ಕಬ್ಬು, ಮೆಕೆಜೋಳ ಬೆಳೆಗಾರರ ನೆರವಿಗೆ ಧಾವಿಸಿ
Team Udayavani, Nov 16, 2017, 8:19 AM IST
ವಿಧಾನಸಭೆ: “ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರಿಂದ ಬರಬೇಕಾದ ಬಾಕಿ ಪಾವತಿ ವಿಚಾರದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮೆಕ್ಕೆಜೋಳ ಬೆಲೆ ಕುಸಿದಿರುವುದರಿಂದ ಸರ್ಕಾರ ಮಧ್ಯಪ್ರವೇಶಿಸಿ ತಕ್ಷಣ ಬೆಂಬಲ ಬೆಲೆ ಘೋಷಿಸಬೇಕು’ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದರು.
ಬುಧವಾರ ವಿಧಾನಸಭೆಯಲ್ಲಿ ಕಬ್ಬು ಬೆಳೆಗಾರರು ಹಾಗೂ ಮೆಕ್ಕೆಜೋಳ ಬೆಳೆದ ರೈತರ ಸಮಸ್ಯೆಗಳ ಬಗ್ಗೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ 74.24 ಕೋಟಿ ರೂ. ಬಾಕಿ ನೀಡಬೇಕಿದೆ. ಸಚಿವ ರಮೇಶ್ ಜಾರಕಿ ಹೊಳಿ ಅವರ ಮಾಲೀಕತ್ವದ ಕಾರ್ಖಾನೆಯೂ ಬಾಕಿ ಉಳಿಸಿ ಕೊಂಡಿದೆ ಎಂದು ರೈತರು ಆರೋಪಿಸಿದ್ದಾರೆ.
ತಕ್ಷಣ ಬಾಕಿ ಪಾವತಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.
ಈ ವರ್ಷದ ಕಟಾವು ಬಂದಿದ್ದರೂ ಕಬ್ಬು ದರ ನಿಗದಿ ಮಾಡಿಲ್ಲ. ಗುಜರಾತ್‌ನಲ್ಲಿ ಟನ್‌ಗೆ 4 ಸಾವಿರ ರೂ., ಉತ್ತರ ಪ್ರದೇಶದಲ್ಲಿ 3400 ರೂ. ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಏಕೆ ಅಷ್ಟು ಕೊಡಲು ಆಗುವುದಿಲ್ಲ ಎಂದು ಪ್ರಶ್ನಿಸಿದರು. ಮೆಕ್ಕೆಜೋಳ ಬೆಳೆದ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರ ಮೆಕ್ಕಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ 1450 ರೂ. ಬೆಂಬಲ ಬೆಲೆ ಘೋಷಿಸಿದೆ. ರಾಜ್ಯ ಸರ್ಕಾರ ಕನಿಷ್ಠ 500 ರೂ. ಸೇರಿಸಿ 1950ರಿಂದ 2000 ರೂ.ವರೆಗೆ ದರ ನೀಡಿ ಖರೀದಿಸಲು ತಕ್ಷಣ ಮಧ್ಯಪ್ರವೇಶ ಮಾಡಬೇಕು ಎಂದು
ಒತ್ತಾಯಿಸಿದರು. ಅಲ್ಲದೆ, ಇಂತಹ ಸಂದರ್ಭದಲ್ಲಿ ಆವರ್ತ ನಿಧಿ ಮೂಲಕ ಹಣ ಬಿಡುಗಡೆ ಮಾಡಿ ರೈತರ ನೆರವಿಗೆ ಧಾವಿಸುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.
ರೈತರು ಕಬ್ಬು ಬೆಳೆಯುವುದನ್ನೇ ಬಿಟ್ಟಿದ್ದಾರೆ: ಬಿಜೆಪಿ ಸದಸ್ಯ ಗೋವಿಂದ ಕಾರಜೋಳ ಮಾತನಾಡಿ, ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಕಬ್ಬು ಬೆಳೆಯುವ ಪ್ರದೇಶ ಕ್ರಮೇಣ ಕಡಿಮೆಯಾಗುತ್ತಿದೆ. ಸೂಕ್ತ ಬೆಲೆ ಇಲ್ಲದೆ ರೈತರು ಕಬ್ಬು ಬೆಳೆಯುವುದನ್ನೇ ಬಿಟ್ಟಿದ್ದಾರೆ ಎಂದು ಹೇಳಿದರು. ರಿಕವರಿ ವಿಚಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಶೇ.13.5 ರಿಕವರಿ ಆದರೂ
ಶೇ.9.50 ರಿಂದ ಶೇ.10 ಮಾತ್ರ ತೋರಿಸಲಾಗುತ್ತಿದೆ. ಇದು ಮಹಾಮೋಸ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಗುಜರಾತ್‌ನಲ್ಲಿ ಶೇ.11 ರಿಕವರಿ ಇದ್ದರೂ 4200 ರೂ. ನಿಂದ 4300 ರೂ.ವರೆಗೆ ನೀಡಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.9 ರಿಕವರಿ ಇದ್ದರೂ 3250 ರೂ. ದರ ನಿಗದಿ ಮಾಡಲಾಗಿದೆ. ಆದರೆ, ನಮ್ಮಲ್ಲಿ ತೀರಾ ಕಡಿಮೆ ಯಾಕೆ ಎಂದರು.
ಕಬ್ಬು ಬೆಲೆ ನಿಯಂತ್ರಣ ಮಂಡಳಿ ಸಭೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವುದು ಸೂಕ್ತ. ಆ ಸಭೆಗೆ ಕಬ್ಬು ಬೆಳೆಗಾರನಾದ ನನ್ನನ್ನು ಕರೆದರೂ ಬರುತ್ತೇನೆ. ಉತ್ತಮ ಸಲಹೆ ನೀಡುತ್ತೇನೆ ಎಂದು ಹೇಳಿದರು. ಬಿಜೆಪಿಯ ಬಿ.ವೈ.ರಾಘವೇಂದ್ರ ಮಾತನಾಡಿ, 3
ವರ್ಷಗಳಿಂದ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಮಳೆ ಆಧಾರಿತ ಜಮೀನು ಜತೆಗೆ ತರಿ ಜಮೀನುಗಳಲ್ಲಿ ರೈತರು ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ 30 ಸಾವಿರ ಎಕರೆ ತರಿ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಬೆಳೆಗೆ ರೋಗ ತಗುಲಿ ರೈತರು ಕಂಗಾಲಾಗಿದ್ದಾರೆ. ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ತಕ್ಷಣ ಖರೀದಿ ಕೇಂದ್ರ ಆರಂಭಿಸಿ ಮೆಕ್ಕೆಜೋಳ ಖರೀದಿಸಬೇಕು. ಕೇಂದ್ರ ಸರ್ಕಾìದ 1425 ರೂ. ಜತೆಗೆ ರಾಜ್ಯ ಸರ್ಕಾರ 400 ರೂ. ಸೇರಿಸಿ ಖರೀದಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿಯ ಲಕ್ಷ್ಮಣ ಸವದಿ, ರೈತಸಂಘದ ಪುಟ್ಟಣ್ಣಯ್ಯ ಮಾತನಾಡಿ, ಕಬ್ಬು ಹಾಗೂ ಮೆಕ್ಕೆಜೋಳ ಬೆಳೆಗಾರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.