ಆಪ್ತ ಸಹಾಯಕರಿಗೆ ಬಾರದ ವೇತನ: ಪಕ್ಷಭೇದ ಮರೆತು ಅಸಮಾಧಾನ
Team Udayavani, Nov 16, 2017, 7:32 AM IST
ವಿಧಾನಪರಿಷತ್ತು: ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರಿಗೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಆಪ್ತ ಸಹಾಯಕರಿಗೆ ಕಳೆದ 8-9 ತಿಂಗಳಿಂದ ವೇತನ ನೀಡದಿರುವ ಸರಕಾರದ ಕ್ರಮದ ಬಗ್ಗೆ ಸದಸ್ಯರು ಪಕ್ಷಭೇದ ಮರೆತು ಅಸಮಾಧಾನ ವ್ಯಕ್ತಪಡಿಸಿದರು.
ನಿಯಮ 330ರಡಿ ಬಿಜೆಪಿ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ವಿಷಯ ಪ್ರಸ್ತಾಪಿಸಿ, ವಿಧಾನಸಭೆ, ವಿಧಾನಪರಿಷತ್ ಸದಸ್ಯರು, ಲೋಕಸಭೆ, ರಾಜ್ಯಸಭೆ ಸದಸ್ಯರಿಗೆ ಜಿಲ್ಲಾಧಿಕಾರಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಆಪ್ತ ಸಹಾಯಕರಿಗೆ ವೇತನ ನೀಡಲು ಸರಕಾರಕ್ಕೆ ಸಾಧ್ಯವಾಗಿಲ್ಲ. ಅನುದಾನ ಇಲ್ಲ ಎಂದು ಏಪ್ರಿಲ್‌ನಿಂದ ವೇತನ ನೀಡಿಲ್ಲ ಎಂದು ಆರೋಪಿಸಿದರು.
ವೇತನ ನೀಡುವಂತೆ ಕಂದಾಯ ಕಾರ್ಯದರ್ಶಿಗಳು ಪ್ರಾದೇಶಿಕ ಆಯುಕ್ತರಿಗೆ, ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗೆ ಪತ್ರ ಬರೆಯುತ್ತಾರೆ. ಆದರೆ, ಜಿಲ್ಲಾಧಿಕಾರಿಗಳು ಸರ್ಕಾರ ಅನುದಾನ ನೀಡಿಲ್ಲವೆಂದು ಕಂದಾಯ ಕಾರ್ಯದರ್ಶಿಗೆ ಪತ್ರ ಬರೆಯುತ್ತಾರೆ.
ನೀಡುವುದು ಮಾಸಿಕ 14,500ರೂ.. ಅದು ಹೊರತಾಗಿ ಬೇರೆ ಭತ್ಯೆ ಇಲ್ಲ. ಆದರೂ ವೇತನ ಇಲ್ಲ ಎಂದರು. ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ಸದಸ್ಯರು ಇದಕ್ಕೆ ದನಿಗೂಡಿಸಿ, ಶಾಸಕರ ಆಪ್ತ ಸಹಾಯಕರಿಗೆ ವೇತನ ಇಲ್ಲವೆಂದಾದರೆ ಏನು ಸಂದೇಶ ಹೋಗುತ್ತದೆ? ಇದಕ್ಕಾಗಿ ಚರ್ಚೆ ಅವಶ್ಯಕ ಎಂದರು.
ಕ್ಷಮೆಯಾಚಿಸಿದ ಸಚಿವರು: ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಪ್ರತಿಕ್ರಿಯಿಸಿ, ಪ್ರಸ್ತುತ ಅಗತ್ಯವಿರುವ ಅನುದಾನ 28.80 ಲಕ್ಷ ರೂ. ಆದ್ಯತೆ ಮೇರೆಗೆ ಮರು ಹಂಚಿಕೆಗೆ ಸೂಚಿಸಲಾಗಿದೆ. ಅಲ್ಲದೆ, ಶಾಸಕರ ಆಪ್ತ ಸಹಾಯಕರಿಗೆ ಇದುವರೆಗೆ ವೇತನ ನೀಡದಿರುವುದಕ್ಕೆ ಕ್ಷಮೆ ಯಾಚಿಸುತ್ತೇನೆ ಬಾಕಿ ಇರುವ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.