Rain ನೆರೆಪೀಡಿತ ಪ್ರದೇಶಕ್ಕೆ ಧಾವಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್
ಮಳೆ ಅವಾಂತರ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆದೇಶ
Team Udayavani, Jul 29, 2024, 6:55 AM IST
ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆ ಹಾಗೂ ಮಳೆ ಅವಾಂತರಗಳು ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ನಷ್ಟ ಹಾಗೂ ಪ್ರಾಣ ಹಾನಿಗಳು ಸಂಭವಿಸುತ್ತಿವೆ. ಈಗಾಗಲೇ ಆಯಾ ಜಿಲ್ಲಾಡಳಿತಗಳು ತುರ್ತು ನೆರವಿಗೆ ಧಾವಿಸಿವೆ. ಈ ಮಧ್ಯೆ ಕೂಡಲೇ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸುವಂತೆ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.
ಮಳೆ ಅವಾಂತರಗಳಿಂದ ಕಂಗೆಟ್ಟಿರುವ ಜನರ ಜತೆಗೆ ನಾವು ನಿಲ್ಲಬೇಕು ಎಂದು ಕರೆ ಕೊಟ್ಟಿರುವ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ.
ಜನರ ಸಮಸ್ಯೆ ಆಲಿಸಿ
ಎಲ್ಲೆಡೆ ಭಾರೀ ಮಳೆಯಾಗು ತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ನೆರೆ ಪೀಡಿತ ಪ್ರದೇಶ ಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸ ಬೇಕು. ಅಗತ್ಯ ನೆರವನ್ನು ಒದಗಿಸಬೇಕು. ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾ ಶಯ ಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ.
ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆ ಹಾನಿ ಗಳ ಬಗ್ಗೆ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ಸರಕಾರದ ಕರ್ತವ್ಯ. ಪ್ರವಾಹಪೀಡಿತರ ಸಮಸ್ಯೆ ಆಲಿಸಿ, ನೆರವು ಒದಗಿಸಬೇಕು ಎಂದು ಹೇಳಿದ್ದಾರೆ.
ಶಾಸಕರೊಂದಿಗೆ ಭೇಟಿ ನೀಡಿ
ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರ ಪ್ರವಾಹಪೀಡಿತ ಪ್ರದೇಶಗಳ ಶಾಸಕರೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕು. ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜತೆ ನಿಲ್ಲೋಣ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.