![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 18, 2022, 7:43 PM IST
ಬೆಂಗಳೂರು : ಸಾರ್ವಜನಿಕರ ಹಿತಕ್ಕಾಗಿ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ತಂದರೂ ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳ್ಳದೆ ಜನರಿಗೆ ಅನಾನುಕೂಲವಾಗುತ್ತಿದೆ. ಇದಕ್ಕೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಬೇಜವಬ್ದಾರಿತನವೇ ಕಾರಣ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆ ಹಾನಿ ಸಂಬಂಧ ಹೇರೋಹಳ್ಳಿಯಲ್ಲಿನ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಸಚಿವರು ಮಾತನಾಡಿದರು.
ಸೂಕ್ತ ರೀತಿಯಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳದ ಹಿನ್ನೆಲೆಯಲ್ಲಿ ಮನೆಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಎಲ್ ಅಂಡ್ ಟಿ ಅವರು ಉಪ ಗುತ್ತಿಗೆ ನೀಡಿದ್ದರಿಂದ ಕಾಮಗಾರಿ ವಿಳಂಬವಾಗುತ್ತಿದೆ. ಈ ಕೂಡಲೇ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದರು.
ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಹಣ ಬಿಡುಗಡೆ ಮಾಡಿದರೂ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ ಎಂದರೆ ಅದಕ್ಕೆ ಯಾರು ಹೊಣೆ? ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ಹೇಳಿದರು.
ಕ್ಷೇತ್ರದಲ್ಲಿ ಒಳಚರಂಡಿ ಕಾಮಗಾರಿಗೆ ಉಪ ಗುತ್ತಿಗೆ ನೀಡಿರುವ ಎಲ್ ಅಂಡ್ ಟಿ ಅವರಿಗೆ ಖಡಕ್ ಸೂಚನೆ ನೀಡಬೇಕು. ಕಾಮಗಾರಿ ನಡೆಯುವ ಕಡೆಗಳಲ್ಲಿ ಅಧಿಕಾರಿಗಳು, ಗುತ್ತಿಗೆದಾರರ ಪೋನ್ ನಂಬರ್ ಒಳಗೊಂಡಿರುವ ಬೋರ್ಡ್ ಗಳನ್ನು ಹಾಕಬೇಕು ಎಂದು ಸೂಚಿಸಿದರು.
ಇದನ್ನೂ ಓದಿ : ಗಂಗಾವತಿ: ಸಂಗಾಪುರ ಅಕ್ರಮ ಸಾಗುವಳಿ 7.18 ಗಾಂವಠಾಣಾ ಭೂಮಿ ಗ್ರಾಪಂ ವಶಕ್ಕೆ
ಮಳೆ ಹಾನಿ ಆಗಿರುವ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಶಾಶ್ವತ ಪರಿಹಾರದ ಯೋಜನೆ ರೂಪಿಸಬೇಕು. ಇಲಾಖಾವಾರು ಸಮನ್ವಯತೆ ಮಾಡಿಕೊಂಡು ಕೆಲಸ ಮಾಡಿದರಷ್ಟೇ ಸಮಸ್ಯೆ ಪರಿಹರಿಸಲು ಸಾಧ್ಯ ಎಂದರು.
ಕೆಲವೆಡೆ ರಾಜಕಾಲುವೆ ದುರಸ್ತಿ ಕಾರ್ಯ ಸಮರ್ಪಕವಾಗಿ ಆಗಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.
ಸಭೆ ಬಳಿಕ ಮಳೆ ಹಾನಿ ಸಂಬಂಧ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವರು ತುರ್ತು ಪರಿಹಾರ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.