ತ್ಯಾಗ ಹೊಸತೇನಲ್ಲ!; ಡಿಸಿಎಂ ಗೃಹ ಖಾತೆ ಬಿಟ್ಟು ಕೊಡುವುದು ಖಚಿತ ?
Team Udayavani, Dec 27, 2018, 3:09 PM IST
ಬೆಂಗಳೂರು: ನನಗೆ ತ್ಯಾಗ ಹೊಸತೇನಲ್ಲ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಗೃಹ ಖಾತೆಯನ್ನು ಬಿಟ್ಟು ಕೊಡುವ ಸೂಚನೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾಡತನಾಡಿದ ಡಿಸಿಎಂ ನನಗೆ ತ್ಯಾಗ ಹೊಸತೇನಲ್ಲ. ನಾನು 8 ವರ್ಷಗಳ ಕಾಲ ಪಕ್ಷ ಅಧಿಕಾರದಲ್ಲಿರುವ ವೇಳೆ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನಗೆ ತ್ಯಾಗ ಅನ್ನುವುದು ಹೊಸತೇನಲ್ಲ .ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೆ ಅದಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದರು.
ನಮ್ಮ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಬೇರೆಯವರ ಸಂಪರ್ಕದಲ್ಲಿ ಯಾಕೆ ಇರುತ್ತಾರೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರಿಗೆ ಟಾಂಗ್ ನೀಡಿದರು.
ಸಂಪುಟ ಸೇರ್ಪಡೆಯಾಗಿರುವ ಹಿರಿಯ ಸಚಿವರಾದ ಎಂ.ಬಿ.ಪಾಟೀಲ್ ಅವರು ಗೃಹ ಖಾತೆಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.ಈ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಖಾತೆ ಬಿಟ್ಟುಕೊಡಲು ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಖಾತೆ ಹಂಚಿಕೆ ಹಗ್ಗ ಜಗ್ಗಾಟಕ್ಕೆ ಸಂಬಂಧಿಸಿ ಬುಧವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ನೇತೃತ್ವ ದಲ್ಲಿ ನಡೆದ ಸಭೆ ವಿಫಲವಾಗಿದ್ದು ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.