Channenahalli; ಬಿಜೆಪಿಗೆ ಇಂದು ಆರೆಸ್ಸೆಸ್ ಪಾಠ; ಭಿನ್ನ ರಾಗ ಶಮನಕ್ಕೆ ಸಂಘ ಪ್ರಯತ್ನ?
ಚನ್ನೇನಹಳ್ಳಿ ಆರೆಸ್ಸೆಸ್ ಕಚೇರಿಯಲ್ಲಿ ಆಂತರಿಕ ಬೈಠಕ್
Team Udayavani, Sep 12, 2024, 7:10 AM IST
ಬೆಂಗಳೂರು: ರಾಜ್ಯ ಬಿಜೆಪಿಯ ಒಳ ಬೇಗುದಿ ಶಮನಕ್ಕಾಗಿ ಕೊನೆಗೂ ಆರೆಸ್ಸೆಸ್ ಮಧ್ಯಪ್ರವೇಶ ಮಾಡಿದ್ದು, ಗುರುವಾರ ಸಂಘದ ಮುಖಂಡರು ಬಿಜೆಪಿ ನಾಯಕರಿಗೆ ಒಗ್ಗಟ್ಟಿನ ಪಾಠ ಮಾಡಲು ನಿರ್ಧರಿಸಿದ್ದಾರೆ.
ಆರೆಸ್ಸೆಸ್ ವರಿಷ್ಠರಾದ ಬಿ.ಎಲ್. ಸಂತೋಷ್, ಮುಕುಂದ್, ಸುಧೀರ್ ಸಹಿತ ಹಿರಿಯರು ಭಾಗಿಯಾಗಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಡಾ| ರಾಧಾ ಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಂಡಾಯದ ಪತಾಕೆ ಹಾರಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪಸಿಂಹ, ಅರವಿಂದ ಲಿಂಬಾವಳಿ, ತಟಸ್ಥ ಬಣದ ಸಿ.ಟಿ. ರವಿ, ವಿ. ಸುನಿಲ್ ಕುಮಾರ್, ಅರವಿಂದ ಬೆಲ್ಲದ್ ಸಹಿತ ಸುಮಾರು 40 ಬಿಜೆಪಿ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಚನ್ನೇನಹಳ್ಳಿಯಲ್ಲಿರುವ ಆರೆಸ್ಸೆಸ್ ಕಚೇರಿಯಲ್ಲಿ ಬೆಳಗ್ಗಿನ ಉಪಾಹಾರದೊಂದಿಗೆ ಸಭೆ ಪ್ರಾರಂಭವಾಗಲಿದ್ದು, ಮಧ್ಯಾಹ್ನದವರೆಗೆ ಚರ್ಚೆ, ಸಂವಾದ ನಡೆಯಲಿದೆ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಕ್ಕೆ ಪಕ್ಷ ಹಾಗೂ ಸಂಘ ನಿರಾಕರಿಸಿವೆ. ವರ್ಷದಲ್ಲಿ ಎರಡು ಬಾರಿ ಬಿಜೆಪಿ ನಾಯಕರ ಜತೆಗೆ ಬೈಠಕ್ ನಡೆಸುವುದು ವಾಡಿಕೆ. ಇದು ಸಂಘಟನೆ ಹಾಗೂ ಪಕ್ಷದ ಆಂತರಿಕ ವ್ಯವಸ್ಥೆಯಾಗಿದ್ದು, ರಾಜಕೀಯದ ಬಣ್ಣ ನೀಡುವ ಅಗತ್ಯವಿಲ್ಲ ಎಂಬ ಸಂದೇಶ ರವಾನೆ ಮಾಡಲಾಗಿದೆ.
ಕಿವಿ ಹಿಂಡಲಿದೆಯೇ ಆರೆಸ್ಸೆಸ್?
ಬಿಜೆಪಿ ಮೂಲಗಳ ಪ್ರಕಾರ ರಾಜ್ಯ ನಾಯಕತ್ವದ ವಿರುದ್ಧ ಪಕ್ಷದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಂಘ ಅನಿವಾರ್ಯವಾಗಿ ಮಧ್ಯಪ್ರವೇಶ ಮಾಡುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಪಕ್ಷಕ್ಕೆ ರಾಜಕೀಯವಾಗಿ ಹಿನ್ನಡೆಯಾಗಬಹುದೆಂಬ ಕಾರಣದಿಂದ ನಾಯಕರ ಕಿವಿ ಹಿಂಡುವುದಕ್ಕಾಗಿ ಸಭೆ ಆಯೋಜಿಸಲಾಗಿದೆ.
ಪ್ರಸ್ತುತ ವಿದ್ಯಮಾನ ವಿಶ್ಲೇಷಣೆ
ಮೂಲಗಳ ಪ್ರಕಾರ ಇದೇ ಮೊದಲ ಬಾರಿಗೆ ಬಿಜೆಪಿಯ ಘಟಾನುಘಟಿ ನಾಯಕರ ಅನುಪಸ್ಥಿತಿಯಲ್ಲಿ ಕಿರಿಯರು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಒಂದಷ್ಟು ಅಭಿಪ್ರಾಯ ವ್ಯತ್ಯಾಸ, ಆಕ್ಷೇಪ, ನಡಾವಳಿಗಳ ಬಗ್ಗೆ ಟೀಕೆ, ರಾಜಕೀಯ ಮಹತ್ವಾಕಾಂಕ್ಷೆಗಳು ಅನಾವರಣಗೊಳ್ಳುವುದು ಸಹಜ. ಆದರೆ ಇದು ಪಕ್ಷದ ಒಟ್ಟು ವ್ಯವಸ್ಥೆ ಹಾಗೂ ಭವಿಷ್ಯಕ್ಕೆ ಮಾರಕವಾಗಬಾರದು. ಈ ಹಿನ್ನೆಲೆಯಲ್ಲಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವಿಶ್ಲೇಷಣೆ ನಡೆಸಲು ನಿರ್ಧರಿಸಲಾಗಿದೆ. ಕಳೆದ ತಿಂಗಳು 19 ಅಥವಾ 21ರಂದು ಈ ಸಭೆ ನಡೆಯುವುದಕ್ಕೆ ದಿನಾಂಕ ನಿಗದಿಯಾಗಿತ್ತು. ಆದರೆ ಕೊನೆಯ ಹಂತದಲ್ಲಿ ಮುಂದೂಡಿಕೆಯಾಗಿತ್ತು. ಈ ಸಭೆ ಪಕ್ಷದ ಪ್ರಸಕ್ತ ವಿದ್ಯಮಾನಗಳ ಸುತ್ತ ನಡೆಯಲಿದೆ ಎಂದು ಹೇಳಲಾಗಿದೆ.
ಬಿಜೆಪಿ ಒಳಬೇಗುದಿ ಶಮನಕ್ಕೆ ಆರೆಸ್ಸೆಸ್ ಸಂಧಾನ ನಡೆಸಲಿದೆ ಎಂದು ಉದಯವಾಣಿ ಆ. 13ರಂದೇ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.