ಸಹಸ್ರ ಚಂಡಿಕಾ ಯಾಗ ಸಂಪನ್ನ
Team Udayavani, Jan 22, 2020, 3:00 AM IST
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ಕೈಗೊಂಡಿದ್ದ ಸಹಸ್ರ ಚಂಡಿಕಾ ಯಾಗ, ಪೂರ್ಣಾಹುತಿ ಯೊಂದಿಗೆ ಮಂಗಳವಾರ ಸಂಪನ್ನಗೊಂಡಿತು.
ಶ್ರೀ ಮಠದ ಎದುರಿನ ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಜ.17ರಂದು ಎಚ್.ಡಿ.ದೇವೇಗೌಡ ಮತ್ತು ಚನ್ನಮ್ಮ ಚಂಡಿಕಾ ಯಾಗದ ಸಂಕಲ್ಪ ಕೈಗೊಂಡಿದ್ದರು. ಕುಡ್ನಲ್ಲಿ ಲಕ್ಷ್ಮೀ ನಾರಾಯಣ ಸೋಮಯಾಜಿ ನೇತೃತ್ವದ 100 ಋತ್ವಿಜರ ತಂಡ ಯಾಗ ನೆರವೇರಿಸಿತು. ಕಳೆದ 5 ದಿನಗಳಿಂದಲೂ ದೇವೇಗೌಡ ದಂಪತಿ ಶ್ರೀಮಠದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಮೊದಲ ದಿನ ಗಣಪತಿ ಹೋಮ ನಡೆಸಿದ ನಂತರ ಚಂಡಿಕಾಯಾಗ ಆರಂಭಿಸಲಾಗಿತ್ತು. ಯಾಗದ ಪ್ರಯುಕ್ತ ಪ್ರತಿ ದಿನವೂ ಪಾರಾಯಣ, ಜಪ ನಡೆಸಲಾಯಿತು.
ಮಂಗಳವಾರ ಪೂರ್ಣಾಹುತಿಯಲ್ಲಿ ಶ್ರೀ ಶಾರದಾ ಪೀಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಉಪಸ್ಥಿತರಿದ್ದರು. ದೇವೇಗೌಡ ಮತ್ತು ಚನ್ನಮ್ಮ ಅವರೊಂದಿಗೆ ಕುಟುಂಬದ ಎಚ್.ಡಿ.ರೇವಣ್ಣ, ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರಮೇಶ್, ಎಚ್.ಡಿ.ಬಾಲಕೃಷ್ಣ, ಶೈಲಾ, ಅನುಸೂಯಾ, ಸೊಸೆ ಅನಿತಾ ಕುಮಾರಸ್ವಾಮಿ, ಮೊಮ್ಮಕ್ಕಳು ಭಾಗವಹಿಸಿದ್ದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಶಾಸಕ ಟಿ.ಡಿ.ರಾಜೇಗೌಡ, ಜೆಡಿಎಸ್ ಮುಖಂಡರಾದ ಎಚ್.ಜಿ.ವೆಂಕಟೇಶ್, ದಿವಾಕರ ಭಟ್, ಜಿ.ಜಿ.ಮಂಜುನಾಥ್, ಭರತ್‌ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.