ಮಂಗನ ಕಾಯಿಲೆಗೆ ಸಾಗರ ಮಹಿಳೆ ಬಲಿ
Team Udayavani, Jan 12, 2020, 3:00 AM IST
ಸಾಗರ: ಕಳೆದ ವರ್ಷದಿಂದ ಮಲೆನಾಡಿನ ಸಾಗರ ತಾಲೂಕನ್ನು ತೀವ್ರವಾಗಿ ಕಾಡುತ್ತಿರುವ ಮಂಗನ ಕಾಯಿಲೆ ಈ ಬಾರಿ ವರ್ಷಾರಂಭದಲ್ಲೇ ಮೊದಲ ಬಲಿ ಪಡೆದಿದೆ. ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಚದರವಳ್ಳಿ ಸಮೀಪದ ಶೀಗೆಮಕ್ಕಿಯ ಹೂವಮ್ಮ (58) ಶನಿವಾರ ಚಿಕಿತ್ಸೆ ಫಲಿಸದೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜ.8ರಂದು ಜ್ವರ ಕಾಣಿಸಿಕೊಂಡಾಗ ಕೆಎಫ್‌ಡಿ ವೈರಸ್ ಸೋಂಕು ತಗುಲಿರಬಹುದು ಎಂಬ ಶಂಕೆಯಿಂದ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ರಕ್ತ ಪರೀಕ್ಷೆ ನಡೆಸಲಾಗಿತ್ತು. ಗುರುವಾರವಷ್ಟೇ ಇವರ ದೇಹದಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಇರುವುದು ದೃಢಪಟ್ಟಿತ್ತು.
ಚಿಕಿತ್ಸೆ ಮುಂದುವರಿದಿದ್ದರೂ ಅವರ ಆರೋಗ್ಯದಲ್ಲಿ ಸುಧಾರಣೆ ಆಗಿರಲಿಲ್ಲ. ಇವರ ಮನೆಯಲ್ಲಿನ ಎಲ್ಲರೂ ಕೆಎಫ್‌ಡಿ ಲಸಿಕೆ ಹಾಕಿಸಿಕೊಂಡಿದ್ದರೂ ಹೂವಮ್ಮ ಮಾತ್ರ ಹಾಕಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಕಳೆದ ವರ್ಷ ತಾಲೂಕಿನ ಅರಳಗೋಡು ಭಾಗದಲ್ಲಿ 23 ಜನ ಕೆಎಫ್‌ಡಿಗೆ ಬಲಿಯಾದುದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.