ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮೊಳಕಾಲ್ಮೂರಿನ ತಿಪ್ಪೇಸ್ವಾಮಿ
Team Udayavani, Mar 1, 2019, 8:16 AM IST
ಬೆಂಗಳೂರು: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಬಿ.ಜೆ.ಪಿ. ವಿರುದ್ಧ ಮುನಿಸಿಕೊಂಡಿದ್ದ ಮಾಜೀ ಶಾಸಕ ಎಸ್. ತಿಪ್ಪೇಸ್ವಾಮಿ ಅವರು ಇಂದು ಬೆಂಗಳೂರಿನಲ್ಲಿರುವ ಪ್ರದೇಶ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
‘ತಿಪ್ಪೇಸ್ವಾಮಿ ಅವರು ತಮ್ಮ ಜನಪರ ಕಾರ್ಯಗಳ ಕಾರಣದಿಂದ ಮೊಳಕಾಲ್ಮೂರು ಜನರೊಂದಿಗೆ ತಳಮಟ್ಟದಲ್ಲಿ ಸಂಪರ್ಕವಿರಿಸಿಕೊಂಡಿದ್ದಾರೆ. ಹೀಗಾಗಿ ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ’ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಿಪ್ಪೇಸ್ವಾಮಿ ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸುತ್ತಾ ಹೇಳಿದರು.
‘ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದ ಜನತೆಗೆ ಯಾವುದೇ ಕೆಲಸಗಳನ್ನು ಮಾಡಿಲ್ಲ. ಅವರಿಗೆ ಈ ಕ್ಷೇತ್ರವನ್ನು ಬಿಟ್ಟುಕೊಡದೇ ಬೇರೆ ಆಯ್ಕೆ ಇಲ್ಲ. ಬಳ್ಳಾರಿಯಲ್ಲಿಯೂ ರಾಮುಲು ಅವರು ಹಿಡಿತ ಕಳೆದುಕೊಂಡಿದ್ದಾರೆ’ ಎಂದು ದಿನೇಶ್ ಗುಂಡೂರಾವ್ ಅವರು ತಿಳಿಸಿದರು.
ತಿಪ್ಪೇಸ್ವಾಮಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 41 ಸಾವಿರ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. 2013ರಲ್ಲಿ ನಡೆದ ಚುನಾವಣೆಯಲ್ಲಿ ತಿಪ್ಪೇಸ್ವಾಮಿ ಅವರು ಶ್ರೀರಾಮುಲು ಅವರ ಬಿ.ಎಸ್.ಆರ್. ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿ.ಎಸ್.ಆರ್. ಕಾಂಗ್ರೆಸ್ ಭಾರತೀಯ ಜನತಾ ಪಕ್ಷದೊಂದಿಗೆ ವಿಲೀನಗೊಂಡಿತ್ತು. ಈ ಸಂದರ್ಭದಲ್ಲಿ ತಿಪ್ಪೇಸ್ವಾಮಿ ಅವರು ಬಿ.ಜೆ.ಪಿ.ಯೊಂದಿಗೆ ಗುರುತಿಸಿಕೊಂಡಿದ್ದರು.
“Shri. Thippeswamy has worked at grass root level and has a greater connect with the people because of his good work in Molakalmuru. His decision to join our party is going to help us win Chitradurga constituency with ease.”: @KPCCPresident Shri. @dineshgrao pic.twitter.com/H210V6bW4Z
— Karnataka Congress (@INCKarnataka) March 1, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.