ಬಿಜೆಪಿ ನಾಯಕರಿಗೆ ಆರೆಸ್ಸೆಸ್ ರಾಷ್ಟ್ರಭಾವ ಪಾಠ
Team Udayavani, Jun 19, 2019, 3:06 AM IST
ಬೆಂಗಳೂರು: “ದೇಶದಲ್ಲಿ ರಾಷ್ಟ್ರ ಭಾವ ಜಾಗೃತಿ ಮತ್ತೆ ಮೂಡಿದ್ದು, ಅದನ್ನು ನಿರಂತರವಾಗಿಟ್ಟುಕೊಂಡು ದೇಶದ ಒಳತಿಗಾಗುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ.
ನಗರದ ಕೇಶವ ಕೃಪಾದಲ್ಲಿ ಮಂಗಳವಾರ ಇಡೀ ದಿನ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಆರ್‌ಎಸ್‌ಎಸ್ ಸಹ ಸರಕಾರ್ಯವಾಹ ಮುಕುಂದ್, ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ್, ಅರವಿಂದ ಲಿಂಬಾವಳಿ ಇತರರು ಪಾಲ್ಗೊಂಡಿದ್ದರು.
ಆರು ತಿಂಗಳಿಗೊಮ್ಮೆ ನಡೆಯುವ ಸಭೆಯಲ್ಲಿ ರಾಜ್ಯ ಹಾಗೂ ರಾಷ್ಟ್ರದ ವಿಚಾರಗಳು, ಕಳೆದ ಲೋಕಸಭಾ ಚುನಾವಣೆ, ಫಲಿತಾಂಶದ ನಂತರದ ನಡೆ ಕುರಿತೂ ಚರ್ಚೆಯಾಗಿದೆ. ಪ್ರಮುಖವಾಗಿ ಜನರನ್ನು ತೀವ್ರ ಕಾಡುತ್ತಿರುವ ಜಲಕ್ಷಾಮ, ಪರಿಸರ ಮಾಲಿನ್ಯ ಹಾಗೂ ಪ್ರಕೃತಿ ವಿಕೋಪಗಳ ನಿಯಂತ್ರಣ, ಮುನ್ನೆಚ್ಚರಿಕೆ ಕ್ರಮಗಳಿಗೆ ಸಂಬಂಧಪಟ್ಟಂತೆ ವೈಯಕ್ತಿಕ ನೆಲೆಗಟ್ಟಿನ ಪರಿಹಾರದ ಜತೆಗೆ ಸಂಘಟನೆ, ಸಮಾಜ ಜಾಗೃತಿ, ಸರ್ಕಾರದ ಪಾತ್ರದ ಬಗ್ಗೆ ಚರ್ಚೆಯಾಯಿತು. ಹಾಗೆಯೇ 1947ರಲ್ಲಿದ್ದ ರಾಷ್ಟ್ರಭಾವ ಜಾಗೃತಿ ಈ ಬಾರಿ ಮತ್ತೆ ಮೂಡಿದೆ.
