ನಿಯಮ ಉಲ್ಲಂಘನೆ: 1.24 ಲಕ್ಷ ಪ್ರಕರಣ
Team Udayavani, Jun 21, 2020, 7:28 AM IST
ಬೆಂಗಳೂರು: ಕೋವಿಡ್ 19 ವೈರಸ್ ಸೋಂಕು ಹರಡದಂತೆ ತಡೆಯಲು ಕಳೆದ ಮಾ.23ರಿಂದ ಲಾಕ್‌ಡೌನ್ ಜಾರಿ ನಂತರ ಇತ್ತೀಚಿನವರಿಗೆ ರಾಜ್ಯಾದ್ಯಂತ 1.24 ಲಕ್ಷ ನಿಯಮ ಉಲ್ಲಂಘನೆ ಪ್ರಕರಣ ದಾಖ ಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಅಲ್ಲದೆ, 4,947 ಎಫ್‌ಐಆರ್ ದಾಖಲಿಸಲಾಗಿದೆ. 10,843 ವ್ಯಕ್ತಿಗಳನ್ನು ಬಂಧಿಸಲಾಗಿದ್ದು, 1,05,158 ವಾಹನ ಜಪ್ತಿ ಮಾಡಲಾಗಿದೆ.
ಒಟ್ಟಾರೆ 3,73,59,700 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಕೋರಿ ಬೆಂಗಳೂರಿನ ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ವಿವರ ಸಲ್ಲಿಸಿದೆ. ಇತ್ತೀಚೆಗೆ ನಟ ಚಿರಂಜೀವಿ ಸರ್ಜಾ ನಿಧನರಾದ ವೇಳೆ ಜೂ.7ರಂದು ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಬಗ್ಗೆ ಹಲವು ದೂರು ಬಂದಿವೆ. ಹೀಗಾಗಿ 59 ಮಂದಿ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಈ ಮಧ್ಯೆ, ಕೇಂದ್ರ ಸರ್ಕಾರದ ಪರ ವಾದ ಮಂಡಿಸಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ್, ಪೂಜಾಸ್ಥಳಗಳು, ರೆಸ್ಟೋರೆಂಟ್, ಹೊಟೇಲ್ ಮತ್ತು ಮಾಲ್‌ಗಳಿಗೆ ಸಂಬಂಧಿಸಿದಂತೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಾನೂನು ರೀತಿಯಲ್ಲಿ ಜಾರಿಗೊಳಿಸಬಹುದಾಗಿದೆ. ವಿಪತ್ತು ನಿರ್ವ ಹಣಾ ಕಾಯ್ದೆಯಲ್ಲಿ ಅಂತಹ ಯಾವುದಾದರೂ ಉಲ್ಲಂಘನೆಗಳು ಕಂಡುಬಂದರೆ ದೂರುಗಳನ್ನು ದಾಖಲಿಸಬಹುದು, ಅದಕ್ಕೆ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.