ಸಕಾಲ ಸೇವಾ ಆಯೋಗ ಸ್ಥಾಪನೆ: ಸಚಿವ ಸುರೇಶ್ ಕುಮಾರ್
Team Udayavani, Dec 5, 2020, 8:13 AM IST
ಬೆಂಗಳೂರು: ಸಕಾಲ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಮತ್ತು ಉತ್ತರದಾಯಿತ್ವವಾದ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸಕಾಲ ಸೇವಾ ಆಯೋಗವನ್ನು ರಚಿಸಲು ಚಿಂತಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ಶುಕ್ರವಾರ ಸಕಾಲ, ಗ್ರಾಮ-ಒನ್, ಜನಸೇವಕ ಯೋಜನೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಗ್ರಾಮ ಮಟ್ಟದಿಂದಲೂ ಸಕಾಲ ಸೇವೆಗಳನ್ನು ಜನಪ್ರಿಯಗೊಳಿಸುವ ಸಲುವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಅತಿ ಶೀಘ್ರದಲ್ಲಿ ರೂಪಿಸಲಾಗುವುದು. ಇದಕ್ಕಾಗಿ ಸಾರ್ವಜನಿಕ ಕ್ಷೇತ್ರದ ಪ್ರಸಿದ್ಧ ವ್ಯಕ್ತಿಗಳ ಸೇವೆಯನ್ನ ಬಳಸಿಕೊಂಡು ಜನಸಾಮಾನ್ಯರಲ್ಲಿ ಈ ಯೋಜನೆ ಕುರಿತು ಹೆಚ್ಚಿನ ಅರಿವು ಮೂಡಿಸಲಾಗುವುದು ಎಂದರು.
ಸಕಾಲ ಸೇವೆಗಳಿಗೆ ಸಂಬಂಧಿಸಿ ನಾಗರಿಕ ಕೇಂದ್ರಿತ ವ್ಯವಸ್ಥೆ ರೂಪಣೆ, ಶಿಕ್ಷಣ, ಸಂಪರ್ಕ ಬೆಂಬಲ, ದೂರು ದುಮ್ಮಾನ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ವ್ಯವಸ್ಥೆ, ನಿರ್ವಹಣ ಮಾಹಿತಿ ವ್ಯವಸ್ಥೆ, ಜ್ಞಾನ ನಿರ್ವಹಣ ವ್ಯವಸ್ಥೆ, ಜಾಗೃತ ದಳ ರಚನೆ, ತಾಂತ್ರಿಕ ಘಟಕ ರಚನೆ, ಸಮನ್ವಯ ಘಟಕ, ತರಬೇತಿ ಘಟಕ, ಕಕ್ಷಿದಾರರ ಸೇವೆ, ಆಡಳಿತ ಘಟಕಗಳನ್ನು ರೂಪಿಸಲಾಗುವುದು ಎಂದರು.
ಜನಸೇವಕ ಪುನರಾರಂಭ
ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಜನಸೇವಕ ಯೋಜನೆಗಳನ್ನು ಶೀಘ್ರದಲ್ಲಿ ಪುನ ರಾರಂಭಗೊಳಿಸಲಾಗುವುದು. ಸರಕಾರವು ದಾವಣ ಗೆರೆ ಜಿಲ್ಲೆಯಲ್ಲಿ ಜಾರಿಗೊಳಿಸಿರುವ ಗ್ರಾಮ-1 ಸೇವೆಗಳನ್ನು ರಾಜ್ಯದೆಲ್ಲೆಡೆ ವಿಸ್ತರಿಸಲು ಕ್ರಿಯಾ ಯೋಜನೆ ರೂಪಿಸಬೇಕು ಎಂದು ನಿರ್ದೇಶನ ನೀಡಿದರು. ಇ-ಆಡಳಿತ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಸಕಾಲ ಮಿಷನ್ ನಿರ್ದೇ ಶಕಿ ಡಾ| ಬಿ. ಆರ್. ಮಮತಾ, ಸೇವಾ ಸಿಂಧು ನಿರ್ದೇಶಕಿ ಸಿಂಧೂ, ವರಪ್ರಸಾದ ರೆಡ್ಡಿ, ಮೇಘನಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.