Karnataka ಎಲ್ಲ ಡ್ಯಾಂಗಳ ಸುರಕ್ಷತೆ ಅಧ್ಯಯನ; ಅಧಿಕಾರಿಗಳ ತಪ್ಪೇನಿದೆ?: ಡಿಕೆಶಿ
1 ತಿಂಗಳಲ್ಲಿ ವರದಿ ನೀಡಲಿದೆ ಅಣೆಕಟ್ಟು ಸುರಕ್ಷತ ಸಮಿತಿ, ತುಂಗಭದ್ರಾ ಜಲಾಶಯದ ಬಗ್ಗೆ ಕೇಂದ್ರ ಸರಕಾರಕ್ಕೆ ಮಾಹಿತಿ
Team Udayavani, Aug 13, 2024, 6:25 AM IST
ಬೆಂಗಳೂರು: ಅಣೆಕಟ್ಟು ಸುರಕ್ಷತಾ ಸಮಿತಿ ರಚನೆ ಮಾಡಲಾಗುತ್ತಿದ್ದು ಈ ಸಮಿತಿಯು ರಾಜ್ಯದ ಎಲ್ಲ ಅಣೆಕಟ್ಟುಗಳಿಗೆ ಭೇಟಿ ನೀಡಿ ಸುರಕ್ಷತೆಯ ಬಗ್ಗೆ ವರದಿ ನೀಡುತ್ತದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿ, ಸಮಿತಿಯು ಎಲ್ಲ ಅಣೆಕಟ್ಟುಗಳ ಅಧ್ಯಯನ ನಡೆಸಿ ಮುಂದಿನ ಒಂದು ತಿಂಗಳ ಒಳಗಾಗಿ ವರದಿ ನೀಡುವುದು. ತುಂಗಾಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯಕ್ಕೂ ಈ ಸಮಿತಿಗೂ ಸಂಬಂಧವಿಲ್ಲ. ಉಳಿದ ವಿಚಾರದ ಬಗ್ಗೆ ವರದಿ ತಯಾರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕೆಲಸ ನಡೆಯುತ್ತಿದೆ. ತುಂಗಭದ್ರಾ ನೀರಾವರಿ ನಿಗಮ ನಮ್ಮೊಬ್ಬರ ಅಧಿಕಾರ ವ್ಯಾಪ್ತಿಯಲ್ಲಿ ಬರುವುದಿಲ್ಲ. ಕೇಂದ್ರ ಹಾಗೂ ಮೂರು ರಾಜ್ಯಗಳ ಸದಸ್ಯರು ಇದರಲ್ಲಿ ಇರುತ್ತಾರೆ. ಗೇಟ್‌ನ ಸರಪಳಿ ಕಿತ್ತು ಹೋದ ಪ್ರಕರಣದ ಬಗ್ಗೆ ಎಲ್ಲರಿಗೂ ತತ್‌ಕ್ಷಣ ಮಾಹಿತಿ ನೀಡಲಾಯಿತು. ಅಣೆಕಟ್ಟು ಸುರಕ್ಷತ ಸಮಿತಿಯಲ್ಲಿ ಈ ಮೊದಲೇ ಕೆಲಸ ಮಾಡಿದಂತಹ ತಂತ್ರಜ್ಞರು ಇದ್ದರು. ಅವರ ಬಳಿ ಚರ್ಚೆ ನಡೆಸಲಾಯಿತು. ಅನಂತರ ನಕ್ಷೆಯನ್ನು ತೆಗೆಸಿ ಅದರಂತೆ ಗೇಟ್ ತಯಾರಿಸುವವರ ಬಳಿ ಮಾತನಾಡಲಾಯಿತು. ನಾನೇ ಖು¨ªಾಗಿ ಜಿಂದಾಲ್ ಕಾರ್ಖಾನೆಯವರ ಬಳಿ ಮಾತನಾಡಿದೆ. ಸೋಮವಾರ ಬೆಳಗಿನ ಜಾವದ ಹೊತ್ತಿಗೆ ಸಂಪೂರ್ಣ ತಂಡ ಬಂದು ಕೆಲಸ ಪ್ರಾರಂಭ ಮಾಡಿದೆ. 50-60 ಟಿಎಂಸಿ ನೀರನ್ನು ಉಳಿಸಲು, ರೈತರಿಗೆ ಒಂದು ಬೆಳೆಗಾದರೂ ನೀರು ಕೊಡಲು ನಾವು ಕೆಲಸ ಮಾಡುತ್ತಿದ್ದೇವೆ ಎಂದರು.
