S. M. Krishna ಅಂತಿಮ ಯಾತ್ರೆ: ಮಾರ್ಗ ಮಧ್ಯೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ
ಸದಾಶಿವನಗರ ನಿವಾಸದಿಂದ ಸೋಮನಹಳ್ಳಿಗೆ ಮೇರು ನಾಯಕನ ಕೊನೆಯ ಪಯಣ
Team Udayavani, Dec 11, 2024, 8:37 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಮೆರವಣಿಗೆ ಬುಧವಾರ ಬೆಳಗ್ಗೆ 8 ಗಂಟೆಗೆ ಸದಾಶಿವನಗರ ನಿವಾಸದಿಂದ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಆರಂಭವಾಗಿದೆ.
ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಬೆಳಗ್ಗೆ 8 ಗಂಟೆವರೆಗೂ ಕೃಷ್ಣ ಅವರ ಸದಾಶಿವನಗರ ನಿವಾಸದಲ್ಲಿ ಅವರ ಪಾರ್ಥಿವ ಶರೀರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.
ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಗುತ್ತಿದ್ದು ಪೊಲೀಸರು ಮಾರ್ಗ ಮಧ್ಯೆ ಸಕಲ ವ್ಯವಸ್ಥೆಗಳನ್ನು ಮಾಡಿದ್ದಾರೆ. ಚಿರಶಾಂತಿ ವಿಶೇಷ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಾಹನದಲ್ಲಿದ್ದಾರೆ.
ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೂ ಮಂಡ್ಯ, ಮೈಸೂರು ಭಾಗದ ಜನರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದ್ದು, ಬಳಿಕ ಅಂತಿಮ ವಿಧಿ ನಡೆಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.