀಕರಣಗೊಳಿಸಲು ನೆರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದು, ಅಧ್ಯಯನ ವರದಿಯೂ ಸಲ್ಲಿಕೆಯಾಗಿದೆ. ಶೀಘ್ರವೇ ಕಾನೂನು ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು.

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.