ಕೇಂದ್ರಕ್ಕೂ ಮಾಹಿತಿ ರವಾನೆ
ರೈತರು ಆತಂಕಪಡಬೇಕಾಗಿಡಲ್ಲ. ನದಿಗೆ ನೀರು ಹರಿದು ಹೋಗುವ ಬದಲು ಎಲ್ಲ ಚಾನಲ್‌ಗಳನ್ನು ತೆರೆದು ಅಲ್ಲಿಗೂ ನೀರು ಹರಿಸಲಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಸುರಕ್ಷತೆ ವಹಿಸಲಾಗಿದೆ. ಆಂಧ್ರ, ತೆಲಂಗಾಣ ಹಾಗೂ ವಿಪಕ್ಷದ ನಾಯಕರು ಭೇಟಿ ನೀಡುತ್ತೇವೆ ಎಂದು ತಿಳಿಸಿದ್ದರು. ಅವರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ತಿಳಿಸಿ¨ªೆ. ಅಲ್ಲದೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಕೇಂದ್ರ ಸಚಿವರಾದ ಸೋಮಣ್ಣ ಅವರ ಬಳಿಯೂ ಮಾತನಾಡಿ ವರದಿ ಕಳುಹಿಸಲಾಗಿದೆ. ತುಂಗಭದ್ರಾ ನೀರಾವರಿ ನಿಗಮದ ಅಧ್ಯಕ್ಷ ವೀರೇಂದ್ರ ಶರ್ಮ ಅವರಿಗೆ ಪತ್ರ ಬರೆಯಲಾಗಿದೆ. ಅದರಲ್ಲಿ ಪ್ರಸ್ತುತ ವಿಚಾರಗಳ ಬಗ್ಗೆ ತಿಳಿಸಲಾಗಿದೆ. ಮುಂದಕ್ಕೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಹೇಳಲಾಗಿದೆ ಎಂದರು.
ಅಧಿಕಾರಿಗಳ ತಪ್ಪೇನಿದೆ?: ಡಿಕೆಶಿ
ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತೇ, ಇದರಲ್ಲಿ ಅಧಿಕಾರಿಗಳ ಲೋಪವಿದೆಯೇ ಎಂದು ಕೇಳಿದಾಗ 70 ವರ್ಷದ ಹಳೆಯ ತಂತ್ರಜ್ಞಾನ. ಎಲ್ಲ ಗೇಟ್‌ಗಳು ಸರಿಯಿವೆ. ಇದೊಂದು ಮಾತ್ರ ಒತ್ತಡ ತಡೆಯಲಾರದೆ ಅವಘಡ ಸಂಭವಿಸಿದೆ. ಇದರಲ್ಲಿ ಅಧಿಕಾರಿಗಳ ತಪ್ಪೇನಿದೆ? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರಲ್ಲದೆ, ಇದು ಒಬ್ಬರನ್ನೊಬ್ಬರು ದೂಷಣೆ ಮಾಡುವಂತಹ ಸಮಯವಲ್ಲ. ನೀರು ಹಾಗೂ ಅಣೆಕಟ್ಟು ಎರಡೂ ಉಳಿಯಬೇಕು. 70 ವರ್ಷದ ಹಳೆಯ ಅಣೆಕಟ್ಟಾದ ಕಾರಣ ಈ ಅವಘಡ ನಡೆದಿದೆ. ನಮ್ಮ ಬಳಿ ಎಲ್ಲ ನಕ್ಷೆ, ದಾಖಲೆಗಳು ಇದ್ದ ಕಾರಣಕ್ಕೆ ಬೇಗ ಕೆಲಸವಾಗುತ್ತಿದೆ. ಸುರಕ್ಷತ ಸಮಿತಿ ಮೊದಲೇ ವರದಿ ಕೊಟ್ಟಿತ್ತು ಎಂಬುದು ಸುಳ್ಳು ಎಂದರು.
ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರೆಸ್ಟ್‌ಗೇಟ್ ಮುರಿದಿರುವ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿರುವುದು ಸರಿಯಲ್ಲ, ಡ್ಯಾಂ ನಿರ್ವಹಣೆಯನ್ನು ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ಬಿಜೆಪಿಗರು ತಿಳಿದುಕೊಳ್ಳಲಿ . ಈ ವಿಚಾರದಲ್ಲಿ ಬಿಜೆಪಿ ನಾಯಕರ ರಾಜಕಾರಣ ನೋವು ತರಿಸಿದೆ. ಜಗದೀಶ್ ಶೆಟ್ಟರ್ ಮಾಜಿ ಸಿಎಂ. ಅಂಥವರು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಟಿಬಿ ಡ್ಯಾಂ ಯಾರ ಅಧಿಧೀನದಲ್ಲಿದೆ ಎಂದು ಬಿಜೆಪಿ ಹೇಳಲಿ. ಕೇಂದ್ರ ಸರಕಾರದ ಅ ಧೀನದಲ್ಲಿರುವ ಅಣೆಕಟ್ಟು ನಿರ್ವಹಣೆಗೆ ಪ್ರತಿ ವರ್ಷ ರಾಜ್ಯ ಸರಕಾರ ಹಣ ಒದಗಿಸುತ್ತಿದೆ. ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರು, ಪ್ರಧಾನಿ ಬಳಿ ಹೋಗಿ ಅಣೆಕಟ್ಟು ನಿರ್ವಹಣೆಗೆ ತಂಡ ರಚಿಸುವಂತೆ ಕೇಳಲಿ.
– ಶಿವರಾಜ್ ತಂಗಡಗಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.