ಇದನ್ನು ನಿರಂತರವಾಗಿಟ್ಟುಕೊಳ್ಳಬೇಕಿದೆ ಎಂಬುದಾಗಿ ಸಂಘ ಪರಿವಾರದ ಪ್ರಮುಖರು ಸಲಹೆ ನೀಡಿದರು ಎಂದು ಮೂಲಗಳು ಹೇಳಿವೆ. ಬರ, ಪ್ಲಾಸ್ಟಿಕ್ ಹಾವಳಿ, ಕೆರೆ, ನದಿ ಬತ್ತುತ್ತಿರುವುದು, ಪ್ರಕೃತಿ ವಿಕೋಪದ ಬಗ್ಗೆಯೂ ಗಂಭೀರ ಚರ್ಚೆ ನಡೆದಿದ್ದು, ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಗಿಡ ನೆಡುವುದು, ಇಂಗು ಗುಂಡಿ ನಿರ್ಮಾಣ ಸೇರಿದಂತೆ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂಬ ಬಗ್ಗೆಯೂ ಕಿವಿಮಾತು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದಸ್ಯತ್ವಕ್ಕೆ ಒತ್ತು: ಕಳೆದ ಲೋಕಸಭಾ ಚುನಾವಣೆಯಲ್ಲಿ 17 ರಾಜ್ಯಗಳಲ್ಲಿ ಬಿಜೆಪಿ ಶೇ.50ಕ್ಕೂ ಹೆಚ್ಚು ಮತ ಪಡೆದಿದೆ. ಸಂಭ್ರಮದ ಗುಂಗಿನಲ್ಲೇ ಇರದೆ ಸದಸ್ಯತ್ವ ನೋಂದಣಿಗೆ ವಿಶೇಷ ಒತ್ತು ನೀಡಬೇಕು. ಬೂತ್‌ಮಟ್ಟದಲ್ಲಿ ಪಕ್ಷದ ಬಲವರ್ಧನೆ, ಕಾರ್ಯಕರ್ತರನ್ನು ಉತ್ತೇಜಿಸಿ ಸಂಘಟನೆಗೆ ಆದ್ಯತೆ ನೀಡಬೇಕು. ಹೊಸ ಕಾರ್ಯಕರ್ತರು, ಸದಸ್ಯರನ್ನು ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವತ್ತ ಗಮನ ಹರಿಸಬೇಕು. ಸಂಸದರ ಹೆಸರು ಮುಂದಿನ ಬಾರಿ ಗೆಲುವಿನಲ್ಲಿ ಪ್ರಮುಖ ಪಾತ್ರವಾಗಿರುವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು ಎಂದು ಮೂಲಗಳು ಹೇಳಿವೆ.
ಮಹದಾಯಿ ವಿಚಾರ – ನಿಯೋಗ ಬಗ್ಗೆ ಚರ್ಚೆ: ನೀರಿನ ಸಮಸ್ಯೆ, ಜಲವಿವಾದಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಹಾಗೂ ಗೋವಾ ಮುಖ್ಯಮಂತ್ರಿಗಳ ಭೇಟಿಗೆ ನಿಯೋಗ ಕೊಂಡೊಯ್ಯುವ ಬಗ್ಗೆಯೂ ಪರಿವಾರದ ಪ್ರಮುಖರು ಸಲಹೆ ನೀಡಿದ್ದು, ಈ ಬಗ್ಗೆ ಪಕ್ಷದ ಹಿರಿಯರು ತೀರ್ಮಾನ ಕೈಗೊಳ್ಳಬೇಕಿದೆ ಎಂದು ತಿಳಿಸಿದರು ಎಂದು ತಿಳಿದು ಬಂದಿದೆ.
ಸಭೆ ಬಳಿಕ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಬರಗಾಲ, ಕುಡಿಯುವ ನೀರಿನ ಸಮಸ್ಯೆ ಕುರಿತ ಪರಿಹಾರ ಕ್ರಮಗಳಿಗೆ ಸಮಾಜ, ಸರ್ಕಾರ ಹೇಗೆ ಸ್ಪಂದಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಿತು. ಯಾವುದೇ ಯೋಜನೆ ಯಶಸ್ವಿಯಾಗಬೇಕಾದರೆ ಸಮಾಜ ಅದಕ್ಕೆ ಪೂರಕವಾಗಿ ಸ್ಪಂದಿಸುವುದು ಮುಖ್ಯ. ಆ ನಿಟ್ಟಿನಲ್ಲಿ ಸಮಾಜವನ್ನು ಸಜ್ಜುಗೊಳಿಸುವ ಬಗ್ಗೆ ಸಭೆಯಲ್ಲಿ ಚಿಂತನೆ, ಚರ್ಚೆ ನಡೆಯಿತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.