54 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ
Team Udayavani, Nov 19, 2022, 4:52 PM IST
ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬೆಂಗಳೂರು ವಿಭಾಗದ ಒಂಬತ್ತು ಜಿಲ್ಲೆಗಳ 54 ಸಹಕಾರಿಗಳಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿದರು.
ನಂತರ ಮಾತನಾಡಿದ ಕಾಗೇರಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಉತ್ತಮ ಸಲಹೆಗಳನ್ನು ನೀಡಲು ಈ ಸಹಕಾರ ಸಪ್ತಾಹ ಕಾರ್ಯಕ್ರಮ ಸಾಕ್ಷಿಯಾಗಬೇಕು. ಸಹಕಾರಿ ಸಂಘಗಳು ಜನತೆಯ ವಿಶ್ವಾಸ ಗಳಿಸುವುದರ ಜೊತೆಗೆ ಭಾವನಾತ್ಮಕ ಸಂಬಂಧ ಹೊಂದಿವೆ ಎಂದು ಹೇಳಿದರು.
ಸಹಕಾರಿ ಸಂಘಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ, ರಾಜ್ಯದ 6 ಸಾವಿರಕ್ಕಿಂತ ಹೆಚ್ಚು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ, ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ, ಯಶಸ್ವಿನಿ ಯೋಜನೆ ಮರುಜಾರಿ, 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆಗೆ ಸೋಮಶೇಖರ್ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಮೋರ್ಬಿ ಸೇತುವೆ ದುರಂತಕ್ಕೆ ಸರ್ಕಾರ ಕಾರಣವಲ್ಲವೆಂದು ಜನರಿಗೆ ತಿಳಿದಿದೆ; ಬಿಜೆಪಿ ಅಭ್ಯರ್ಥಿ
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ, ನ.14 ರಿಂದ 20ರವರೆಗೆ ಪ್ರತಿ ವರ್ಷ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಣೆ ಮಾಡಲಾಗುತ್ತದೆ. 20 ವರ್ಷಕ್ಕೂ ಹೆಚ್ಚು ಕಾಲದಿಂದ ಸಹಕಾರ ಸಪ್ತಾಹ ಮಾಡಿಕೊಂಡು ಬಂದಿದ್ದೇನೆ. ಸಹಕಾರ ಮಹಾಮಂಡಳ ಮಾತೃ ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಸಹಕಾರಿ ಕ್ಷೇತ್ರವನ್ನು ಮುನ್ನಡೆಸುವಲ್ಲಿ ಜಿ.ಟಿ.ದೇವೇಗೌಡ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಹಕಾರದಿಂದ ಸಹಕಾರ ಸಚಿವರಾಗಿ ಕೆಲಸ ಮಾಡುತ್ತಿದ್ದೇನೆ. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಅತಿಹೆಚ್ಚು ಸಾಲ ನೀಡಿದ್ದು ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ. ಸಾಲಮನ್ನಾಕ್ಕಾಗಿ ಬಜೆಟ್ ನಲ್ಲಿ ಹಣ ಒದಗಿಸಿ ಐತಿಹಾಸಿಕ ತೀರ್ಮಾನ ಮಾಡಿದ್ದು ಯಡಿಯೂರಪ್ಪ ಅವರು. ಕಾಂಗ್ರೆಸ್ ಸರ್ಕಾರ ಯಶಸ್ವಿನಿ ಯೋಜನೆಯನ್ನು ರದ್ದು ಮಾಡಿತು. ಆದರೆ ಬಿಜೆಪಿ ಸರ್ಕಾರ ಅದನ್ನು ಮರುಜಾರಿ ಮಾಡಿದೆ. ಈ ಮೂಲಕ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.
ಹಾಲು ಪೂರೈಸುವ ರೈತರಿಗೆ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಮುಖಾಂತರ ಸಾಲಸೌಲಭ್ಯ ಕಲ್ಪಿಸಲಾಗುವುದು. ಕ್ಷೇತ್ರದ ಜನತೆಯ ಪ್ರೀತಿ, ವಿಶ್ವಾಸದಿಂದ ಶಾಸಕರಾಗಿ ಆಯ್ಕೆಯಾಗಿ, ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೈಸೂರು ಉಸ್ತುವಾರಿ ಸಚಿವರಾಗಿ ಯಶಸ್ವಿಯಾಗಿ ದಸರಾ ಆಚರಣೆ ಮಾಡಲಾಯಿತು. ಸರ್ಕಾರ, ಪಕ್ಷಕ್ಕೆ ಮುಜಗರವಾಗದಂತೆ ಕೆಲಸ ಮಾಡಿದ್ದೇನೆ. ಯಶವಂತಪುರ ಜನತೆಯ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇನೆ. ದ್ವೇಷದ ರಾಜಕಾರಣ ಮಾಡಿಲ್ಲ, ಮಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.